ಕಲಬುರಗಿ | ಮನರೇಗಾ ಕಾರ್ಮಿಕ ಸಾವು; 2 ಲಕ್ಷ ರೂ. ಪರಿಹಾರಕ್ಕೆ ಆಗ್ರಹ

Date:

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರ ಪ್ರಾಣಕ್ಕೆ ಕುತ್ತು ತರುವಂತಹ ಎನ್‍ಎಂಎಸ್ ರದ್ದುಗೊಳಿಸಿ, ಕಮಲಾಪುರದಲ್ಲಿ ಮೃತಪಟ್ಟ ನರೇಗಾ ಕಾರ್ಮಿಕ ಸಂತ್ರಸ್ತ ಕುಟುಂಬಕ್ಕೆ ಕೂಡಲೇ 2 ಲಕ್ಷ ರೂ. ಪರಿಹಾರ ನೀಡಿ, ದುಡಿಯುವ ಸ್ಥಳದಲ್ಲಿ ಜೀವರಕ್ಷಕ ಸೌಲಭ್ಯಗಳನ್ನು ಕಡ್ಡಾಯವಾಗಿ ಒದಗಿಸಬೇಕು ಎಂದು ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಉಪಾಧ್ಯಕ್ಷೆ ನೀಲಾ ಕೆ. ಆಗ್ರಹಿಸಿದರು.

ಕಲಬುರಗಿ ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಕಮಲಾಪುರ ತಾಲೂಕಿನ ವಿಕೆ ಸಲಗರ್ ಗ್ರಾಮದ ಚನ್ನಪ್ಪ ನಾಗಪ್ಪ ಎಂಬುವರು ಉದ್ಯೋಗ ಖಾತ್ರಿ ಕೆಲಸ ಮಾಡುವಾಗಲೇ ತಲೆಸುತ್ತು, ಎದೆನೋವು ಕಾಣಿಸಿಕೊಂಡು ಫೆ.21ರಂದು ಮಧ್ಯರಾತ್ರಿ ಮನೆಯಲ್ಲಿ ಮೃತಪಟ್ಟಿದ್ದಾರೆ” ಎಂದು ವಿಷಾದ ವ್ಯಕ್ತಪಡಿಸಿದರು.

“ಚನ್ನಪ್ಪ ಉದ್ಯೋಗ ಖಾತ್ರಿ ಕೆಲಸವನ್ನು ಪೂರ್ಣವಾಗಿ ಮಾಡಿದ್ದಾನೆ. ಅಲ್ಲಿಯೇ ತಲೆ ಸುತ್ತು ಬಂದಿರುವ ಕುರಿತು ತನ್ನ ಸಹುದ್ಯೋಗಿಗಳ ಮುಂದೆ ಹೇಳಿಕೊಂಡಿದ್ದಾನೆ. ಉಳಿದೆಲ್ಲ ಕಾರ್ಮಿಕರು ಮನರೇಗಾದ ವರದಿ ಮಾಡಿದರೂ ಒಂದು ಗಂಟೆಗೆ ಕೆಲಸದ ಕಡೆಯ ಭಾವಚಿತ್ರ (ಎನ್‍ಎಂಎಂಎಸ್) ತೆಗೆದ ಮೇಲೆ ಮಧ್ಯಾಹ್ನ 2 ಗಂಟೆಗೆ ಮನೆಗೆ ಹೋಗಿದ್ದಾನೆ. ಕೆಲಸ ಮುಗಿದ ಮೇಲೂ ಭಾವಚಿತ್ರಕ್ಕಾಗಿ ಕಾಯ್ದು ಕುಳಿತಿದ್ದಾನೆ. ಕೊನೆಯ ಭಾವಚಿತ್ರ ತೆಗೆದುಕೊಳ್ಳದೇ ಇದ್ದರೆ ಕೆಲಸ ಮಾಡಿದ ಕೂಲಿ ಸಿಗುವುದಿಲ್ಲ ಕೆಲಸಕ್ಕೆ ಹೋಗುವಾಗಲೂ ತಲೆಸುತ್ತು ಎಂದು ನರಳಿದ್ದಾನೆ. ಅಂದು ಬಿಸಿಲು 40 ಡಿಗ್ರಿ ಸೆಲ್ಸಿಯಸ್ ಇದ್ದು, ಕೆಲಸದ ಸ್ಥಳದಲ್ಲಿ ಟೆಂಟ್ ಆಗಲಿ, ಕುಡಿಯುವ ನೀರಿನ ಟ್ಯಾಂಕ್ ಆಗಲಿ ಇಲ್ಲ. ಪ್ರಾಥಮಿಕ ಚಿಕಿತ್ಸಾ ಪೆಟ್ಟಿಗೆಯೂ ಸಹ ಇರಲಿಲ್ಲ. ಹೀಗಾಗಿ ಆತನ ರಕ್ತದೊತ್ತಡ 195ರಷ್ಟು ಹೆಚ್ಚಳವಾಗಿ ಸಾವನಪ್ಪಿದ್ದಾನೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮೃತ ಕೂಲಿಕಾರ ಚನ್ನಪ್ಪನವರ ಕುಟುಂಬಕ್ಕೆ 2 ಲಕ್ಷ ರೂ. ಪರಿಹಾರ ಕೊಡಬೇಕು. ದುಡಿಯುವ ಸ್ಥಳದಲ್ಲಿ ಎಲ್ಲ ಜೀವರಕ್ಷಕ ಕ್ರಮಗಳನ್ನು ಕಡ್ಡಾಯವಾಗಿ ಕೈಗೊಳ್ಳುವಂತೆ, ಮಾರ್ಚ್ 31ರವರೆಗೆ ಕೆಲಸ ಬಯಸುವ ಎಲ್ಲ ಕುಟುಂಬಗಳು ಈಗಾಗಲೇ ಇರುವ 100 ಮಾನವ ದಿನಗಳನ್ನು ಒದಗಿಸುವಂತೆ, ಬಾಕಿ ಇರುವ ಕೂಲಿಯ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ, ದಿನದ ಕೂಲಿಯನ್ನು 700ರೂ.ಗಳಿಗೆ ಹೆಚ್ಚಿಸಿ, ಮಾನವ ದಿನಗಳನ್ನೂ ಸಹ 200 ದಿನಗಳಿಗೆ ಹೆಚ್ಚಿಸಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ವಿರುದ್ಧ ʼರಾಷ್ಟ್ರೀಯ ಭದ್ರತಾ ಕಾಯ್ದೆʼ ಅಸ್ತ್ರ ಪ್ರಯೋಗ; ಪ್ರಜಾಪ್ರಭುತ್ವದ ಅಣಕ

ಸುದ್ದಿಗೋಷ್ಠಿಯಲ್ಲಿ ರಾಜ್ಯ ಸಹ ಕಾರ್ಯದರ್ಶಿ  ಚಂದಮ್ಮ ಗೋಳಾ, ರಾಜ್ಯ ಸದಸ್ಯೆ ಪದ್ಮಿನಿ ಕಿರಣಗಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...