ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರಕ್ಕೆ ಆಗ್ರಹ

Date:

ಮಂಡ್ಯದಲ್ಲಿ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂದು ಆಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿ ಒತ್ತಾಯಿಸಿದೆ. ಮಂಡ್ಯದ ಉಸ್ತುವಾರಿ ಸಚಿವ ಎನ್‌ ಚಲುವರಾಯಸ್ವಾಮಿ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ.

ಇತ್ತೀಚೆಗೆ, ಸಾಹಿತ್ಯ ಸಮ್ಮೇಳನದಲ್ಲಿನ ಆಹಾರ ವ್ಯವಸ್ಥೆಯ ಬಗ್ಗೆ ಮಾತನಾಡಿದ್ದ ಕನ್ನಡ ಸಾಹಿತ್ಯ ಪರಿಷತ್‌ನ ಅಧ್ಯಕ್ಷ ಮಹೇಶ್‌ ಜೋಶಿ, ಸಮ್ಮೇಳನದಲ್ಲಿ ಮಾಂಸಾಹಾರವನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದರು. ಅವರ ಹೇಳಿಕೆ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸಮ್ಮೇಳನದಲ್ಲಿ ಮಾಂಸಾಹಾರವನ್ನೂ ನೀಡಬೇಕೆಂಬ ಒತ್ತಾಯಗಳು ಕೇಳಿಬರುತ್ತಿವೆ.

ಸಚಿವರಿಗೆ ಹಕ್ಕೊತ್ತಾಯ ಸಲ್ಲಿಸಿರುವ ಅಹಾರ ಸಂರಕ್ಷಣಾ ಜನಜಾಗೃತಿ ಅಭಿಯಾನ ಸಮಿತಿಯ ಮುಖಂಡರು, “ಸಮ್ಮೇಳನದಲ್ಲಿ ಸಸ್ಯಾಹಾರ ಮತ್ತು ಮಾಂಸಾಹಾರ -ಎರಡನ್ನೂ ನೀಡಬೇಕು. ಮೊಟ್ಟೆ , ಕೋಳಿ ಮಾಂಸ ನೀಡುವ ಮೂಲಕ ಬಹುಜನರ ಆಹಾರ ಸಂಸ್ಕೃತಿಯನ್ನು ಗೌರವಿಸಬೇಕು. ಅಲ್ಲದೆ, ಆಹಾರ ಗೋಷ್ಠಿಯನ್ನೂ ಏರ್ಪಡಿಸಬೇಕು. ಆಹಾರದ ಬಗ್ಗೆ ಚರ್ಚೆಗಳು ನಡೆಯಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಡೂಟ, ಬಾಡಿಲ್ಲದ ಊಟ ಎರಡೂ ಇರಲಿ

ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ… ಬಾಡಿಲ್ಲದ ಊಟ…. ಎರಡೂ ಇರಲಿ. ಯಾವುನ್ನು ತಿನ್ನಬೇಕು ಎಂಬುದನ್ನು ಜನರ ವಿವೇಚನೆ ಬಿಡಬೇಕು. ಸಸ್ಯಾಹಾರವೇ ಶ್ರೇಷ್ಠ ಎಂಬ ಹಲವು ದಶಕಗಳ ಹೇರಿಕೆಯನ್ನು ಮಂಡ್ಯ ಸಮ್ಮೇಳನದಲ್ಲಿ ಸುಳ್ಳಾಗಿಸುವ ಮೂಲಕ ಮಾಂಸಾಹಾರಕ್ಕೂ ಅವಕಾಶ ನೀಡಬೇಕೆಂಬ ಮಾತುಗಳು ಕೇಳಿ ಬರುತ್ತವೆ.

