ಮಂಡ್ಯ | ಕೆಲಸ ನೀಡದ ಕೂಲಿಕಾರರ ವಿರೋಧಿ ಸಿಇಒ ವರ್ಗಾವಣೆ ಆಗಬೇಕು: ಸಿಪಿಐಎಂ

Date:

ಕಳೆದ ಮೂರು ತಿಂಗಳಿನಿಂದ ಕೂಲಿಕಾರರಿಗೆ ಕೆಲಸ ನೀಡದೆ ಕೂಲಿಕಾರರ ವಿರೋಧಿಯಾಗಿ ಅಹಂಕಾರದಿಂದ ವರ್ತಿಸುತ್ತಿರುವ ಮಂಡ್ಯ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಂದಿನಿ ಕೆ ಆರ್ ಅವರನ್ನು ಕೂಡಲೇ ಜಿಲ್ಲೆಯಿಂದ ವರ್ಗಾವಣೆ ಮಾಡಬೇಕು ಎಂದು ಭಾರತ ಕಮ್ಯುನಿಸ್ಟ್ ಪಕ್ಷ(ಮಾರ್ಕ್ಸ್‌ವಾದ)ದ ಜಿಲ್ಲಾ ಕಾರ್ಯದರ್ಶಿ ಟಿ ಎಲ್ ಕೃಷ್ಣೇಗೌಡ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪತ್ರಿಕಾ ಪ್ರಕಟಣೆ ನೀಡಿರುವ ಅವರು, “ಜನತೆಯ, ಅದರಲ್ಲೂ ಬಡವರ ಬಗ್ಗೆ ಕನಿಷ್ಠ ಕಾಳಜಿಯೂ ಇಲ್ಲದ ಈ ಅಧಿಕಾರಿಗೆ ಜನರೊಡನೆ ನೇರವಾಗಿ ಸಂಪರ್ಕವಿರುವ ಯಾವುದೇ ಹುದ್ದೆ ನೀಡಬಾರದು. ಅವರು ಮಂಡ್ಯ ಜಿಲ್ಲೆಯ ನಿವಾಸಿಯಾಗಿದ್ದು, ಸ್ಥಳೀಯರೂ ಆಗಿದ್ದಾರೆ. ಸ್ಥಳೀಯರನ್ನು ಇಂತಹ ಜವಾಬ್ದಾರಿ ಹುದ್ದೆಯಲ್ಲಿ ಮುಂದುವರೆಸಬಾರದು” ಎಂದು ಆಗ್ರಹಿಸಿದರು.

“ಜುಲೈ 04ರಂದು ಕೆಲಸ ಮತ್ತು ಕೂಲಿಗಾಗಿ ಕೂಲಿಕಾರರು ತಮ್ಮ ಸಂಘಟನೆಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾಗ ಒಂದು ಮನವಿ ಪತ್ರ ಸ್ವೀಕರಿಸಲು ಸತಾಯಿಸಿ ಮಧ್ಯಾಹ್ನದವರೆಗೆ ಕೂಲಿಕಾರರನ್ನು ಬಿಸಿಲಿನಲ್ಲಿ ಕಾಯಿಸಿದ್ದಾರೆ. ನಂತರ ಪ್ರತಿಭಟನಾ ಸ್ಥಳಕ್ಕೆ ಬರಲು ನಿರಾಕರಿಸಿದ ಸಿಇಒ, ಸಂಘದ ಮುಖಂಡರನ್ನು ಕಾರಿಡಾರ್‌ನಲ್ಲೇ ನಿಲ್ಲಿಸಿಕೊಂಡು ಹಿರಿಯ ಮುಖಂಡರ ಜತೆಗೆ ಏಕವಚನ ಮತ್ತು ಅಹಂಕಾರದಿಂದ ಮಾತನಾಡಿದ ನಂದಿನಿ ಐಎಎಸ್‌ ಅವರ ವರ್ತನೆ ಖಂಡನೀಯ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರತಿಭಟನೆ ಸಂದರ್ಭದಲ್ಲಿ ನಡೆದ ಮಾತಿನ ಚಕಮಕಿಯನ್ನು ನೆಪ ಮಾಡಿಕೊಂಡು ಇಂದು ಇಡೀ ಜಿಲ್ಲೆಯ ಪಂಚಾಯಿತಿ ನೌಕರರನ್ನು ಬಲವಂತವಾಗಿ ಮಂಡ್ಯಕ್ಕೆ ಕರೆಸಿಕೊಂಡು ಪ್ರತಿಭಟನೆ ನಡೆಸಿರುವುದು ಅಧಿಕಾರದ ದುರುಪಯೋಗವಾಗಿದೆ. ತಮ್ಮ ಅಧಿಕಾರವನ್ನು ಈ ರೀತಿಯಾಗಿ ಯಾವುದೇ ಅಧಿಕಾರಿ ದುರುಪಯೋಗ ಮಾಡಿಕೊಂಡಿರಲಿಲ್ಲ. ಸಿಇಒ ಅವರಿಗೆ ರಾಜಕಾರಣ ಮಾಡುವ ಇಚ್ಚೆಯಿದ್ದರೆ ಹುದ್ದೆಯನ್ನು ತೊರೆದು ನೇರವಾಗಿ ರಾಜಕಾರಣ ಮಾಡಲಿ, ಅದು ಬಿಟ್ಟು ಹಿಂಬಾಗಿಲ ರಾಜಕಾರಣ ಮತ್ತು ಭವಿಷ್ಯದ ರಾಜಕೀಯ ಮಹತ್ವಾಕಾಂಕ್ಷೆಗೆ ಜಿಲ್ಲೆಯನ್ನು ಬಲಿಕೊಡಬಾರದು” ಎಂದು ಆಕ್ರೋಶ ವ್ಯಕ್ತಪಡಿಸಿದರು.‌

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಜುಲೈ 9ರ ರಾಷ್ಟ್ರವ್ಯಾಪಿ ಮುಷ್ಕರದ ಹಿನ್ನಲೆ ಎಸ್ ಕೆ ಎಂ ಮತ್ತು ಜೆಸಿಟಿಯು ಪೋಸ್ಟರ್ ಬಿಡುಗಡೆ

“ಇಂತಹ ಜನ ವಿರೋಧಿ, ಅಧಿಕಾರ ದುರುಪಯೋಗದ ಅಧಿಕಾರಿಯನ್ನು ಜಿಲ್ಲೆಯಲ್ಲಿ ಮುಂದುವರೆಸಿದರೆ ಸಿಪಿಐಎಂ ತೀವ್ರವಾಗಿ ಪ್ರತಿಭಟನೆ ನಡೆಸುವುದು ಅನಿವಾರ್ಯವಾಗಿದೆ” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...