ಮಂಡ್ಯ | ಗಾರ್ಮೆಂಟ್ಸ್ ನೌಕರರಿದ್ದ ಆಟೋ ಪಲ್ಟಿ; ಹಲವರಿಗೆ ಗಾಯ

Date:

ಗಾರ್ಮೆಂಟ್ಸ್‌ ಕಾರ್ಮಿಕರು ಗಾರ್ಮೆಂಟ್ಸ್‌ನಲ್ಲಿ ಕೆಲಸ ಮುಗಿಸಿ, ತಮ್ಮೂರಿಗೆ ಮರಳುತ್ತಿದ್ದಾಗ ಆಟೋ ಪಲ್ಟಿಯಾಗಿದ್ದು, ಹಲವರು ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ.

ಗೆಜ್ಜಲಗೆರೆ ಕೈಗಾರಿಕಾ ಪ್ರದೇಶದಲ್ಲಿರುವ ಶಾಹಿ ಎಕ್ಸ್‌ಪೋರ್ಟ್‌ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು, ಕೆಲಸ ಮುಗಿಸಿ ತಮ್ಮೂರಿಗೆ ಆಟೋದಲ್ಲಿ ತೆರಳುತ್ತಿದ್ದರು. ಈ ವೇಳೆ, ಮದ್ದೂರಿನ ಟಿವಿ ಸರ್ಕಲ್‌ ಬಳಿ ಆಟೋಗೆ ನಾಯಿ ಅಡ್ಡಬಂದಿದೆ. ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಯತ್ನಿಸಿದ್ದು, ಆಟೋ ಪಲ್ಟಿಯಾಗಿದೆ.

ಘಟನೆಯಲ್ಲಿ ಆಟೋದಲ್ಲಿದ್ದ ಎಲ್ಲ ಕಾರ್ಮಿಕರಿಗೂ ಪೆಟ್ಟಾಗಿದ್ದು, ಇವರಲ್ಲಿ ಕೆಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಇಬ್ಬರು ಕಾರ್ಮಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಟೋದಲ್ಲಿ ಪೂರ್ಣಿಮಾ, ಸುಶೀಲಮ್ಮ, ಪವಿತ್ರ, ಉಮೇಶ್, ಶೈಲಜಾ, ರೇಣುಕಾ, ಶೋಭಾ, ಪ್ರಭಾಮಣಿ ಸುಕನ್ಯಾ, ಸತ್ಯಮ್ಮ ಮತ್ತು ಆಟೋ ಚಾಲಕ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.

ಆಟೋದಲ್ಲಿದ್ದ ಪೂರ್ಣಿಮಾ ಅವರ ಎಡ ಭಾಗದ ಭುಜಕ್ಕೆ ತೀವ್ರವಾದ ಪೆಟ್ಟು ಬಿದ್ದಿದ್ದು, ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...