ಮಂಡ್ಯ | ಮದ್ದೂರಿನ ಸೌಹಾರ್ದ-ಸಾಮರಸ್ಯ ನಡಿಗೆ ಯಶಸ್ವಿಗೊಳಿಸಲು ಜನಪರ ಸಂಘಟನೆಗಳ ಮನವಿ

Date:


ಇತ್ತೀಚಿಗೆ ಮದ್ದೂರಿನಲ್ಲಿ ಸಂಭವಿಸಿದ ಗಲಭೆಯ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಸೌಹಾರ್ದತೆ, ಸಾಮರಸ್ಯ ಬೆಳೆಸಲು ಪರಸ್ಪರ ವಿಶ್ವಾಸದಿಂದ ಸಹಬಾಳ್ವೆ ನಡೆಸಲು ಉತ್ತೇಜಿಸುವ ಉದ್ದೇಶದಿಂದ ನಡೆಸಲಾಗುತ್ತಿರುವ ಸೌಹಾರ್ದ- ಸಾಮರಸ್ಯ ನಡಿಗೆಯನ್ನು ಯಶಸ್ವಿಗೊಳಿಸಬೇಕು ಎಂದು ಮಂಡ್ಯ ಜಿಲ್ಲಾ ಜನಪರ ಸಂಘಟನೆಗಳು ಮನವಿ ಮಾಡಿವೆ.

ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಂಘಟನೆಗಳ ಮುಖಂಡರು, “ಜನಪರ ಸಂಘಟನೆಗಳ ಮುಂದಾಳತ್ವದಲ್ಲಿ ಸೆ.22ರ ಸೋಮವಾರದಂದು ನಡೆಯುವ ಈ ಕಾರ್ಯಕ್ರಮದಲ್ಲಿ ನಾಡಿನ ಬುದ್ಧಿಜೀವಿಗಳು, ಬರಹಗಾರರು ಮತ್ತು ಹೋರಾಟಗಾರರು ಭಾಗವಹಿಸಲಿದ್ದಾರೆ. ಅಂದು ಬೆಳಗ್ಗೆ 10.30ಕ್ಕೆ ಟಿ ಬಿ ವೃತ್ತದಲ್ಲಿರುವ ರೈತ ನಾಯಕ ಪ್ರೊ. ಎಂ. ಡಿ. ನಂಜುಂಡಸ್ವಾಮಿಯವರ ಪ್ರತಿಮೆಯ ಬಳಿಯಿಂದ ಆರಂಭಗೊಳ್ಳುವ ನಡಿಗೆ ಮದ್ದೂರಿನ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಐತಿಹಾಸಿಕ ಶಿವಪುರ ಧ್ವಜ ಸತ್ಯಾಗ್ರಹದ ಬಳಿ ಸಮಾವೇಶಗೊಳ್ಳಲಿದೆ”

