ರಾಮನಗರ | 4 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಆರೋಪಿ ಬಂಧನ

Date:

ನಾಲ್ಕು ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಕೊಂದ ಘಟನೆ ಬೆಂಗಳೂರು ಸಮೀಪದ ರಾಮನಗರ ಜಿಲ್ಲೆಯಲ್ಲಿ ನಡೆದಿದ್ದು, 34 ವರ್ಷದ ಆರೋಪಿಯನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಆರೋಪಿ ಇರ್ಫಾನ್ ಖಾನ್ ಬಾಲಕಿಯ ದೂರದ ಸಂಬಂಧಿಯಾಗಿದ್ದು, ಬಾಲಕಿಗೆ ಐಸ್‌ಕ್ರೀಮ್ ಕೊಡಿಸುವ ಆಮಿಷ ಒಡ್ಡಿ ಅತ್ಯಾಚಾರ ಮತ್ತು ಕೊಲೆ ಮಾಡಿದ್ದಾನೆ. ಮೃತದೇಹವನ್ನು ರಸ್ತೆಬದಿಯಲ್ಲಿ ಎಸೆದಿದ್ದಾನೆ ಎಂದು ವರದಿಯಾಗಿದೆ.

ಬಾಲಕಿಯ ತಾಯಿ ಶನಿವಾರ ಸಂಜೆಯವರೆಗೂ ತನ್ನ ಮಗಳ ಹುಡುಕಾಟ ನಡೆಸಿದ್ದಾರೆ. ನೆರೆಹೊರೆಯಲ್ಲಿದ್ದ ಹಲವಾರು ಮಂದಿಯ ಬಳಿ ಕೇಳಿದಾಗ ಕೊನೆಯದಾಗಿ ಬಾಲಕಿಯನ್ನು ಆರೋಪಿ ಇರ್ಫಾನ್ ಜೊತೆ ನೋಡಿರುವುದಾಗಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಚಲಿಸುತ್ತಿದ್ದ ಕಾರಿನಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಇಬ್ಬರು ಕಾಮುಕರ ಬಂಧನ

ಇರ್ಫಾನ್‌ಗೆ ಬಾಲಕಿಯ ತಾಯಿ ಕರೆ ಮಾಡಿದಾಗ ಆತ ತಬ್ಬಿಬ್ಬಾಗಿ ತನ್ನ ಮೊಬೈಲ್ ಫೋನ್ ಅನ್ನು ಸ್ವಿಚ್ ಆಫ್ ಮಾಡಿಕೊಂಡಿದ್ದಾನೆ ಎಂದು ವರದಿಯಾಗಿದೆ. ತನ್ನ ಮಗಳು ನಾಪತ್ತೆಯಾಗಿರುವ ಬಗ್ಗೆ ತಾಯಿ ಪೊಲೀಸರಿಗೆ ದೂರು ನೀಡಿದ್ದು, ಈ ವೇಳೆಯೇ ರಸ್ತೆ ಬದಿಯಲ್ಲಿ ಬಾಲಕಿಯ ಮೃತದೇಹ ಕಂಡುಬಂದಿದೆ.

ಸಿಸಿಟಿವಿ ದೃಶ್ಯ ಮತ್ತು ಇತರ ತಾಂತ್ರಿಕ ಸುಳಿವುಗಳನ್ನು ಅನುಸರಿಸಿದ ಪೊಲೀಸರು ಆರೋಪಿಯನ್ನು ಬೆಂಗಳೂರಿನ ಕಲಾಸಿಪಾಳ್ಯದಲ್ಲಿ ಬಂಧಿಸಿದ್ದಾರೆ.

ಆರೋಪಿ ದಿನಗೂಲಿ ಕಾರ್ಮಿಕನಾಗಿದ್ದು ಆಗಾಗ್ಗೆ ಸಂತ್ರಸ್ತೆಯ ಮನೆಗೆ ಭೇಟಿ ನೀಡುತ್ತಿದ್ದ. ಈ ಹಿಂದೆ ಜೇಬುಗಳ್ಳತನ ಪ್ರಕರಣಗಳಲ್ಲಿ ಬಂಧಿತನಾಗಿದ್ದ. ಪೊಲೀಸರು ಆತನ ಮೇಲೆ ಅಪಹರಣ ಮತ್ತು ಕೊಲೆ ಪ್ರಕರಣ ದಾಖಲಿಸಿದ್ದಾರೆ. ಪೋಕ್ಸೊ ಕಾಯ್ದೆ ಕೂಡಾ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...