ಮಂಡ್ಯ | ಬೆಟ್ಟಿಂಗ್‌ ಚಟಕ್ಕೆ ಸಿಲುಕಿ ಸಾಲಬಾಧೆ: ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ

Date:

ಬೆಟ್ಟಿಂಗ್ ಚಟದಿಂದಾಗಿ ಸಾಲದಬಾಧೆಗೆ ಸಿಲುಕಿದ್ದ ಯುವಕನೊಬ್ಬ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ತಾಲೂಕಿನ ಹಳೇ ಬೂದನೂರು ಗ್ರಾಮದ ಬಳಿ ನಡೆದಿದೆ.

ಆತ್ಮಹತ್ಯೆಗೆ ಶರಣಾದ ಯುವಕನನ್ನು ಹಳೇ ಬೂದನೂರು ನಿವಾಸಿ ತ್ಯಾಗ (30) ಎಂದು ಗುರುತಿಸಲಾಗಿದೆ. ಐಪಿಎಲ್ ಕ್ರಿಕೆಟ್ ಬೆಟ್ಟಿಂಗ್, ಇಸ್ಪೀಟು ಜೂಜಿಗೆ ಬಲಿಯಾಗಿದ್ದ ಯುವಕ, ಒಂದೂವರೆ ಕೋಟಿಗೂ ಹೆಚ್ಚಿನ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ.

ಬೆಟ್ಟಿಂಗ್ ದಂಧೆಕೋರರು, ಇಸ್ಪೀಟು ಅಡ್ಡಗಳ ಮಾಫಿಯಾದವರು ಮತ್ತು ಸಾಲಗಾರರ ಕಿರುಕುಳ ತಾಳಲಾರದೆ ಬೂದನೂರು ಬಳಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ರೈಲ್ವೆ ಪೋಲಿಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ತಾಲೂಕಿನ ಕಸಬಾ ಹೋಬಳಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ವ್ಯಾಪಕವಾಗಿದ್ದು. ಇಲ್ಲಿನ ಗದ್ದೆ ಬಯಲುಗಳಲ್ಲಿ ವ್ಯಾಪಕ ಜೂಜು ಅಡ್ಡೆಗಳನ್ನು ನಡೆಸಲಾಗುತ್ತಿದೆ. ಈ ದಂಧೆಗಳನ್ನು ನಿರ್ವಹಿಸಲು ಪ್ರತ್ಯೇಕ ಗುಂಪುಗಳು ಸೃಷ್ಟಿಯಾಗಿದ್ದು, ಇವರ ಬೆಂಬಲಕ್ಕೆ ರಾಜಕೀಯ ನಾಯಕರು ಇರುವುದರಿಂದ ನೂರಾರು ಯುವಕರು ಈ ದಂಧೆಗೆ ಬಲಿಯಾಗುತ್ತಿದ್ದಾರೆ.

ಮಂಡ್ಯ ಗ್ರಾಮಾಂತರ ಪೊಲೀಸ್ ಠಾನೆಯ ವ್ಯಾಪ್ತಿಗೆ ಬರುವ ಈ ಗ್ರಾಮಗಳಲ್ಲಿ ಇಸ್ಪೀಟು ದಂಧೆಗೆ ಬೆಂಗಳೂರು, ಮೈಸೂರು ಸೇರಿದಂತೆ ಜಿಲ್ಲೆಯ ಹಲವೆಡೆಯಿಂದ ಜೂಜೂಕೋರರು ಅಗಮಿಸುತ್ತಿದ್ದು. ಹಳೇ ಮೈಸೂರು ಭಾಗದಲ್ಲಿ ಇಸ್ಪೀಟು ಧಂಧೆಗೆ ಕುಖ್ಯಾತಿಯಾಗಿದೆ. ಈಗಾಗಲೆ ನೂರಾರು ಯುವಕರು ಈ ದಂಧೆಗೆ ಬಲಿಯಾಗಿದ್ದು, ತಮ್ಮ ಪಿತ್ರಾರ್ಜಿತ ಆಸ್ತಿಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಬಗ್ಗೆ ಕ್ರಮಕೈಗೊಳ್ಳಬೇಕಾದ ಪೊಲೀಸರು ಕೂಡ ಮುಗುಮ್ಮಾಗಿ ಕುಳಿತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ವಕ್ಫ್‌ ವಿವಾದವೆಂಬ ಕೃತಕ ಸೃಷ್ಟಿ – ಮತ್ತೊಮ್ಮೆ ಮಾಧ್ಯಮಗಳ ಬಣ್ಣ ಬಯಲು

ಈ ಹಿಂದಿನ ಎಸ್‌ಪಿ ಯತೀಶ್ ಕುಮಾರ್ ಖಡಕ್ ಧೋರಣೆಯಿಂದ ಬಾಲ ಮುಚ್ಚಿಕೊಂಡಿದ್ದ ದಂಧೆಕೋರರು ಮತ್ತೆ ಎದ್ದು ನಿಂತಿದ್ದಾರೆ. ಹಳೇ ಬೂದನೂರಿನಲ್ಲಿ ಬೀಗ ಜಡಿದಿದ್ದ ಎರಡು ಇಸ್ಪೀಟು ಕ್ಲಬ್‌ಗಳು ಮತ್ತೆ ತಮ್ಮ ದಂಧೆ ಶುರು ಮಾಡಿಕೊಂಡಿವೆ ಎನ್ನಲಾಗಿದೆ. ನೂತನ ಎಸ್‌ಪಿ ಪರಶುರಾಮ್ ಬಾಲದಂಡಿ ಇನ್ನಾದರೂ ಐಪಿಎಲ್ ಜೂಜೂ ದಂಧೆಗೆ ಕಡಿವಾಣ ಹಾಕುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...