“ವಿಸ್ತಾರವಾಗುತ್ತ ಹೋಗುವುದು ಜೀವನ, ಸಂಕುಚಿತಗೊಳ್ಳುತ್ತ ಸಾಗುವುದು ಸಾವು; ಪ್ರೀತಿಯೇ ಜೀವನ, ದ್ವೇಷವೇ ಸಾವು ಎಂದರು ಮಹಾನ್ ಸಂತ ವಿವೇಕಾನಂದರು, ಆದರೆ ಈಗ ಆಗುತ್ತಿರುವುದೇನು? ಮತೀಯ ಶಕ್ತಿಗಳು ತಾವೂ ಸಂಕುಚಿತಗೊಳ್ಳುತ್ತ ಜನರನ್ನೂ ಸಂಕುಚಿತಗೊಳಿಸುತ್ತಾ ಸಮೂಹ ನಾಶದೆಡೆಗೆ ಮನುಕುಲವನ್ನು ಕೊಂಡೊಯ್ಯುತ್ತಿದ್ದಾರೆ. ಎಲ್ಲಾ ಧರ್ಮದ, ಜಾತಿಯ ಜನ ಸೇರಿ ಬ್ರಿಟೀಷರ ವಿರುದ್ಧ ತೊಡೆ ತಟ್ಟಿ ತ್ರಿವರ್ಣ ಧ್ವಜ ಹಾರಿಸಿ ಐಕ್ಯತೆ ಮೆರೆದು ವಸಾಹತು ಶಾಹಿಗಳ ದಬ್ಬಾಳಿಕೆ ಮತ್ತು ಕುತಂತ್ರಗಳನ್ನು ಸೋಲಿಸಿದ ಮದ್ದೂರಿನಲ್ಲಿ ಈಗ ಏನಾಗಿದೆ? ಗಣೇಶ ವಿಸರ್ಜನಾ ಮೆರವಣಿಗೆಯ ಮೇಲೆ ಕಿಡಿಗೇಡಿಗಳು ತೂರಿದ ಕಲ್ಲೊಂದು ಕಿಡಿಯಾಗಿ, ಕಾಡ್ಗಿಚ್ಚಾಗಿ ಮನೆ, ಮನೆಗಳನ್ನು ಸುಡುತ್ತಿದೆ. ಜೊತೆಗೆ ಉಟ್ಟ, ಉಂಡ, ಆಟವಾಡಿ ಬದುಕಿದ ಜೀವಗಳು ಪರಸ್ಪರ ಅನುಮಾನದಿಂದ ನೋಡುವ, ದ್ವೇಷಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಕಿಡಿಗೇಡಿಗಳನ್ನು ಕ್ರಿಮಿನಲ್‌ಗಳಾಗಿ ನೋಡುವ ಬದಲು ಅವರನ್ನು ಒಂದು ಧರ್ಮದ ವಾರಸುದಾರರನ್ನಾಗಿ ಮಾಡುವ ಮೂಲಕ ಒಂದಿಡೀ ಧರ್ಮದ ಜನರನ್ನೇ ಕ್ರಿಮಿನಲ್‌ಗಳಾಗಿ ಬಿಂಬಿಸುವ ಕ್ಷುಲ್ಲಕ ರಾಜಕಾರಣ ನಡೆಯುತ್ತಿದೆ”

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆದರೆ, ಮದ್ದೂರಿನ ಮಣ್ಣು ಅಷ್ಟು ಸುಲಭಕ್ಕೆ ಇಂತಹುದಕ್ಕೆ ಬಲಿಯಾಗುವುದಿಲ್ಲ. ಬಲಿಯಾಗಲು ಬಿಡಲೂ ಬಾರದು. ಶೂದ್ರ ಒಕ್ಕಲಿಗರ ಹೊಟ್ಟೆಯಲ್ಲಿ ಹುಟ್ಟಿದರೂ ವಿಶ್ವಮಾನವನಾದ ಕುವೆಂಪು ನಮಗೆ ಆದರ್ಶವಾಗಿದ್ದಾರೆ. ಹಿಂದೂ ಧರ್ಮದ ಮಹಾನ್ ಚೇತನ ವಿವೇಕಾನಂದರ ಆದರ್ಶಗಳು ನಮ್ಮ ಮುಂದಿವೆ. ಕಂದಾಚಾರಗಳನ್ನು ಕಿತ್ತೆಸೆದ ಬಸವಣ್ಣ, ಕುಲದ ನೆಲೆಯನ್ನೇ ಪ್ರಶ್ನಿಸಿದ ಕನಕದಾಸ ನಮ್ಮ ಮುಂದಿನ ಕಂದೀಲುಗಳಾಗಿದ್ದಾರೆ. ಆದರೆ ಮತೀಯ ಶಕ್ತಿಗಳು ಕಂದೀಲು ಬೆಳಕನ್ನು ನುಂಗಿ ನೊಣೆದು ಕತ್ತಲ ಲೋಕವನ್ನು ಸೃಷ್ಟಿಸಲು ಪಣತೊಟ್ಟು ನಿಂತಿದ್ದಾರೆ”

