ಉಡುಪಿ | ಜಾತಿ ನಿಂದನೆ ಕೇಸ್ ವಾಪಾಸು ಪಡೆಯುವಂತೆ ಸಂತ್ರಸ್ತೆ ಲಕ್ಕೀಬಾಯಿ ಡಿಸಿಗೆ ಮನವಿ

Date:

ಉಡುಪಿ ಜಿಲ್ಲೆಯ ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ನಡೆದ ದಲಿತ ಮಹಿಳೆಯ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲ್ಲೆ ಮಾಡಿದವರ ಮೇಲೆ ದಾಖಲಿಸಿದ ಪ್ರಕರಣಗಳನ್ನು ಹಿಂಪಡೆಯುವಂತೆ ಆಗ್ರಹಿಸಿ ಸಂತ್ರಸ್ತೆ ಲಕ್ಕವ್ವ ಬಾಯಿ ನೇತೃತ್ವದಲ್ಲಿ ಸಮುದಾಯದವರು ಜಿಲ್ಲಾಧಿಕಾರಿ ಡಾ ಕೆ.ವಿದ್ಯಾಕುಮಾರಿ ಅವರಿಗೆ ಇಂದು ಮನವಿ ಸಲ್ಲಿಸಿದ್ದಾರೆ.

ಹಲವು ವರ್ಷಗಳಿಂದ ವಿವಿಧ ಜಿಲ್ಲೆಗಳಿಂದ ಉದ್ಯೋಗ ಅರಸಿಕೊಂಡು ಉಡುಪಿಗೆ ಬಂದು ಮಲ್ಪೆ ಮೀನುಗಾರರ ಸಂಘದ ಸಹಕಾರದಿಂದ ಮಲ್ಪೆ ಬಂದರಿನಲ್ಲಿ ಕೆಲಸ ಮಾಡಿಕೊಂಡಿದ್ದೇವೆ. ಇತ್ತೀಚೆಗೆ ಆಕಸ್ಮಿಕವಾಗಿ ನಡೆದ ಘಟನೆಯ ಅನಂತರ ನಮ್ಮ ಸಮುದಾಯದ ಪ್ರಮುಖರು ಹಾಗೂ ಮಲ್ಪೆ ಮೀನುಗಾರರ ಸಂಘದ ಪದಾಧಿಕಾರಿಗಳ ನೇತೃತ್ವದಲ್ಲಿ ಈ ಸಮಸ್ಯೆಯನ್ನು ಮಲ್ಪೆ ಪೊಲೀಸ್ ಠಾಣೆಯಲ್ಲಿ ಸೌಹಾರ್ದಯುತವಾಗಿ ಇತ್ಯರ್ಥ ಮಾಡಿಕೊಳ್ಳಲಾಗಿದೆ. ಆದರೂ ಮುಗ್ದ ಮೀನುಗಾರರ ಮೇಲೆ ಕೇಸುಗಳನ್ನು ಹಾಕಿ ಬಂಧಿಸಿರುವುದು ಸರಿಯಲ್ಲ. ಮೀನುಗಾರರ ಮೇಲಿನ ಪ್ರಕರಣಗಳನ್ನು ಹಿಂಪಡೆದು ಸಾವಿರಾರು ಮಂದಿ ಉದ್ಯೋಗ ಅರಸಿ ಬಂದ ನಮ್ಮಂತಹ ಬಡ ಕಾರ್ಮಿಕರಿಗೆ ಸೌಹಾರ್ದಯುತ ರೀತಿಯಲ್ಲಿ ಕೆಲಸ ಮಾಡಿ ಉತ್ತಮ ಜೀವನ ನಡೆಸಲು ಅವಕಾಶ ನೀಡುವಂತೆ ಮನವಿಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...