ಕಾವೇರಿ ಕೂಗಿಗೆ ಮಂಡ್ಯ ಸ್ತಬ್ಧ; ಬಿಕೋ ಎನ್ನುತ್ತಿರುವ ನಗರ

Date:

ತಮಿಳುನಾಡಿಗೆ ನೀರು ಹರಿಸಬಾರದು ಎಂದು ಒತ್ತಾಯಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಮಂಡ್ಯ ಬಂದ್‌ಗೆ ಭಾರೀ ಬೆಂಬಲ ವ್ಯಕ್ತವಾಗಿದೆ. ಶನಿವಾರ ಮಂಡ್ಯ ಅಕ್ಷರಶಃ ಸ್ತಬ್ಧವಾಗಿದ್ದು, ರೈತರು ಹಾಗೂ ನಾನಾ ಸಂಘಟನೆಗಳ ಘೋಷಣೆಗಳು ನಗರವನ್ನು ಆವರಿಸಿದೆ.

ಮಂಡ್ಯದಲ್ಲಿ ಅಂಗಡಿಗಳು, ಹೋಟೆಲ್‌ಗಳನ್ನು ಮುಚ್ಚಿ ವರ್ತಕರು ಬಂದ್‌ಗೆ ಬೆಂಬಲ ನೀಡಿದ್ದಾರೆ. ಶಾಲಾ-ಕಾಲೇಜುಗಳು, ಚಿತ್ರಮಂದಿರಗಳು ಮುಚ್ಚಿವೆ. ಸಾರಿಗೆ, ಖಾಸಗಿ ಬಸ್‌ಗಳು, ಆಟೋಗಳು ರಸ್ತೆಗಿಳಿದಿಲ್ಲ. ಹೀಗಾಗಿ, ರಸ್ತೆಗಳು ಬಿಕೋ ಎನ್ನುತ್ತಿದ್ದರೆ, ಸಾರ್ವಜನಿಕರ ಓಡಾಟ ಕಡಿಮೆಯಾಗಿತ್ತು. ಪ್ರತಿಭಟನಾಕಾರರು ಬೈಕ್ ಜಾಥಾ ನಡೆಸಿದ್ದಾರೆ.

ಕೇಂದ್ರ, ರಾಜ್ಯ ಸರ್ಕಾರಿ ಕಚೇರಿ, ಬ್ಯಾಂಕ್ ಗಳಿಗೆ ರಜೆ ಇದ್ದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳು ಹೆಚ್ಚಿರುವ ಜಿಲ್ಲಾಧಿಕಾರಿ ಕಚೇರಿ ಸುತ್ತಮುತ್ತ ಸಾರ್ವಜನಿಕರ ಸಂಖ್ಯೆ ಕಡಿಮೆ ಪ್ರಮಾಣದಲ್ಲಿದ್ದರೆ, ಪ್ರತಿಭಟನಾಕಾರರು ಸಹ ಅತ್ತ ಸುಳಿಯಲಿಲ್ಲ, ನ್ಯಾಯಾಲಯ ಎಂದಿನಂತೆ ಕಾರ್ಯ ಕಲಾಪ ಆರಂಭಿಸಿತ್ತಾದರೂ ವಕೀಲರು ಕಾರ್ಯಕಲಾಪ ಬಹಿಷ್ಕರಿಸಿದರು. ಕಾವೇರಿ ಹೋರಾಟದ ಮಂಡ್ಯ ಬಂದ್ ಗೆ ಜನಸಾಮಾನ್ಯರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ಬಂದ್ ಹಿನ್ನೆಲೆಯಲ್ಲಿ ನಗರದಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು. ಪ್ರಮುಖ ಆಯಕಟ್ಟಿನ ಸ್ಥಳಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಸಂಜಯ ವೃತ್ತ, ಮಹಾವೀರ ವೃತ್ತ, ಫ್ಯಾಕ್ಟರಿ ಸರ್ಕಲ್, ಕರ್ನಾಟಕ ಬಾರ್ ಸರ್ಕಲ್, ಹೊಳಲು ಸರ್ಕಲ್ ಮುಂತಾದೆಡೆ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿತ್ತು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...