ಮಲ್ಪೆ ಬಂದರಿನ ಕಚೇರಿಯೊಂದರಲ್ಲಿ ರೈಟರ್ ಆಗಿ ಕೆಲಸ ಮಾಡಿಕೊಂಡಿದ್ದ ಉಡುಪಿ ತಾಲೂಕು ಬಡಾನಿಡಿಯೂರು ಗ್ರಾಮದ ಕದಿಕೆ ನಿವಾಸಿ ನಯನ್ ಕುಮಾರ್ (15 ವರ್ಷ 11 ತಿಂಗಳು) ಎಂಬ ಯುವಕನು ಫೆಬ್ರವರಿ 8 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾ.
ನಾಪತ್ತೆಯಾಗಿರುವ ಯುವಕ 5 ಅಡಿ 10 ಇಂಚು ಎತ್ತರ, ಗೋಧಿ ಮೈಬಣ್ಣ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಪೊಲೀಸ್ ಠಾಣಾಧಿಕಾರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




