ಉಡುಪಿ | ಮಲ್ಪೆ ಸಮುದ್ರದಲ್ಲಿ ವಿದೇಶಿ ಬೋಟ್ ಪತ್ತೆ, ಮೂವರು ಪೊಲೀಸ್ ವಶ

Date:

ಉಡುಪಿಯ ಮಲ್ಪೆಯ ಸೈಂಟ್ ಮೇರಿಸ್ ದ್ವೀಪದ ಪರಿಸರದಲ್ಲಿ ಸಂಶಯಾಸ್ಪದವಾಗಿ ಸಂಚರಿಸುತ್ತಿದ್ದ ವಿದೇಶಿ ಬೋಟನ್ನು ಕೋಸ್ಟ್ ಗಾರ್ಡ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಮೀನುಗಾರಿಕಾ ಬೋಟು ಓಮನ್‌ ದೇಶಕ್ಕೆ ಸೇರಿದ್ದಾಗಿದೆ. ಇದರಲ್ಲಿದ್ದ ತಮಿಳುನಾಡು ಮೂಲದ 3 ಜನರನ್ನು ವಶಕ್ಕೆ ಪಡೆಯಲಾಗಿದೆ.

ಸೈಂಟ್ ಮೇರೀಸ್ ದ್ವೀಪದ ಬಳಿ ಈ ಬೋಟನ್ನು ಗಮನಿಸಿದ ಸ್ಥಳೀಯ ಮೀನುಗಾರರು ಕರಾವಳಿ ಕಾವಲು ಪಡೆಗೆ ಮಾಹಿತಿ ನೀಡಿದ್ದರು. ಅದರಂತೆ ಪೊಲೀಸರು ಕಾರ್ಯಾಚಾರಣೆ ನಡೆಸಿ ವಶಕ್ಕೆ ಪಡೆದರು. ಸದ್ಯ ಬಂಧಿತ ತಮಿಳುನಾಡು ಮೂಲದ ಮೂವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕೋಸ್ಟ್ ಗಾರ್ಡ್ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...