ಮಂಡ್ಯ | ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ

Date:

ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆ ತಾಲೂಕಿನ ಹೇಮಗಿರಿ ಬಿಜಿಎಸ್ ಶಾಖಾ ಮಠದಲ್ಲಿ ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ ನಡೆಯಿತು.

ಪಟ್ಟಾಭಿಷೇಕ ಮಹೋತ್ಸವದ ನಿಮಿತ್ತ ಐವತ್ತೊಂದು ಹಿರಿಯ ಆದರ್ಶ ಜೋಡಿಗಳಿಗೆ ಮಠದ ಪ್ರಧಾನ ಕಾರ್ಯದರ್ಶಿ ಡಾ ಜೆ ಎನ್ ರಾಮಕೃಷ್ಣೇಗೌಡ ನೇತೃತ್ವದಲ್ಲಿ ವಿಶೇಷ ಪೂಜೆ ಹಾಗೂ ಅಭಿನಂದನಾ ಸಮಾರಂಭ ಕಾರ್ಯಕ್ರಮ ಅರ್ಥಪೂರ್ಣವಾಗಿ ಜರುಗಿತು.

ಶಾಸಕ ಹೆಚ್ ಟಿ ಮಂಜು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, “ಶ್ರೀಗಳು ನಾಡು ಕಂಡ ಅಪ್ರತಿಮ ಕಾಯಕ ಯೋಗಿ, ಸಂತ ಶ್ರೇಷ್ಠರ 51ನೇ ವರ್ಷದ ಪಟ್ಟಾಭಿಷೇಕದ ಸುಸಂದರ್ಭದಲ್ಲಿ ಸ್ಮರಿಸುವುದು ನಮ್ಮೆಲ್ಲರ ಪುಣ್ಯ. ಕುವೆಂಪು ಅವರಂತೆ ವಿಶ್ವಮಾನವ ಪರಿಕಲ್ಪನೆಯನ್ನು, ಬಸವಣ್ಣನವರಂತೆ ಸರ್ವರಿಗೂ ಸಮಬಾಳು ಎಂಬಂತೆ ಸಮಾಜದ ಏಳಿಗೆಗೆ ದುಡಿದವರು ಶ್ರೀಗಳು” ಎಂದು ಸ್ಮರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶ್ರೀಗಳು ಸಮಾಜದ ಸುಧಾರಕರಾಗಿ, ಜಾತಿ ಧರ್ಮ ಭೇದ ಮರೆತು ಲಕ್ಷಾಂತರ ವಿದ್ಯಾರ್ಥಿಗಳಿಗೆ ಅಕ್ಷರ ನೀಡಿ, ಅನ್ನದಾಸೋಹದ ಮೂಲಕ ಬದುಕು ಕಟ್ಟಿಕೊಟ್ಟವರು. ಸಮಾಜದಲ್ಲಿ ಬದುಕುವ ರೀತಿ ಮತ್ತು ಸಮಾಜ ಸುಧಾರಣೆಗೆ ಹಲವಾರು ಮೌಲ್ಯಯುತ ಸಲಹೆ ಮತ್ತು ಸಹಕಾರವನ್ನು ಶ್ರೀ ಮಠದ ಮೂಲಕ ಮಾಡಿದ್ದಾರೆ” ಎಂದು ಹೇಳಿದರು.

ಶಾಖಾ ಮಠದ ಪ್ರಧಾನ ಕಾರ್ಯದರ್ಶಿ ಡಾ ಜೆ ಎನ್ ರಾಮಕೃಷ್ಣೇಗೌಡ ಮಾತನಾಡಿ, “ಶ್ರೀಗಳ 51ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವದ ಅಂಗವಾಗಿ ಶ್ರೀಗಳ ಆದರ್ಶಗಳನ್ನು ಮೈಗೂಡಿಸಿಕೊಂಡು, ಶ್ರೀಗಳ ಆಶೀರ್ವಾದದೊಂದಿಗೆ ಪ್ರತಿ ವರ್ಷದಂತೆ ಈ ವರ್ಷವೂ ವಿನೂತನವಾಗಿ 51 ಜೋಡಿ ಹಿರಿಯ ಆದರ್ಶ ದಂಪತಿಗಳಿಗೆ ಅಭಿನಂದನೆ ಸಮಾರಂಭ ಆಯೋಜಿಸಿದ್ದೇವೆ. ಯುವಸಮುದಾಯಕ್ಕೆ ಮಾದರಿಯಾಗಿರುವ ದಂಪತಿಗಳನ್ನು ಗೌರವಿಸುವುದು ನಮ್ಮ ಕರ್ತವ್ಯ” ಎಂದರು.

