ಮಂಡ್ಯ | ಕಡತನಾಳು ಶಾಲೆಯಲ್ಲಿ ಡೆಂಘೀ ವಿರೋಧಿ ಮಾಸಾಚರಣೆ

Date:

ಆರೋಗ್ಯ ಮತ್ತು ಕ್ಷೇಮ ಕೇಂದ್ರ, ಬಲ್ಲೇನಹಳ್ಳಿ, ತಾಲೂಕು ಆರೋಗ್ಯ ಕೇಂದ್ರ ಹಾಗೂ ಸಮರ್ಪಣ ಟ್ರಸ್ಟ್ ಇವರ ಸಂಯುಕ್ತ ಆಶ್ರಯದಲ್ಲಿ ಡೆಂಘೀ ವಿರೋಧಿ ಮಾಸಾಚರಣೆಯನ್ನು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಚರಿಸಲಾಯಿತು‌.

ಈ ವೇಳೆ ಮಾತನಾಡಿದ ವಕೀಲರಾದ ಸಿ.ಎಸ್.ವೆಂಕಟೇಶ್, “ಇಪ್ಪತ್ತು ವರ್ಷಗಳ ಹಿಂದೆ ನಮ್ಮ ಊರಿನ ವ್ಯಕ್ತಿಯೊಬ್ಬರಿಗೆ ಜ್ವರ ಬಂದಿತ್ತು. ಆಗ ಕಾಯಿಲೆ ಪರೀಕ್ಷೆ ಮಾಡುವ ವ್ಯವಸ್ಥೆ ಇಲ್ಲಿ ಸ್ಥಳೀಯವಾಗಿ ಇರಲಿಲ್ಲ. ರಕ್ತದ ಮಾದರಿ ತೆಗೆದು ಪುಣೆಗೆ ಕಳುಹಿಸಬೇಕಾಗಿತ್ತು, ಆ ರಕ್ತದ ಮಾದರಿಯ ಫಲಿತಾಂಶ ಡೆಂಘೀ ಅಂತ ಬರಲು ಇಪ್ಪತ್ತು ದಿನ ತೆಗೆದುಕೊಂಡಿತ್ತು. ಅಷ್ಟರಲ್ಲಿ ರೋಗ ಉಲ್ಬಣಗೊಂಡು ನಮ್ಮೂರಿನ ವ್ಯಕ್ತಿ ತೀರಿ ಹೋಗಿದ್ದರು. ಡೆಂಘೀ ಅನ್ನುವಂತ ಖಾಯಿಲೆ ಹೊಸದು, ಹೇಗೆ ನಿಭಾಯಿಸಬೇಕು, ಎಚ್ಚರ ವಹಿಸಬೇಕು ಅನ್ನುವ ತಿಳಿವಳಿಕೆ ಆ ಕಾಲಕ್ಕೆ ಇರಲಿಲ್ಲ. ಈಗ ಸ್ಥಳೀಯವಾಗಿ ವೈದ್ಯಕೀಯ ಸೌಲಭ್ಯ ಹೆಚ್ಚಿವೆ. ಶೀಘ್ರವಾಗಿ ರೋಗ ಪತ್ತೆ ಮಾಡಬಹುದು, ಚಿಕಿತ್ಸೆ ಕೊಡಬಹುದು ಎಲ್ಲ ಇದ್ದಾಗಲೂ ಕೂಡ ಮುನ್ನೆಚ್ಚರಿಕೆಯಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವುದು ಉತ್ತಮ ಮಾರ್ಗ” ಎಂದರು.

ಮಂಡ್ಯ 9

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಡಾ. ರಾಜು ಡೆಂಘೀಯ ಬಗ್ಗೆ ಯಾವ ರೀತಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು  ಮತ್ತು ಚಿಕೂನ್‌ಗುನ್ಯಾ ಜ್ವರ ರೋಗವಾಹಕ ಸೊಳ್ಳೆಗಳಿಂದ ಉಂಟಾಗಬಹುದಾದ ವೈರಸ್ ಜ್ವರಗಳನ್ನು ತಡೆಗಟ್ಟಲು ಸಾರ್ವಜನಿಕರಿಗೆ ಈ ಕೆಳಕಂಡ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ತಿಳಿಸಿದರು.

ವಕೀಲ ಸಿ.ಎಸ್.ವೆಂಕಟೇಶ್, ದರಸಗುಪ್ಪೆ ಪಂಚಾಯಿತಿಯ ಮಾಜಿ ಅಧ್ಯಕ್ಷ ಕೆ.ಸಿ.ಮಾದೇಶ್, ಸಮರ್ಪಣ ಟ್ರಸ್ಟ್ ಅಧ್ಯಕ್ಷ ಕೆ.ಸಿ.ಜಯಶಂಕರ್, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ಡಾ. ರಾಜು, ಸಿಎಚ್ಓ ಡಾ. ಮಹೇಶ್, ಕಿರಿಯ ಆರೋಗ್ಯ ನಿರೀಕ್ಷಾಧಿಕಾರಿ ಡಾ. ಸುವರ್ಣ, ಪಿಎಚ್‌ಸಿಓ ಡಾ. ಪದ್ಮ ಈ ವೇಳೆ ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...