ಇದನ್ನೂ ಓದಿ: ಮಂಡ್ಯ | ಮುಯ್ಯಾಳು ಸಂಸ್ಕೃತಿಯನ್ನು ಮತ್ತೆ ಮುನ್ನೆಲೆಗೆ ತಂದ ಕನ್ನಡದ ಮನಸ್ಸುಗಳು

“ಆದ್ದರಿಂದ, ನಾಗರಿಕರಾದ ನಮ್ಮ ಜವಾಬ್ದಾರಿ ಅಪಾರವಾಗಿದೆ. ಯಾವುದೇ ಧಾರ್ಮಿಕ ಆಚರಣೆಗೆ ಅಡ್ಡಿಪಡಿಸುವ ಕ್ರಿಮಿನಲ್‌ಗಳನ್ನು ಕ್ರಿಮಿನಲ್‌ಗಳಾಗಿಯೇ ನೋಡಬೇಕು. ಬಾಬಾ ಸಾಹೇಬ್ ಅಂಬೇಡ್ಕರ್ ಬರೆದ ಸಂವಿಧಾನ ನೀಡಿರುವ ಕಾನೂನಿನ ವ್ಯಾಪ್ತಿಯಲ್ಲಿ ಕ್ರಿಮಿನಲ್‌ಗಳಿಗೆ ಗರಿಷ್ಠ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು. ಕ್ರಿಮಿನಲ್‌ಗಳನ್ನು ಒಂದು ಧರ್ಮಕ್ಕೆ ಆರೋಪಿಸುವುದು ಕ್ರಿಮಿನಲ್‌ಗಳನ್ನು ರಕ್ಷಿಸುವ ಉದ್ದೇಶವೇ ಆಗಿದೆ. ಆದ್ದರಿಂದ ಇಂತಹ ಹುನ್ನಾರದ ಬಗ್ಗೆ ಎಚ್ಚರಿಕೆಯಿಂದ
ಇರಬೇಕಾಗಿದೆ”

“ಮದ್ದೂರಿನ ಸೌಹಾರ್ದತೆ, ಸಹಬಾಳ್ವೆ, ಸಾಮರಸ್ಯವನ್ನು ಉಳಿಸಿಕೊಳ್ಳಲು, ವಿವೇಕಾನಂದರು ಹೇಳಿದಂತೆ ಪ್ರೀತಿಯೇ ಜೀವನ, ದ್ವೇಷವೇ ಸಾವು ಎಂಬುದನ್ನು ಮನಗಾಣಿಸಲು, ಆ ಮೂಲಕ ಇಡೀ ನಾಡಿಗೆ ಪ್ರೀತಿ ಹಂಚಲು ಈ ನಡಿಗೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆದ್ದರಿಂದ ನಾಗರೀಕರು, ಸಂಘ ಸಂಸ್ಥೆಗಳು, ವಿದ್ಯಾರ್ಥಿ ಯುವಜನ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕು” ಎಂದು ಮನವಿ ಮಾಡಿದ್ದಾರೆ.

ಈ ಜಾಗೃತ ನಡಿಗೆಗೆ ಮಾಜಿ ಪುರಸಭಾ ಅಧ್ಯಕ್ಷ ಎಂ. ಸಿ. ಬಸವರಾಜು, KPRSನ ರೈತ ಮುಖಂಡ ಎಸ್. ವಿಶ್ವನಾಥ್, DSS ನಾಯಕ ಶಿವರಾಜ್ ಮರಳಿಗೆ, ರೈತ ಮುಖಂಡ ಶಂಕರೇಗೌಡ ಬೋರಾಪು ಹಾಗೂ ಜಾಗೃತ ಕರ್ನಾಟಕದ ಜಗದೀಶ್ ನಗರಕೆರೆ ಬೆಂಬಲ ಸೂಚಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...