ಮಲ್ಪೆ ಸಿಎಸ್‌ಪಿ ಠಾಣೆಯಲ್ಲಿ ಮಾನ್ಯ ಡಿವೈಎಸ್‌ಪಿ (CSP) ಅವರ ಅಧ್ಯಕ್ಷತೆಯಲ್ಲಿ, ಠಾಣಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಾಟರ್ ಸ್ಪೋರ್ಟ್ಸ್ ಹಾಗೂ ಪ್ರವಾಸಿ ದೋಣಿ ಮಾಲಕರ ಸಭೆಯನ್ನು ಆಯೋಜಿಸಲಾಯಿತು. ಈ ಸಭೆಯಲ್ಲಿ ಒಟ್ಟು 40ಕ್ಕೂ ಹೆಚ್ಚು ಬೋಟ್ ಮಾಲಕರು ಹಾಜರಿದ್ದರು.
ಸಭೆಯಲ್ಲಿ ಹಾಜರಿದ್ದ ಬೋಟ್ ಮಾಲಕರಿಗೆ ಮಾನ್ಯ ಜಿಲ್ಲಾಧಿಕಾರಿಗಳು ಹಾಗೂ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ನಡೆಸಿದ ಸಭೆಯಲ್ಲಿನ ಸೂಚನೆಗಳು ಮತ್ತು ಮಾರ್ಗಸೂಚಿಗಳನ್ನು ವಿವರವಾಗಿ ತಿಳಿಸಲಾಯಿತು. ಮುಂದಿನ ದಿನಗಳಲ್ಲಿ ಎಲ್ಲಾ ಬೋಟ್, ಕಯಾಕಿಂಗ್ ಹಾಗೂ ಇತರ ವಾಟರ್ ಸ್ಪೋರ್ಟ್ಸ್ ಚಟುವಟಿಕೆಗಳನ್ನು ನಡೆಸುವವರು ಸರಿಯಾದ ಮತ್ತು ಅಗತ್ಯ ದಾಖಲೆಗಳನ್ನು ಕಡ್ಡಾಯವಾಗಿ ಸಿದ್ಧಪಡಿಸಿಕೊಂಡು ಮಾತ್ರ ಕಾರ್ಯನಿರ್ವಹಿಸಬೇಕು ಎಂದು ಸ್ಪಷ್ಟ ಸೂಚನೆ ನೀಡಲಾಯಿತು.
ಪ್ರವಾಸಿಗರ ಸುರಕ್ಷತೆ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಭೆಯಲ್ಲಿ ಬೋಟ್ ಮಾಲಕರಿಗೆ ಎಚ್ಚರಿಕೆ ನೀಡಲಾಯಿತು. ಯಾವುದೇ ರೀತಿಯ ಅಕ್ರಮ ಅಥವಾ ನಿಯಮ ಉಲ್ಲಂಘನೆ ಕಂಡುಬಂದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.





