ಮಂಡ್ಯ | ಶ್ರೀರಂಗಪಟ್ಟಣ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯಲ್ಲಿ ದೂರುಗಳ ಸುರಿಮಳೆ

Date:

ಜನಸ್ನೇಹಿ ಪೊಲೀಸ್ ವ್ಯವಸ್ಥೆಯ ಭಾಗವಾಗಿ, ಜನರ ಬಳಿ ಹೋಗಿ ಕುಂದುಕೊರತೆಗಳನ್ನು ಕೇಳಲು ಈ ಶ್ರೀರಂಗಪಟ್ಟಣ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆ ಆಯೋಜಿಸಿದ್ದೇವೆ. ನಮ್ಮ ಆಹ್ವಾನಕ್ಕೆ ಓಗೊಟ್ಟು ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ನೀವೆಲ್ಲರೂ ಬಂದಿರುವುದು ಸಂತೋಷದ ವಿಚಾರ. ಪೊಲೀಸ್ ಠಾಣಾಮಟ್ಟದಲ್ಲಿ ಬಗೆಹರಿಯದ ಸಮಸ್ಯೆಗಳನ್ನು ಹಾಗೂ ಸಾರ್ವಜನಿಕ ಸಮಸ್ಯೆಗಳನ್ನು ಇಲ್ಲಿ ಹೇಳಿಕೊಂಡು ಬಗೆಹರಿಸಿಕೊಳ್ಳಬಹುದು ಎಂದು ಡಿವೈಎಸ್‌ಪಿ ಮುರಳಿ ಎಲ್ಲರನ್ನೂ ಸ್ವಾಗತಿಸುತ್ತ ಮಾಹಿತಿ ತಿಳಿಸಿದರು.

ರಾಂಪುರದ ವಿಜಯೇಂದ್ರ ಕುಮಾರ್ ಮಾತನಾಡಿ, “ನಮ್ಮ ಗ್ರಾಮ ರಾಂಪುರದಲ್ಲಿ 25 ರಿಂದ 30 ಸೋಲಾರ್ ಬ್ಯಾಟರಿಗಳ ಕಳ್ಳತನವಾಗಿದೆ. ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ನೀಡಿದ್ದೇವೆ. ಆದರೆ ಈವರೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ದೂರು ನೀಡಿದಾಗ ಒಳ್ಳೆಯ ಗುಣಮಟ್ಟದ ಸಿಸಿ ಟಿವಿ ವಿಡಿಯೋ ಸಮೇತ ಮಾಹಿತಿ ಕೊಟ್ಟಿದ್ದರೂ ಕೂಡಾ ಕಳ್ಳರನ್ನು ಹಿಡಿಯುವ ಕೆಲಸವಾಗಿಲ್ಲ. ದಿನ ರಾತ್ರಿ ಗ್ರಾಮಕ್ಕೆ ಪೊಲೀಸರ ಗಸ್ತಿನ ಏರ್ಪಾಟು ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರಿಯ ರಮೇಶ್ ಮಾತನಾಡಿ, “ಮಂಡ್ಯ ಜಿಲ್ಲೆಯಲ್ಲಿ ಬಾಲ್ಯ ವಿವಾಹ, ಹೆಣ್ಣುಭ್ರೂಣ ಹತ್ಯೆ ಹೆಚ್ಚಾಗಿದೆ. ಎಲ್ಲ ಕಡೆ ನೀವು ಮಾಹಿತಿ ಪಡೆಯಲು ಸಾಧ್ಯವಿಲ್ಲ. ಇದನ್ನು ತಡೆಗಟ್ಟಲು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತರ ಸಭೆಗಳನ್ನು ನಿಯಮಿತವಾಗಿ ನಡೆಸಬೇಕು. ಅವರಿಂದ ಹೆಚ್ಚಿನ ಮಾಹಿತಿ ಪಡೆದುಕೊಂಡರೆ ಈ ಸಮಸ್ಯೆಗಳನ್ನು ಸುಲಭದಲ್ಲಿ ತಡೆಗಟ್ಟಬಹುದು” ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಶ್ರೀರಂಗಪಟ್ಟಣ ಪ್ರವಾಸಿಗರ ತಾಣದಲ್ಲಿ ಟ್ರಾಫಿಕ್ ಪೊಲೀಸರ ಚಟುವಟಿಕೆ ಇಲ್ಲವೇ ಇಲ್ಲ ಎನ್ನುವಂತಿದೆ. ಸಂಚಾರ ವ್ಯವಸ್ಥೆ ಸರಿಯಾಗಬೇಕಿದೆ. ರಾತ್ರಿ ಹೊತ್ತು ಪೊಲೀಸ್ ಗಸ್ತು ಹೆಚ್ಚಿಸಬೇಕಿದೆ. ತಾಲೂಕಿನ ತುಂಬಾ ವಿಪರೀತ ಕಳ್ಳತನಗಳು ಹಾಗೂ ಅಪಘಾತಗಳು ಹೆಚ್ಚಾಗಿವೆ. ಇಸ್ಪೀಟ್ ಆಡುವವರ, ಮದ್ಯ, ಗಾಂಜಾ ಮುಂತಾದ ಅಮಲು ಪದಾರ್ಥಗಳನ್ನು ಮಾರುವವರ ಹಾಗೂ ಸೇವಿಸುವವರ ಸಂಖ್ಯೆ ಹೆಚ್ಚಾಗಿದೆ. ಲೈಸೆನ್ಸ್, ಹೆಲ್ಮೆಟ್ ಹಾಗೂ ಇನ್ಷೂರೆನ್ಸ್ ಇಲ್ಲದ ವಾಹನ ಚಲಾಯಿಸುವವರ ಎಣಿಕೆ ಹೆಚ್ಚಾಗಿದೆ. ಕಾನೂನು ಉಲ್ಲಂಘಿಸುವವರ ಮೇಲೆ ದೂರು ದಾಖಲಾಗಿ, ಶಿಕ್ಷೆ ಕೊಡಿಸಬೇಕಿದೆ. ಇಲ್ಲದಿದ್ದಲ್ಲಿ ಸಮಾಜದ ಶಾಂತಿ ಸುವ್ಯವಸ್ಥೆ ಹಾಳಾಗಲಿದೆ” ಎಂದು ಸಾರ್ವಜನಿಕರು ದೂರುಗಳ ಸುರುಮಳೆ ಸುರಿಸಿದರು.

