ಉಡುಪಿ |ನೌಕಾ ಸೇನೆಯ ಗೌಪ್ಯ ಮಾಹಿತಿ ಪಾಕ್ ಗೆ ಸೋರಿಕೆ : ರೋಹಿತ್‌, ಸಂತ್ರಿ ಬಂಧನ

Date:

ಉಡುಪಿ ಜಿಲ್ಲೆಯ ಮಲ್ಪೆಯಲ್ಲಿರುವ ಕೊಚ್ಚಿನ್‌ ಶಿಪ್‌ಯಾರ್ಡ್‌ ಘಟಕದಲ್ಲಿ ಭಾರತದ ನೌಕಾ ಸೇನೆಗೆ ಸಂಬಂಧಿಸಿದ ಗೌಪ್ಯ ದಾಖಲೆಗಳು ಹಾಗೂ ಹಡಗುಗಳ ಸಂಖ್ಯೆಗಳ ವಿವರಗಳನ್ನು ವಾಟ್ಸಪ್‌ ಮೂಲಕ ಅನಧಿಕೃತವಾಗಿ ಹಂಚಿಕೊಂಡ ಪ್ರಕರಣದಲ್ಲಿ ಇಬ್ಬರು ಉತ್ತರಪ್ರದೇಶ ಮೂಲದ ಆರೋಪಿಗಳನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ.

ಕೇಂದ್ರ ಸರ್ಕಾರದ ಬಂದರು, ಹಡಗು ಮತ್ತು ಜಲಸಾರಿಗೆ ಸಚಿವಾಲಯದ ಅಧೀನದಲ್ಲಿರುವ ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ನಲ್ಲಿ M/S ಸೂಷ್ಮಾ ಮರೈನ್ ಪ್ರೈವೇಟ್‌ ಲಿಮಿಟೆಡ್ ಸಂಸ್ಥೆಯ ಸಬ್‌ಕಾಂಟ್ರಾಕ್ಟಿನಡಿ ಕೆಲಸ ಮಾಡುತ್ತಿದ್ದ ಆರೋಪಿಗಳಲ್ಲಿ,‌ ಇನ್ಸುಲೇಟರ್‌ ಆಗಿ ಕಾರ್ಯನಿರ್ವಹಿಸುತ್ತಿದ್ದ ಉತ್ತರ ಪ್ರದೇಶದ ಅನಂತರಾಮ್‌ ಭಟ್‌ಪುರದ ರೋಹಿತ್‌ (29) ಮತ್ತು ಸುಲ್ತಾನ್‌ಪುರ ಜಿಲ್ಲೆಯ ಸಂತ್ರಿ (37) ಎಂದು ತಿಳಿದುಬಂದಿದೆ.

ಬಂಧಿತ ರೋಹಿತ್‌ ಹಿಂದಿನ ದಿನಗಳಲ್ಲಿ ಕೇರಳದ ಕೊಚ್ಚಿನ್‌ ಶಿಪ್‌ಯಾರ್ಡ್‌ ಲಿಮಿಟೆಡ್‌ನಲ್ಲಿ ಕೆಲಸ ಮಾಡುತ್ತಿದ್ದಾಗ, ನೌಕಾಸೇನೆಗೆ ಸಂಬಂಧಿಸಿದ ಹಡಗುಗಳ ಗೌಪ್ಯ ಸಂಖ್ಯೆಗಳು ಹಾಗೂ ಸೂಕ್ಷ್ಮ ಮಾಹಿತಿ ವಾಟ್ಸಪ್‌ ಮೂಲಕ ಅನಧಿಕೃತ ವ್ಯಕ್ತಿಗಳಿಗೆ ಹಂಚಿಕೊಂಡು ಅಕ್ರಮ ಲಾಭ ಪಡೆದುಕೊಂಡಿದ್ದಾನೆ. ಅಧಿಕೃತ ಮಾಹಿತಿ ಪ್ರಕಾರ ನೆರೆ ರಾಷ್ಟ್ರ ಪಾಕಿಸ್ತಾನಕ್ಕ ಮಾಹಿತಿಯನ್ನು ಸೋರಿಕೆ ಮಾಡಿದ್ದಾರೆ ಎಂದು ಉಡುಪಿ ಜಿಲ್ಲಾ ಪೊಲೀಸ್‌ ಅಧೀಕ್ಷಕರಾದ ಹರಿರಾಂ ಶಂಕರ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲ್ಪೆಯಲ್ಲಿರುವ ಹೊಸ ಘಟಕಕ್ಕೆ ಹುದ್ದೆ ಬದಲಾವಣೆಗೊಂಡ ನಂತರವೂ, ಆತನು ಕೊಚ್ಚಿಯಲ್ಲಿರುವ ತನ್ನ ಸ್ನೇಹಿತರಿಂದ ನೌಕಾಸೇನೆಗೆ ಸಂಬಂಧಿಸಿದ ಮಾಹಿತಿಯನ್ನು ಪಡೆದು ಮತ್ತೆ ವಾಟ್ಸಪ್‌ ಮೂಲಕ ಅನಧಿಕೃತ ವ್ಯಕ್ತಿಗಳಿಗೆ ಹಂಚಿಕೊಂಡಿದ್ದಾನೆ. ಈ ಕೃತ್ಯವು “ಭಾರತದ ಸಾರ್ವಭೌಮತೆ, ಏಕತೆ, ಅಖಂಡತೆ ಹಾಗೂ ಆಂತರಿಕ ಭದ್ರತೆಗೆ ಗಂಭೀರ ಅಪಾಯ ತಂದೊಡ್ಡುವ” ಚಟುವಟಿಕೆ ಎಂದು ದೂರಿನಲ್ಲಿ ಸ್ಪಷ್ಟವಾಗಿದೆ.

ಉಡುಪಿ ಕೊಚ್ಚಿನ್‌ ಶಿಪ್‌ಯಾರ್ಡ್‌ನ ಸಿಇಓ ನೀಡಿದ ದೂರಿನ ಆಧಾರದ ಮೇಲೆ ಮಲ್ಪೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡ ಉಡುಪಿ ಪೊಲೀಸರು, ಕಾರ್ಕಳ ಉಪವಿಭಾಗದ ಸಹಾಯಕ ಪೊಲೀಸ್‌ ಅಧೀಕ್ಷಕ ಹರ್ಷ ಪ್ರಿಯಂವದಾ, ಐಪಿಎಸ್ ಅವರ ನೇತೃತ್ವದಲ್ಲಿ ಮಲ್ಪೆ ಪಿಎಸ್‌ಐ ಅನೀಲ್‌ ಕುಮಾರ್ ಡಿ, ಎಎಸ್‌ಐ ಹರೀಶ್‌, ಪಿಸಿ ರವಿ ಜಾಧವ್‌ ಸೇರಿದಂತೆ ವಿಶೇಷ ತಂಡ ಆರೋಪಿಗಳನ್ನು ಬಂಧಿಸಿದೆ.

ಬಂಧಿತ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...