ಮಂಡ್ಯ | ಗಣಂಗೂರು ಟೋಲ್ ಬಳಿ ಹಾಳಾಗಿರುವ ಸರ್ವೀಸ್ ರಸ್ತೆ; ಅಧಿಕಾರಿಗಳ ನಿರ್ಲಕ್ಷ್ಯ

Date:

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಗಣಂಗೂರು ಟೋಲ್‌ ಬಳಿಯ 500 ಮೀಟರ್ ಹಿಂದೆ ಸರ್ವೀಸ್ ರಸ್ತೆಯಲ್ಲಿ ಬಿದ್ದಿರುವ ದೊಡ್ಡಗುಂಡಿ ರಸ್ತೆಯ ಅಪಾಯವನ್ನು ಉಂಟುಮಾಡುತ್ತಿದೆ.

ಈ ಸ್ಥಳದಲ್ಲಿ ಕ್ರಷರ್, ಟಿಪ್ಪರ್ ಲಾರಿಗಳ ಸಂಚಾರ ಹೆಚ್ಚಿದ್ದು, ವೇಗವಾಗಿ ಬರುವ ವಾಹನಗಳಿಗೆ ಗುಂಡಿ ಸ್ಪಷ್ಟವಾಗಿ ಕಾಣುವುದಿಲ್ಲ. ಬೈಕ್ ಸವಾರರು ತಮ್ಮ ಕುಟುಂಬ ಸದಸ್ಯರು, ಮಕ್ಕಳು, ವಯಸ್ಸಾದವರು ಸೇರಿದಂತೆ ಎಲ್ಲರನ್ನೂ ಕೂರಿಸಿಕೊಂಡು ಈ ರಸ್ತೆಯಲ್ಲಿ ಸಂಚರಿಸುತ್ತಾರೆ. ಸ್ವಲ್ಪ ಜಾಗೃತಿ ತಪ್ಪಿದರೆ, ಅಪಘಾತಗಳ ಸಂಭವ ಹಾಗೂ ಸಾವು ಖಚಿತವಾಗಿದೆ.

ರಸ್ತೆಯ ಮೇಲೆ ನೀರು ಹರಿಯುವ ಕಾರಣದಿಂದಾಗಿ ಬೃಹತ್‌ ಲೋಡು ತುಂಬಿದ ಲಾರಿಗಳು ರಸ್ತೆಯನ್ನು ಇನ್ನಷ್ಟು ಹಾಳು ಮಾಡುತ್ತಿವೆ. ಸರ್ವೀಸ್‌ ರಸ್ತೆಯಲ್ಲಿನ ವಾಹನ ಸವಾರರೂ ಕೂಡ ಸರ್ಕಾರಕ್ಕೆ ತೆರಿಗೆ ಪಾವತಿಸುತ್ತಾರೆ. ಆದರೆ, ಹೆದ್ದಾರಿ ರಸ್ತೆಯಲ್ಲಿ ಸಂಚರಿಸುವ ಶ್ರೀಮಂತರ ಜೀವಗಳು ಮಾತ್ರ ಅಮೂಲ್ಯವೆಂದು ಕಾಣಲಾಗುತ್ತಿದೆ. ಸರ್ವೀಸ್ ರಸ್ತೆಯಲ್ಲಿ ಸಂಚರಿಸುವ ಸಾಮಾನ್ಯರ ಪ್ರಾಣಗಳು ಕನಿಷ್ಠವೆಂದು ನಿರ್ಲಕ್ಷ್ಯ ಮಾಡುತ್ತಿರುವ ಎನ್‌ಎಚ್‌ಐ ಇಲಾಖೆಯ ಮೇಲೆ ಯಾಕೆ ಕ್ರಮ ಕೈಗೊಳ್ಳುತ್ತಿಲ್ಲ. ಯಾಕೆ ದಂಡ ವಿಧಿಸಲಾಗುವುದಿಲ್ಲ” ಎಂಬುದು ಪ್ರಶ್ನೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಾಗೇಪಲ್ಲಿ | ಶಾಸಕ ಮುನಿರತ್ನ ರಾಜೀನಾಮೆಗೆ ಡಿಎಸ್‌ಎಸ್‌ ಒತ್ತಾಯ

ಸರ್ಕಾರ, ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರ್‌ಟಿಒ ಕಚೇರಿಗಳು ಸಾಮಾನ್ಯ ಜನರ ಮೇಲೆ ಮಾತ್ರ ದಂಡ ವಿಧಿಸುತ್ತಿರುವ ಬದಲಿಗೆ, ಇಂತಹ ಅಪಾಯಕಾರಿ ಸ್ಥಿತಿಗಳನ್ನು ನಿರ್ಲಕ್ಷಿಸುವವರ ಮೇಲೂ ಕ್ರಮ ತೆಗೆದುಕೊಳ್ಳಬೇಕು.

Untitled 24
ನಗರಕೆರೆ ಜಗದೀಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...