ಮಂಡ್ಯ ಜಿಲ್ಲೆಯ ಚಿತ್ರಣವನ್ನು ಪ್ರದರ್ಶನ ಮಾಡುವ ನಿಟ್ಟಿನಲ್ಲಿ ಹೆಲಿಪ್ಯಾಡ್ ಸವಾರಿ ಪ್ರದರ್ಶನ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಮೂರು ದಿನಗಳ ಕಾಲ ಸವಾರಿ ಪ್ರದರ್ಶನ ಕಾರ್ಯಕ್ರಮ ಇರುತ್ತದೆ. ಯುವಜನತೆ ನಗರದ ಚಿತ್ರಣವನ್ನು ಕಣ್ತುಂಬಿಕೊಳ್ಳಿ ಎಂದು ಕೃಷಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಚಲುವರಾಯಸ್ವಾಮಿ ಹೇಳಿದರು.
ಇಂದು ಬೂದನೂರು ಉತ್ಸವ-2026ರ ಪ್ರಯುಕ್ತ ಚಿಕ್ಕ ಮಂಡ್ಯದಲ್ಲಿ ಹೆಲಿಕಾಪ್ಟರ್ ರೈಡ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ಜಿಲ್ಲೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಜೊತೆಗೆ ಜಿಲ್ಲೆಯ ಸಾರ್ವಜನಿಕರಿಗೆ ನೂತನವಾಗಿ ಕಾರ್ಯಕ್ರಮವನ್ನು ಮಾಡುವ ನಿಟ್ಟಿನಲ್ಲಿ ಬೂದನೂರು ಉತ್ಸವ ಪ್ರಯುಕ್ತ ಹೆಲಿ ಟೂರಿಸಂ ಹೆಲಿಪ್ಯಾಡ್ ಸವಾರಿ ಪ್ರದರ್ಶನವನ್ನು ಆಯೋಜಿಸಲಾಗಿದೆ ಎಂದರು.
ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರಸ್ತುತ ಸಾಲಿನ ರಾಜ್ಯ ಬಜೆಟ್ ನಲ್ಲಿ ಕೃಷಿಗೆ ಮೊದಲ ಆಧ್ಯತೆ ನೀಡಿ: ಬಡಗಲಪುರ ನಾಗೇಂದ್ರ
ಜಿಲ್ಲೆಯಲ್ಲಿ ಬೂದನೂರು ಉತ್ಸವ -2026 ರ ಪ್ರಯುಕ್ತ ಏರ್ಪಡಿಸಲಾಗಿದ್ದ ವಿವಿಧ ರೀತಿಯ ಕ್ರೀಡೆ ಮತ್ತು ರಂಗೋಲಿ ಸ್ಪರ್ಧೆಗಳ ಕಾರ್ಯಕ್ರಮಗಳು ಬಹಳ ಯಶಸ್ವಿಯಾಗಿ ಪೂರ್ಣಗೊಂಡವೆ. ಮಾರ್ಚ್.7 ರಂದು ಜಿಲ್ಲಾಡಳಿತ ವತಿಯಿಂದ ‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳು ಮತ್ತು ಅಸ್ಪೃಶ್ಯತಾ ನಿವಾರಣಾ ಕಾಯ್ದೆ’ ಯ ಅರಿವು ಕಾರ್ಯಾಗಾರವನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ಆಯೋಜಿಸಲಾಗಿದೆ. ಸಮಾಜದ ಎಲ್ಲಾ ವರ್ಗದವರು ಮತ್ತು ಮುಖಂಡರುಗಳು ಕಾರ್ಯಗಾರದಲ್ಲಿ ಭಾವಹಿಸಿ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಈ ವಿಶೇಷ ವಿಡಿಯೋ ವೀಕ್ಷಿಸಿ: https://www.youtube.com/watch?v=eXeAlpsxb6g

ಶಾಸಕರಾದ ಪಿ. ರವಿಕುಮಾರ್ ಗಣಿಗ, ಮದ್ದೂರು ಶಾಸಕ ಕೆ.ಎಂ. ಉದಯ್, ಜಿಲ್ಲಾಧಿಕಾರಿ ಡಾ. ಕುಮಾರ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಕೆ.ಆರ್. ನಂದಿನಿ, ಪೊಲೀಸ್ ಅಧೀಕ್ಷಕಿ ವಿ.ಜೆ. ಶೋಭಾ ರಾಣಿ, ಉಪ ವಿಭಾಗ ಅಧಿಕಾರಿ ಶಿವಮೂರ್ತಿ, ತಹಶೀಲ್ದಾರ್ ವಿಶ್ವನಾಥ್ ಸೇರಿದಂತೆ ಹಲವರು ಉದ್ಘಾಟನೆ ವೇಳೆ ಇದ್ದರು.





