ಮಂಡ್ಯ | ಕಾವೇರಿ ಸಂಕಷ್ಟ: ವಿಶೇಷ ಅಧಿವೇಶನ ಕರೆಯಲು ಒತ್ತಾಯ

Date:

ಕಾವೇರಿ ಕೊಳ್ಳದ ಜನರ ಹಿತ ಕಾಪಾಡುವ ದೃಷ್ಠಿಯಿಂದ ರಾಜ್ಯ ಸರ್ಕಾರ ಕೂಡಲೇ ತುರ್ತು ವಿಧಾನಸಭಾ ಅಧಿವೇಶನ ಕರೆಯಬೇಕು ಎಂದು ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಒತ್ತಾಯಿಸಿದೆ.

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ನಿಲ್ಲಿಸುವಂತೆ ಒತ್ತಾಯಿಸಿ ಸಮಿತಿಯು ಮಂಡ್ಯದಲ್ಲಿ ಹೋರಾಟ ನಡೆಸುತ್ತಿದೆ. “ಕಾವೇರಿ ನದಿ ನೀರಿನ ವಿಚಾರದಲ್ಲಿ ಸಂಕಷ್ಟ ಸನ್ನಿವೇಶ ಎದುರಿಸುತ್ತಿರುವ ರೈತರ ಪರವಾಗಿ ರಾಜ್ಯ ಸರ್ಕಾರ ನಿಲ್ಲಬೇಕು. ತುರ್ತು ಅಧಿವೇಶನ ನಡೆಸಿ ಸಮಗ್ರ ಚರ್ಚೆ ನಡೆಸಬೇಕು. ರೈತರ ಹಿತ ಕಾಪಾಡಬೇಕು” ಎಂದು ಒತ್ತಾಯಿಸಿದೆ.

ಸರ್ವಪಕ್ಷ ನಿಯೋಗದೊಂದಿಗೆ ಪ್ರಧಾನಿಯವರನ್ನು ಭೇಟಿಯಾಗಿ ವಾಸವಾಂಶವನ್ನು ಮನವರಿಕೆ ಮಾಡಿಕೊಡಲು ಮುಂದಾಗಬೇಕು. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ನಲ್ಲಿ ವಾಸ್ತವಾಂಶದ ಅಂಕಿ ಅಂಶಗಳ ಸಮೇತ ಸಮರ್ಥವಾದ ಮಂಡನೆಗೆ ಸರ್ಕಾರ ಮುಂದಾಗಬೇಕು, ಪ್ರಾಧಿಕಾರದ ಆದೇಶ ಪಾಲನೆ ಮಾಡಿ ಯಾವುದೇ ಕಾರಣಕ್ಕೂ ಒಂದು ಹನಿ ನೀರನ್ನು ಸರ್ಕಾರ ಬಿಡುಗಡೆ ಮಾಡಬಾರದು ಎಂದು ನಿರ್ಣಯ ಕೈಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯದ ಎಲ್ಲ ಸಂಸದರು ಪಕ್ಷಾತೀತವಾಗಿ ಒಗ್ಗೂಡಿ ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು ಕಾವೇರಿ ವಿಚಾರದಲ್ಲಿ ಸಂಕಷ್ಟದ ಸಮಯದಲ್ಲಿ ಸಂಕಷ್ಟ ಸೂತ್ರ ರಚಿಸಲು ಒತ್ತಾಯ ಮಾಡಬೇಕು, ಒಕ್ಕೂಟ ವ್ಯವಸ್ಥೆಯಲ್ಲಿ ಪ್ರಧಾನ ಮಂತ್ರಿ ಮಧ್ಯ ಪ್ರವೇಶಿಸಿ ಸಂಕಷ್ಟ ಸಮಯದಲ್ಲಿ ಸಮಸ್ಯೆ ಪರಿಹಾರಕ್ಕೆ ಮುಂದಾಗಿ ಕರ್ನಾಟಕ ರಾಜ್ಯಕ್ಕೆ ನ್ಯಾಯ ದೊರಕಿಸಿ ಕೊಡಬೇಕೆಂದು ಸಮಿತಿಯು ಆಗ್ರಹಿಸಿದೆ.

ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರ ರೈತರಿಗೆ ಗುಳೆ ಭಾಗ್ಯ ನೀಡಿದೆ ಎಂದು ರೈತರು ಅಣಕು ಗುಳೆ ಯಾತ್ರೆ ಮೂಲಕ ಶ್ರೀರಂಗಪಟ್ಟಣದಲ್ಲಿ ಪ್ರತಿಭಟಿಸಿದರು.

ಭೂಮಿ ತಾಯಿ ಹೋರಾಟ ಸಮಿತಿ ಆಶ್ರಯದಲ್ಲಿ ರೈತರು ಕಾವೇರಿ ನದಿಯ ಸ್ನಾನಘಟ್ಟದ ಬಳಿ ಅಣಕು ಗುಳೆ ಯಾತ್ರೆ ಆರಂಭಕ್ಕೆ ಮುನ್ನ ಪ್ರದಕ್ಷಿಣೆ ಹಾಕಿ ಯಾತ್ರೆ ಹೊರಟರು. ಕದ್ದು ಮುಚ್ಚಿ ನೀರು ಬಿಡುತ್ತಿರುವ ಸರ್ಕಾರದ ದಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು ತಮಿಳುನಾಡಿಗೆ ನೀರು ಬಿಡುವ ಮೂಲಕ ಸರ್ಕಾರ ರೈತರ ಗುಳೆ ಭಾಗ್ಯ ಕಲ್ಪಿಸಿದೆ ಎಂದು ಕಿಡಿಕಾರಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಕೆ ಎಸ್ ನಂಜುಂಡೇಗೌಡ, ರಾಮಕೃಷ್ಣೇಗೌಡ ಮತ್ತಿತರರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...