ಮಂಡ್ಯ | ಬಿರ್ಸಾ ಮುಂಡಾ ಬ್ರಿಟೀಷರ ವಿರುದ್ಧ ಧ್ವನಿ ಎತ್ತಿದ ಜಾನಪದ ನಾಯಕ: ಜಿ.ಪಂ. ಸಿಇಒ ಶೇಖ್ ತನ್ವೀರ್ ಆಸಿಫ್

Date:

ಬಿರ್ಸಾ ಮುಂಡಾ ಬುಡಕಟ್ಟು ಜನಾಂಗದವರಿಗೆ ಆರಾಧ್ಯ ದೈವವಿದ್ದಂತೆ. ಬುಡಕಟ್ಟು ಜನಾಂಗದ ಅಳಿವು ಉಳಿವಿಗಾಗಿ ಹೋರಾಡಿ ಮಡಿದ ಧೀಮಂತ ನಾಯಕ ಬಿರ್ಸಾ ಮುಂಡಾ. ಅವರ ಧೈರ್ಯ ದಿಟ್ಟತನವನ್ನು ಪ್ರತಿಯೊಬ್ಬರೂ ತಮ್ಮ ಬದುಕಿನಲ್ಲಿ ಅಳವಡಿಸಿಕೊಳ್ಳಿ ಎಂದು ಮಂಡ್ಯ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶೇಖ್ ತನ್ವೀರ್ ಆಸಿಫ್ ಅವರು ತಿಳಿಸಿದರು.

ಅವರು ಮಂಡ್ಯ ಜಿಲ್ಲಾ ಪಂಚಾಯತ್ ಕಾವೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಧರ್ತಿ ಆಬಾ ಭಗವಾನ್ ಬಿರ್ಸಾ ಮುಂಡಾರ 150ನೇ ಜನ್ಮ ಜಯಂತಿ ಅಂಗವಾಗಿ ಜನ ಜಾತಿಯ ಗೌರವ್ ದಿವಸ ಸಮಾರಂಭ ಹಾಗೂ ಧರ್ತಿ ಆಬಾ ಜನಜಾತಿಯ ಗ್ರಾಮ ಉತ್ಕರ್ಷ್ ಅಭಿಯಾನದ ಉದ್ಘಾಟನಾ ಕಾರ್ಯಕ್ರಮವನ್ನು ನೆರವೇರಿಸಿ ಮಾತನಾಡಿದರು.

ಬಿರ್ಸಾ ಮುಂಡಾ ಜಯಂತಿಯನ್ನು ಪ್ರತಿ ವರ್ಷ ನ.15 ರಂದು ಆಚರಿಸಲಾಗುತ್ತದೆ. ಇವರನ್ನು ಭಾರತೀಯ ಇತಿಹಾಸದಲ್ಲಿ ಮಹಾನ್ ವೀರ ಎಂದು ಕರೆಯಲಾಗುತ್ತದೆ. ಬುಡಕಟ್ಟು ಸಮಾಜದ ಸ್ಥಿತಿ ಮತ್ತು ದಿಕ್ಕನ್ನು ಬದಲಾಯಿಸುವಲ್ಲಿ ಇವರ ಪಾತ್ರ ಪ್ರಮುಖವಾದದ್ದು ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬ್ರಿಟಿಷರ ವಿರುದ್ಧ ಧ್ವನಿ ಎತ್ತಿದ ಬಿರ್ಸಾ ಮುಂಡಾ ಬುಡಕಟ್ಟು ಜನಾಂಗಕ್ಕೆ ನೀಡಿದ ಕೊಡುಗೆ, ಹೋರಾಟ ಮತ್ತು ತ್ಯಾಗವನ್ನು ಗೌರವಿಸುವುದು ಈ ಜಯಂತಿಯ ಉದ್ದೇಶವಾಗಿದೆ ಎಂದು ತಿಳಿಸಿದರು.

IMG 20241115 WA0047

ಭಾರತದ ಸ್ವಾತಂತ್ರ‍್ಯ ಹೋರಾಟದಲ್ಲಿ ಆದಿವಾಸಿಗಳು ಅನೇಕ ರೀತಿಯಲ್ಲಿ ಕೊಡುಗೆ ನೀಡಿದ್ದು, ಅಂತಹವರ ಸಾಲಿಗೆ ಬಿರ್ಸಾ ಮುಂಡಾ ಕೂಡ ಸೇರಿದ್ದಾರೆ. ಇವರು 1875 ರ ನವೆಂಬರ್ 15 ರಂದು ಜಾರ್ಖಂಡ್‌ನ ಉಲಿಹಾತು ಎಂಬ ಗ್ರಾಮದಲ್ಲಿ ಜನಿಸಿದರು ಎಂದು ಅವರ ಹುಟ್ಟಿನ ಬಗ್ಗೆ ತಿಳಿಸಿದರು.

ಇವರು ಸ್ವಾತಂತ್ರ‍್ಯ ಹೋರಾಟದಲ್ಲಿ ಪ್ರಮುಖ ಬುಡಕಟ್ಟು ನಾಯಕರಾಗಿ ಗುರುತಿಸಿಕೊಂಡವರು. ಬ್ರಿಟಿಷರ ಅನ್ಯಾಯ ಮತ್ತು ಬುಡಕಟ್ಟು ಜನರ ಶೋಷಣೆಯ ವಿರುದ್ಧ ಧ್ವನಿ ಎತ್ತುವ ಮೂಲಕ ಬುಡಕಟ್ಟು ಸಮುದಾಯದ ಹಕ್ಕುಗಳಿಗಾಗಿ ಹೋರಾಡಿದ್ದಾರೆ ಎಂದರು.