ಜಿಲ್ಲಾ ಪೊಲೀಸ್ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಮಾತನಾಡಿ, “ಪ್ರತಿ ಮೂರು ತಿಂಗಳಿಗೊಮ್ಮೆ ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗುವುದು. ಪ್ರತಿ ಸಭೆಯಲ್ಲಿ ಹಿಂದಿನ ಸಭೆಯಲ್ಲಿ ಬಂದಂತಹ ದೂರುಗಳು, ಅವುಗಳಿಗೆ ಕೊಟ್ಟಂತ ಪರಿಹಾರದ ಮಾಹಿತಿ ತಿಳಿಸಲಾಗುವುದು. ನೀವುಗಳು ತಿಳಿಸಿದಂತೆ ಸಂಚಾರ ವ್ಯವಸ್ಥೆಯನ್ನು ಸುಗಮ ಮಾಡಲು ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದರು.

“ಕಳ್ಳತನ ತಪ್ಪಿಸಲು ಪೊಲೀಸ್ ಗಸ್ತು ವ್ಯವಸ್ಥೆಯನ್ನು ಹೆಚ್ಚಿಸಲಾಗುವುದು. ಶ್ರೀರಂಗಪಟ್ಟಣ ವ್ಯಾಪ್ತಿಯಲ್ಲಿ ಓಡಾಡುವ ಆಟೋಗಳಿಗೆ ನಂಬರ್‌ ನೀಡಿ ಅನುಕೂಲ ಮಾಡಲಾಗುವುದು. ಶ್ರೀರಂಗಪಟ್ಟಣ ತಾಲೂಕಿನ ಸಂಚಾರ ವ್ಯವಸ್ಥೆ ಸುಗಮವಾಗಿಸಲು ಬೇಕಾದ ಕಡೆ ಅಂಡರ್ ಪಾಸ್, ಸಿಗ್ನಲ್ ಲೈಟುಗಳು, ರಸ್ತೆ ದುರಸ್ತಿ ಸೇರಿದಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳ ಜೊತೆ ಸಭೆ ನಡೆಸಿ ಸರಿಪಡಿಸಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಶಾಸಕ ರುದ್ರಪ್ಪ ಲಮಾಣಿ ಕಾಣೆಯೆಂದು ರೈಲು ಟಿಕೆಟ್ ಕಾಯ್ದಿರಿಸಿದ ಮತದಾರ

ಉಪವಿಭಾಗ ಮಟ್ಟದ ಜನಸಂಪರ್ಕ ಸಭೆಯಲ್ಲಿ ತಾಲೂಕಿನ ಎಲ್ಲ ಠಾಣೆಯ ಪೊಲೀಸರು, ರಾಜ್ಯ ರೈತ ಸಂಘದ ಜಯರಾಮೇಗೌಡ, ಪಾಂಡು, ರವಿ, ವಕೀಲ ವೆಂಕಟೇಶ್, ಕರ್ನಾಟಕ ರಕ್ಷಣಾ ವೇದಿಕೆಯ ಶಂಕರ್, ಚಿಕ್ಕತಿಮ್ಮೇಗೌಡ, ಡಿಎಸ್ಎಸ್ ಟಿಪ್ಪು ಚಂದ್ರು, ಗಂಜಾಂ ರವಿಚಂದ್ರ, ಪುಟ್ಟಸ್ವಾಮಿ, ನಂಜುಂಡ ಮೌರ್ಯ, ಪ್ರಿಯ ರಮೇಶ್, ಅಪ್ಸರ್ ಪಾಷ, ಪಾಂಡವಪುರದ ಕೃಷ್ಣಮೂರ್ತಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...