ಕೆ ಆರ್ ನಗರ ಕಾಗಿನಲೆ ಮಹಾಸಾನಸ್ಥಾನ ಶಾಖಾ ಮಠದ ಪೀಠಾಧ್ಯಕ್ಷ ಶ್ರೀ ಶಿವಾನಂದಪುರಿ, ಕಾಪನಹಳ್ಳಿ ಗವಿಮಠ ಪೀಠಾಧ್ಯಕ್ಷ ಶ್ರೀ ಸ್ವತಂತ್ರ ಚನ್ನವೀರ ಸ್ವಾಮೀಜಿ, ತೆಂಡೇಕೆರೆ ಬಾಳೆಹೊನ್ನೂರು ಶಾಖಾ ಮಠದ ಅಧ್ಯಕ್ಷ ಶ್ರೀ ಗಂಗಾಧರ್ ಶಿವಚಾರ್ಯ ಸ್ವಾಮಿಜೀ, ಬೇಬಿ ಶ್ರೀರಾಮ ಯೋಗಿಶ್ವರ ಮಠದ ಅಧ್ಯಕ್ಷ ಶ್ರೀ ಶಿವಬಸವ ಸ್ವಾಮೀಜಿ, ಎಲೆರಾಮಪುರ ಕುಂಚಟಿಗ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷ ಶ್ರೀ ಹನುಮಂತನಾಥ ಸ್ವಾಮೀಜಿ, ಶ್ರವಣಬೆಳಗೊಳ ಶ್ರೀ ಚೌಡೇಶ್ವರಿದೇವಿ ಮಹಾಸಂಸ್ಥಾನ ಮಠದ ಅಧ್ಯಕ್ಷ ಶ್ರೀ ಬಸವೇಶ್ವರ ಚೈತನ್ಯ ಸ್ವಾಮೀಜಿ, ಅಮೃತೂರು ವೇದವ್ಯಾಸ ಮಠದ ಅಧ್ಯಕ್ಷ ಶ್ರೀ ಬಸವನಂದ ಸ್ವಾಮೀಜಿ, ಕಾರ್ಯಕ್ರಮದ ದಿವ್ಯ ಸಾನಿಧ್ಯ ವಹಿಸಿ ಶ್ರೀಗಳ ಪುತ್ಥಳಿಗೆ ವಿವಿಧ ಬಗೆಯ ಅಭಿಷೇಕ, ಹೋಮ, ಹವನ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಆಶೀರ್ವಚನ ನೀಡಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸರ್ಕಾರಿ ಭೂಮಿ ಕಬಳಿಸಿ, ಬಿಜೆಪಿ ಮುಖಂಡನಿಂದ ಅಕ್ರಮ ಮಾರಾಟ: ಮಹಾವೀರ್ ಆರೋಪ

ಕಾರ್ಯಕ್ರಮದಲ್ಲಿ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್, ಮನ್ಮುಲ್ ನಿರ್ದೇಶಕ ಡಾಲು ರವಿ, ಪಿಎಲ್‌ಡಿ ಬ್ಯಾಂಕ್ ಮಾಜಿ ಅಧ್ಯಕ್ಷ ಬಂಡಿಹೊಳೆ ಅಶೋಕ್, ಕಸಪಾ ಮಾಜಿ ಅಧ್ಯಕ್ಷ ಹರಿಚರಣ್ ತಿಲಕ್, ಪುರಸಭೆ ಮಾಜಿ ಸದಸ್ಯ ಕೆ ಆರ್ ನೀಲಕಂಠ, ಹಿರಿಯ ಮುಖಂಡ ಬಂಡಿಹೊಳೆ ರಾಮೇಗೌಡ, ನಾಟನಹಳ್ಳಿ ನಿಂಗೇಗೌಡ, ಪ್ರತಾಪ್, ಗಂಜಿಗೆರೆ ಮಹೇಶ್, ಶೀಳನೆರೆ ಅಜಯ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...