ಇದನ್ನು ಓದಿದ್ದೀರಾ? ರಾಮನಗರ | ಅರ್ಧನಾರೀಶ್ವರ ಪರಿಕಲ್ಪನೆಯ ಅರ್ಥ ಸಮಾನತೆಯಾಗಿದೆ: ನ್ಯಾ. ಬಿ.ವಿ. ರೇಣುಕ

ಇವರ ಮುಖ್ಯ ಉದ್ದೇಶವೇ ಆದಿವಾಸಿಗಳ ನೆಲ ಮತ್ತು ಸಂಸ್ಕೃತಿಯನ್ನು ರಕ್ಷಿಸುವುದಾಗಿತ್ತು. ಕೇವಲ ಇವರು 25 ವರ್ಷಗಳ ಕಾಲ ಬದುಕಿದ್ದು ತಮ್ಮ ಕಿರಿ ವಯಸ್ಸಿನಲ್ಲೇ ದೊಡ್ಡ ಮಟ್ಟದಲ್ಲಿ ಹೋರಾಟ ನಡೆಸಿದ್ದರು. ಈತನನ್ನು ಬುಡಕಟ್ಟು ಜನಾಂಗದವರು ದೇವರಂತೆ ಪೂಜಿಸುತ್ತಾರೆ. ಇವರು ನೀಡಿರುವ ಕೊಡುಗೆಯನ್ನು ಗೌರವಿಸುದುಕ್ಕಾಗಿಯೇ ಅವರ ಜನ್ಮ ದಿನವನ್ನು ನ.15 ರಂದು ರಾಷ್ಟ್ರೀಯ ಮಟ್ಟದಲ್ಲಿ ಬುಡಕಟ್ಟು ಹೆಮ್ಮೆಯ ದಿನವನ್ನಾಗಿ ಆಚರಣೆ ಮಾಡಲಾಗುತ್ತದೆ ಎಂದು ಹೇಳಿದರು.

ನಗರಸಭೆ ಅಧ್ಯಕ್ಷರಾದ ಪ್ರಕಾಶ್ ಮಾತನಾಡಿ, ಬಿರ್ಸಾ ಮುಂಡಾ ಪರಂಪರೆ ಮತ್ತು ಭಾರತದ ಬುಡಕಟ್ಟು ಸ್ವಾತಂತ್ರ‍್ಯ ಚಳುವಳಿಯಲ್ಲಿ ಅವರ ಪಾತ್ರವನ್ನು ಗೌರವಿಸಲು ಬಿರ್ಸಾ ಮುಂಡಾ ಜಯಂತಿಯನ್ನು ಪ್ರಾರಂಭಿಸಿ ಪ್ರತಿವರ್ಷ ನ.15 ರಂದು ಆಚರಣೆ ಮಾಡಲಾಗುತ್ತಿದೆ ಎಂದರು.

IMG 20241115 WA0048

ಬುಡಕಟ್ಟು ಸಮಾಜದ ಹೋರಾಟ, ಸ್ವಾಭಿಮಾನ ಮತ್ತು ಅವರ ಹಕ್ಕುಗಳ ರಕ್ಷಣೆಯ ಸಂಕೇತವೆಂದು ಈ ದಿನವನ್ನು ಪರಿಗಣಿಸಲಾಗಿದೆ. ಇವರು ಪ್ರಾರಂಭಿಸಿದ ಹೋರಾಟವು ಬುಡಕಟ್ಟು ಜನರಲ್ಲಿ ಸ್ವಾಭಿಮಾನ ಮತ್ತು ಏಕತೆಯ ಭಾವನೆಯನ್ನು ಮೂಡಿಸಿತ್ತು. ಈ ದಿವಸವು ಬ್ರಿಟಿಷರ ಆಡಳಿತದ ವಿರುದ್ಧ ಪ್ರಾಣ ತ್ಯಾಗ ಮಾಡಿದ ಎಲ್ಲರನ್ನೂ ಸ್ಮರಿಸುವ ದಿನವಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವೇದಿಕೆಯ ಮೇಲೆ ಬಿರ್ಸಾ ಮುಂಡಾ ಜಯಂತಿ ಅಂಗವಾಗಿ ಬುಡಕಟ್ಟು ಸಮುದಾಯಕ್ಕೆ ಸಂಬಂಧಿಸಿದಂತೆ ಭಿತ್ತಿ ಪತ್ರ ಬಿಡುಗಡೆಗೊಳಿಸಲಾಯಿತು. ತದನಂತರ ಬುಡಕಟ್ಟು ಜನಾಂಗದವರು ಅವರ ಸಮುದಾಯದ ನೃತ್ಯ ಪ್ರದರ್ಶನವನ್ನು ಮಾಡಿದರು.

ಇದನ್ನು ಓದಿದ್ದೀರಾ? ಕೊಪ್ಪಳದ ಪ್ರಸಿದ್ಧ ಗವಿಸಿದ್ದೇಶ್ವರ ಜಾತ್ರೆಗೆ ಖ್ಯಾತ ನಟ ಅಮಿತಾಭ್ ಬಚ್ಚನ್‌ಗೆ ಆಹ್ವಾನ

ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಗಂಗಾಧರಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ನಗರಸಭೆ ಸದಸ್ಯ ಶಿವಲಿಂಗು, ಭಾರತ ಆಡಳಿತ ಸೇವೆಯ ವೃತ್ತಿಪರ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...