‌ಮಂಡ್ಯ | ಅಂಬೇಡ್ಕರ್ ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ: ಎಂ ಸಿ ಬಸವರಾಜು

Date:

ಅಂಬೇಡ್ಕರ್ ಅವರು 20ನೇ ಶತಮಾನದಲ್ಲಿ ಹುಟ್ಟಿಬಂದು ಸಹೋದರತ್ವ, ಸಹಬಾಳ್ವೆ, ಸಮಾನತೆಯನ್ನು ಸಾರಿದ ಮಹಾಪುರುಷ. ಹಿಂದೂ ಧರ್ಮದಲ್ಲಿ ಸಮಾನತೆ ಕಾಣದೆ ಸಮಾಜಕ್ಕೆ ಪ್ರೀತಿ, ಕರುಣೆ, ವಿಶ್ವಾಸವನ್ನು ಬಿತ್ತುವ ಬೌದ್ಧಧಮ್ಮವನ್ನು ಅಪ್ಪಿಕೊಂಡರು ಎಂದು ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾ ಗೌರವಾಧ್ಯಕ್ಷ ಎಂ ಸಿ ಬಸವರಾಜು ತಿಳಿಸಿದರು.

ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದ ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಡಾ. ಬಿ ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆಯಲ್ಲಿ ಅವರ ಫೋಟೋಗೆ ಪುಷ್ಪಾರ್ಚನೆ ಮಾಡಿ ಮಾತನಾಡಿದರು.

ಡಾ ಬಿ ಆರ್‌ ಅಂಬೇಡ್ಕರ್ ಅವರು ಭಾರತಕ್ಕೆ ಸರ್ವರಿಗೂ ಸಮಪಾಲು ಎಂಬ ತತ್ವದಡಿಯಲ್ಲಿ ಸಂವಿಧಾನ ನೀಡಿದ ಶ್ರೇಷ್ಠ ನಾಯಕ. ಶಾಂತಿ ಸಂಕೇತ ಸಾರಿದ ಬೌದ್ಧಧಮ್ಮ ದೀಕ್ಷೆ ಸ್ವೀಕರಿಸುವ ಮೂಲಕ ಹಿಂದೂವಾಗಿ ಹುಟ್ಟಿದ್ದೇನೆ ಹಿಂದೂವಾಗಿ ಸಾಯಲಾರೆ ಎಂಬ ಮಾತನ್ನು ಸಾಬೀತು ಮಾಡಿದರು ಎಂದು ಸಾಹಿತಿ, ಶಿಕ್ಷಕ ಬಿ ವಿ ನಾರಾಯಣ ಅವರು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಸೋನಿಯಾ, ರಾಹುಲ್‌ ವಿರುದ್ಧ ಇ.ಡಿ ದೋಷಾರೋಪ ಪಟ್ಟಿ ಸಲ್ಲಿಕೆ: ಮೋದಿ-ಅಮಿ‌ತ್‌ ಶಾ ವಿರುದ್ಧ ಸಿಎಂ ಕಿಡಿ

ಸಭೆಯಲ್ಲಿ ಜಿಲ್ಲಾ ಅಧ್ಯಕ್ಷ ಸಿ ಶಿವಲಿಂಗಯ್ಯ, ತಾಲೂಕು ಅಧ್ಯಕ್ಷ ಡಿ ಸಿ ಮಹೇಂದ್ರ, ಪ್ರಧಾನ ಕಾರ್ಯದರ್ಶಿ ಕೆ ಟಿ ಶಿವಕುಮಾರ್ ಉಪಾಧ್ಯಕ್ಷ ಎಂ ಸಿ ಶಿವರಾಜ್, ಅತಗೂರು ವೆಂಕಟಾಚಲಯ್ಯ, ಅಹಿಂದ ಸಂರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಶಶಿ ಕುಮಾರ್ ಪಿ, ಜನಶಕ್ತಿ ಸಂಘಟನೆಯ ನಗರಕೆರೆ ಜಗದೀಶ್, ಉಪಾನ್ಯಾಸಕ ಪೃಥ್ವಿರಾಜ್, ಚಿಕ್ಕಣ್ಣ ಚಾಮನಹಳ್ಳಿ ರಾಚಯ್ಯ, ಸಂತೋಷ್, ಬೂದಗುಪ್ಪೆ ಪುಟ್ಟ, ಪ್ರಸನ್ನ ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...