ರಾಷ್ಟ್ರಕವಿ ಹಾಗೂ ರಾಜ್ಯದ ಮೊದಲ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪು ಅವರು ಮಾಂಸಾಹಾರಿಯಾಗಿದ್ದರು, ಕನ್ನಡ ಚಿತ್ರರಂಗದ ಮೇರು ನಟ ಡಾ. ರಾಜ್ ಕುಮಾರ್ ಕೂಡ ಮಾಂಸಾಹಾರಿಯಾಗಿದ್ದರು. ಮಂಡ್ಯ ನೆಲೆದ ಪ್ರಸಿದ್ದ ನಟ ಹಾಗೂ ರಾಜಕಾರಣಿ ಅಂಬರೀಶ್ ಕೂಡ ಮಾಂಸ ಪ್ರಿಯರಾಗಿದ್ದರು. ವಿಷ್ಟುವರ್ಧನ್ ಕೂಡ ಅಂಬರೀಶ್‌ ಜೊತೆ ಬಾಡೂಟ ಸವಿದಿರುವ ನಿದರ್ಶನಗಳಿವೆ. ಹೀಗಿರುವಾಗ ಹಲವು ದಶಕಗಳಿಂದ ಸಸ್ಯಾಹಾರವೇ ಶ್ರೇಷ್ಠ ಎಂಬ ಭ್ರಮೆಯನ್ನು ವೈದಿಕಶಾಹಿಗಳು ಜನರ ತಲೆಯಲ್ಲಿ ತುಂಬಿ ಮಾಂಸಾಹಾರ ಕನಿಷ್ಠ ಎಂದು ಬಹುಜನರ ಆಹಾರ ಸಂಸ್ಕೃತಿ ಮೇಲೆ ದಾಳಿ ಮಾಡಲಾಗುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

image 28

ಸಮ್ಮೇಳನದಲ್ಲಿ ಎಲ್ಲ ಧರ್ಮ, ಜಾತಿ, ಜನಾಂಗದವರು ಪಾಲ್ಗೊಳುವಿಕೆ ಇರುತ್ತದೆ. ಹಾಗಾಗಿ ಅವರವರ ಆಹಾರ ಸಂಸ್ಕೃತಿಯನ್ನು ರಾಜ್ಯದಲ್ಲಿರುವ ಜಾತ್ಯತೀತ ಸರ್ಕಾರ ಗೌರವಿಸುವ ಕೆಲಸ ಮಾಡಲಿ, ಎಲ್ಲಕ್ಕಿಂತ ಮಿಗಿಲಾಗಿ ಭಾರತದ ಸಂವಿಧಾನವು ಕೂಡ ಸಮಾನತೆ, ಸಹೋದರತೆ, ಭ್ರಾತೃತ್ವವನ್ನು ಪ್ರತಿಪಾದಿಸುತ್ತದೆ. ಇದು ಸಾಧ್ಯವಾಗಬೇಕಾದರೆ ಮಾಂಸಾಹಾರವನ್ನು ಸ್ವಾಗತಿಸುವ ಕೆಲಸವಾಗಬೇಕಿದೆ ಎಂದು ಸಾಹಿತಿಗಳು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಪ್ರತಿಪಾದಿಸಿದ್ದಾರೆ.

ಸಾಹಿತ್ಯ ಸಮ್ಮೇಳನದಲ್ಲಿ ಆಹಾರಕ್ಕಾಗಿಯೇ ಕೋಟ್ಯಂತರ ರೂಪಾಯಿ ಹಣವನ್ನು ವೆಚ್ಚ ಮಾಡಲಾಗುತ್ತದೆ. ಹೀಗಿರುವಾಗ ಬಹುಸಂಖ್ಯಾತರ ಮಾಂಸಾಹಾರವನ್ನು ನಿರಾಕರಿಸಲು ಹೇಗೆ ಸಾಧ್ಯ? ಸಮ್ಮೇಳನದಲ್ಲಿ ಮಾಂಸಾಹಾರ ನೀಡಿದರೆ ಇದುವರೆಗಿನ ಸಾಹಿತ್ಯ ಸಮ್ಮೇಳನಗಳಲ್ಲಿ ನಡೆದು ಬಂದು ಮಾಂಸಾಹಾರ ‘ಕನಿಷ್ಠ’ ಎಂಬ ಮನೋಭಾವನೆಯನ್ನು ತೊಡೆದು ಹಾಕಬಹುದು. ಇದರಿಂದಾಗಿ ಕನ್ನಡ ಸಾಹಿತ್ಯದಲ್ಲಿ ಇದೊಂದು ಐತಿಹಾಸಿಕ ಮೈಲಿಗಲ್ಲಾಗುವುದರ ಜೊತೆಗೆ ಮಂಡ್ಯದ ಹೆಸರು ಕೂಡ ಇತಿಹಾಸದಲ್ಲಿ ದಾಖಲಾಗುತ್ತದೆ ಎಂದು ಮಂಡ್ಯದ ಜನರು ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...