ಇತ್ತೀಚಗಷ್ಟೇ ಆಯ್ಕೆಯಾಗಿದ್ದ ಕೋಲಾರ ಜಿಲ್ಲೆಯ ಮಾಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗಾಪುರ ಕಿಟ್ಟಿ ಹಾಗೂ ಮಾಸ್ತಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾಮಮೂರ್ತಿಯವರು ಗುರುವಾರ ಶಾಸಕ ಕೊತ್ತೂರು ಮಂಜುನಾಥ್ ಹಾಗೂ ವಿಧಾನ ಪರಿಷತ್ ಸದಸ್ಯ ಎಂ ಎಲ್ ಅನಿಲ್ ಕುಮಾರ್ ಅವರನ್ನು ಸನ್ಮಾನಿಸಿದರು.
ಈ ಸಂದರ್ಭದಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿ, “ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಿಕ್ಕಿರುವ ಅವಕಾಶ ಸದುಪಯೋಗ ಪಡೆದುಕೊಂಡ ತಾಲೂಕು ಮತ್ತು ಜಿಲ್ಲಾದ್ಯಂತ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಕಟ್ಟುವ ಕೆಲಸ ಮಾಡಿ, ಜತೆಗೆ ಸರ್ಕಾರದ ಗ್ಯಾರಂಟಿ ಯೋಜನೆಗಳು ಪ್ರತಿಯೊಬ್ಬರಿಗೂ ತಲುಪುವಂತೆ ಮಾಡಬೇಕು. ಕಾಂಗ್ರೆಸ್ ಜನಪರ ಆಡಳಿತದಿಂದ ಜನರಿಗೆ ಆಗುವ ಅನುಕೂಲತೆಗಳ ಬಗ್ಗೆ ಜನಕ್ಕೆ ತಿಳಿಸಬೇಕು” ಎಂದರು.
ಈ ಸುದ್ದಿ ಓದಿದ್ದೀರಾ? ಚಿಂತಾಮಣಿ | ಬೀದಿಬದಿ ವ್ಯಾಪಾರಸ್ಥರ ತಾತ್ಕಾಲಿಕ ಮಾರಾಟ ಸಮಿತಿ ರಚನೆ: ಅಧ್ಯಕ್ಷರಾಗಿ ಅನ್ಸರ್ ಪಾಷಾ ಆಯ್ಕೆ
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಹೋಬಳ ರೆಡ್ಡಿ, ಪಿ ವಾಸುದೇವ, ಚಂದ್ರಶೇಖರ್ ಯಾದವ್, ದೊಡ್ಡಶಿವಾರ ಹರೀಶ್ ಮೈಲಾಂಡಹಳ್ಳಿ ಮುರುಳಿ ಸೇರಿದಂತೆ ಮುಂತಾದವರು ಇದ್ದರು.





