ಮಂಡ್ಯ | ತಮಿಳುನಾಡಿಗೆ ಕಾವೇರಿ ನೀರು; ಬಿಜೆಪಿ ಪ್ರತಿಭಟನೆ

Date:

ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಸೋಮವಾರ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯದ ಸಂಜಯ ವೃತ್ತದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ವಾಹನ ತಡೆದು ಬಿಜೆಪಿಗರು ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಸಂಸದೆ ಸಮಲತಾ, “ಇದು ರೈತರ ಪರವಾದ ಪ್ರತಿಭಟನೆ” ಎಂದು ಹೇಳಿದ್ದಾರೆ.

“ಮಂಡ್ಯ ಸೇರಿದಂತೆ ರಾಜ್ಯದ ಕಾವೇರಿ ನೀರಾವರಿ ಪ್ರದೇಶದ ರೈತರು ನೀರಿನ ಕೊರತೆ ಎದುರಿಸುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಕೆಆರ್‌ಎಸ್‌ನಿಂದ ತಮಿಳುನಾಡಿಗೆ ನೀರು ಹರಿಸುವುದು ಸರಿಯಲ್ಲ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆಆರ್‌ಎಸ್‌ ಜಲಾಶಯದಲ್ಲಿ ಹೂಳು ತೆಗೆದರೆ ಅಣೆಕಟ್ಟೆಯಲ್ಲಿ ಹೆಚ್ಚಿನ ನೀರು ಸಂಗ್ರಹವಾಗುತ್ತದೆ. ಆದರೆ, ಹೂಳು ತೆಗೆಯಲು ತಮಿಳುನಾಡು ಸರ್ಕಾರ ಆಕ್ಷೇಪ ಎತ್ತುತ್ತಿದೆ. ಈಗಾಗಲೇ ಅಣೆಕಟ್ಟಿನಿಂದ ತಮಿಳುನಾಡಿಗೆ ಸುಮಾರು 8 ಅಡಿ ನೀರು ಹರಿಸಲಾಗಿದೆ. ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ” ಎಂದು ಆರೋಪಿಸಿದರು.

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಮಂಡ್ಯದ ಇಂಡುವಾಳುವಿನಲ್ಲಿ ಎಕ್ಸ್‌ಪ್ರೆಸ್‌ವೇ ಬಂದ್‌ ಮಾಡಿ ಪ್ರತಿಭಟನೆ ನಡೆಸುವುದಾಗಿ ಮಾಜಿ ಸಚಿವ ಅಶ್ವತ್ಥ ನಾರಾಯಣ ಶನಿವಾರ ಹೇಳಿದ್ದರು. ಆದರೆ, ಪ್ರತಿಭಟನೆಯ ಸ್ಥಳ ಬದಲಿಸಿದ ಬಿಜೆಪಿಗರು ಮಂಡ್ಯ ನಗರದಲ್ಲಿ ಹಾದುಹೋಗಿರುವ ಹೆದ್ದಾರಿಯಲ್ಲಿ ವಾಹನ ತಡೆದು ಪ್ರತಿಭಟನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...