ಮಂಡ್ಯ | ಲಂಚಕ್ಕೆ ಬೇಡಿಕೆ ಆರೋಪ; ಸಚಿವ ಚಲುವರಾಯಸ್ವಾಮಿ ವಿರುದ್ಧ ರಾಜ್ಯಪಾಲರಿಗೆ ದೂರು

Date:

ಕೃಷಿ ಸಚಿವ ಚಲುವರಾಯಸ್ವಾಮಿ ಅವರು ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಆರೋಪಿಸಿ ಮಂಡ್ಯ ಜಿಲ್ಲೆಯ ಏಳು ಮಂದಿ ಸಹಾಯಕ ಕೃಷಿ ಅಧಿಕಾರಿಗಳು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಂದ 6 ರಿಂದ 8 ಲಕ್ಷ ರೂಪಾಯಿ ಲಂಚಕ್ಕೆ ಸಚಿವ ಚಲುವರಾಯಸ್ವಾಮಿ ಅವರು ಬೇಡಿಕೆ ಇಟ್ಟಿದ್ದಾರೆ ಎಂದು ಪತ್ರ ಬರೆಯಲಾಗಿದ್ದು, ಪತ್ರದಲ್ಲಿ ಮಂಡ್ಯ, ಮಳ್ಳವಳ್ಳಿ, ಕೆ ಆರ್ ಪೇಟೆ, ನಾಗಮಂಗಲ, ಮದ್ದೂರು, ಶ್ರೀರಂಗಪಟ್ಟಣ ಮತ್ತು ಪಾಂಡವಪುರ ಕೃಷಿ ಸಹಾಯಕ ಅಧಿಕಾರಿಗಳು ಸಹಿ ಹಾಕಿದ್ದಾರೆ. ಲಂಚಕ್ಕೆ ಕಡಿವಾಣ ಹಾಕದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿಯೂ ಉಲ್ಲೇಖಿಸಿದ್ದಾರೆ.

ಆರೋಪಕ್ಕೆ ಸಂಬಂಧಿಸಿದಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ರಾಜ್ಯಪಾಲರು ಪತ್ರ ಬರೆದಿದ್ದು, ತನಿಖೆ ನಡೆಸಿ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2023 08 07 at 2.48.37 PM

ಇತ್ತೀಚೆಗಷ್ಟೇ ಕೆಎಸ್‌ಆರ್‌ಟಿಸಿ ಬಸ್‌ ಚಾಲಕ ಜಗದೀಶ್‌ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದರು. ವರ್ಗಾವಣೆಗೆ ಸಚಿವರು ಒತ್ತಡ ಹೇರಿದ್ದಾರೆಂದು ಆರೋಪಿಸಿದ್ದ ಜಗದೀಶ್‌ ಡೆಟ್‌ನೋಟ್‌ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ಅವರು ಸಾವಿನಿಂದ ಪಾರಾಗಿದ್ದರು.

ಈ ಪ್ರಕರಣ ಮಾಸುವ ಮುನ್ನವೇ ಚಲುವರಾಯಸ್ವಾಮಿ ವಿರುದ್ಧ ಮತ್ತೊಂದು ಆರೋಪ ಕೇಳಿಬಂದಿದೆ. ತಮ್ಮ ವಿರುದ್ಧದ ಆರೋಪದ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಚಲುವರಾಯಸ್ವಾಮಿ, “ಕೃಷಿ ಜಂಟಿ ನಿರ್ದೇಶಕರ ಜತೆ ಈಗಷ್ಟೇ ಮಾತನಾಡಿದ್ದೇನೆ. ಇದೊಂದು ಫೇಕ್ ಲೆಟರ್ ಎಂದು ಅವರು ಹೇಳಿದ್ದಾರೆ. ಕೆಲವರು ನಮ್ಮ ವಿರುದ್ಧ ಷಡ್ಯಂತ್ರ ಎಣೆಯಲು ಏನೇನೋ ಹುಡುಕುತ್ತಿದ್ದಾರೆ. ಜೆಡಿ ಅವರೂ ಯಾರ ಬಳಿಯೂ ಹಣ ಕೇಳಿಲ್ಲವೆಂದು ಹೇಳುತ್ತಿದ್ದಾರೆ. ಇಲಾಖೆಯಿಂದ ತನಿಖೆ ನಡೆಸುತ್ತೇವೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...