ಕಲಬುರಗಿ | ಜಿಲ್ಲಾ ಕೋರ್ಟ್ ಆವರಣದಲ್ಲಿ ವ್ಯಕ್ತಿ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ

Date:

ವೈಯಕ್ತಿಕ ದ್ವೇಷದ ಹಿನ್ನೆಲೆ ವ್ಯಕ್ತಿಯೊಬ್ಬರ ಮೇಲೆ ಮೂವರು ದುಷ್ಕರ್ಮಿಗಳು ಜಿಲ್ಲಾ ಕೋರ್ಟ್‌ ಆವರಣದಲ್ಲೇ ಮಾರಕಾಸ್ತ್ರಗಳಿಂದ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.

ಸೋಮವಾರ ಘಟನೆ ನಡೆಸಿದ್ದು, ಘಟನೆಯಲ್ಲಿ ಧೀರಜ್ ಎಂಬಾತ ಗಂಭೀರ ಗಾಯಗೊಂಡಿದ್ದಾರೆ. ಗಾಯಗೊಂಡಿದ್ದ ಧೀರಜ್‌ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧೀರಜ್ ಮೇಲೆ ಪ್ರಶಾಂತ್ ಪಾಟೀಲ್ (20), ವೀರೇಶ್ ಪಾಟೀಲ್ (19), ರಾಮು ಪಾಟೀಲ್ (38) ಎಂಬ ಆರೋಪಿಗಳು ಹಲ್ಲೆ ನಡೆಸಿದ್ದಾರೆ ಎಂದು ವರದಿಯಾಗಿದೆ.

ವೈಯಕ್ತಿಕ ದ್ವೇಷದಿಂದ ಆರೋಪಿಗಳು ದಾಳಿ ನಡೆಸಿದ್ದಾರೆ ಎಂದು ಹೇಳಲಾಗಿದೆ. ಹಲ್ಲೆ ವೇಳೆ ಕೋರ್ಟ್‌ ಆವರಣದಲ್ಲಿದ್ದ ಸಾರ್ವಜನಿಕರು ಆರೋಪಿಗಳನ್ನು ಹಿಡಿದು ಪೊಲೀಸರಿಗೆ ಒಪ್ಪಿದ್ದಾರೆ. ಕಲಬುರಗಿಯ ಸ್ಟೇಷನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...