ಮಂಡ್ಯ | ಕೆರಗೋಡು ಬೆನ್ನಲ್ಲೇ ಕೆ.ಆರ್​ ಪೇಟೆಯಲ್ಲಿ ಭಗವಾಧ್ವಜ ವಿವಾದ

Date:

ಇತ್ತೀಚೆಗೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಆವರಣದಲ್ಲಿ ಹಾರಿಸಲಾಗಿದ್ದ ಹನುಮ ಧ್ವಜ ತೆರವುಗೊಳಿಸಿದ್ದು, ಭಾರೀ ವಿವಾದ ಸೃಷ್ಠಿಸಿತ್ತು. ಆ ಘಟನೆಯನ್ನು ಬಿಜೆಪಿ-ಜೆಡಿಎಸ್‌ ತನ್ನ ರಾಜಕೀಯಕ್ಕೆ ಬಳಸಿಕೊಳ್ಳಲು ಯತ್ನಿಸಿದ್ದವು. ಇದೀಗ, ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆಯಲ್ಲಿ ಭಗವಾಧ್ವಜವನ್ನು ತೆರವುಗೊಳಿಸಲಾಗಿದೆ. ತೆರವುಗೊಳಿಸಿದ್ದರ ವಿರುದ್ಧ ಬಿಜೆಪಿ, ಹಿಂದುಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.

ಕೆ.ಆರ್‌ ಪೇಟೆ ನಗರದ ಟಿ.ಬಿ ವೃತ್ತದಲ್ಲಿ ಹಾರಿಸಲಾಗಿದ್ದ ಭಗವಾಧ್ವಜವನ್ನು ಪುರಸಭೆ ಅಧಿಕಾರಿಗಳು ಧ್ವಜ ತೆರವುಗೊಳಿಸಿದ್ದಾರೆ. ಅನುಮತಿ ಪಡೆಯದೆಯೇ ಸರ್ಕಾರಿ ಜಾಗದ ಧ್ವಜಸ್ತಂಭದಲ್ಲಿ ಭಗವಾಧ್ವಜ ಹಾರಿಸಿದ್ದರಿಂದ ಅದನ್ನು ತೆರವುಗೊಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

ಧ್ವಜ ತೆರವುಗೊಳಿಸಿದ್ದನ್ನ ವಿರೋಧಿಸಿ ಭಾನುವಾರ ಬೆಳಗ್ಗೆ ಹಿಂದೂ ಸಂಘಟನೆ ಕಾರ್ಯಕರ್ತರು ಧರಣಿ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...