ಮಂಡ್ಯ | ಆರೋಗ್ಯ ಸೇವೆ ಬಲವರ್ಧನೆಗಾಗಿ 50ಕ್ಕೂ ಹೆಚ್ಚು ಪಿಎಚ್‌ಸಿಗಳಿಗೆ ಇಸಿಜಿ ಯಂತ್ರ ವಿತರಣೆ

Date:

ಮಂಡ್ಯ ಜಿಲ್ಲೆಯ ಜನರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರವನ್ನು ಸಿಆರ್ಎಸ್ ಅನುದಾನದ ಮೂಲಕ ಕೊಡಿಸಿದ್ದಾರೆ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಕೃಷಿ ಸಚಿವ ಎನ್ ಚೆಲುವರಾಯಸ್ವಾಮಿ ಹೇಳಿದರು.

ಮಂಡ್ಯ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ನಗರದ ಮಿಮ್ಸ್ ಆಡಿಟೋರಿಯಂನಲ್ಲಿ ಆಯೋಜಿಸಲಾಗಿದ್ದ ರಾಜ್ಯದ ಪ್ರಥಮ ದಂತ ಚಿಕಿತ್ಸೆಯ ಆಶಾಕಿರಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಪ್ರಸ್ತುತ ಸನ್ನಿವೇಶದಲ್ಲಿ ವಾತಾವರಣವೇ ವಿಷವಾಗಿ ಪರಿವರ್ತನೆಗೊಳ್ಳುತ್ತಿದೆ. ಆದ್ದರಿಂದಲೇ ಮಗು ಹುಟ್ಟುವ ಮೊದಲು ಹತ್ತಾರು ಚಿಕಿತ್ಸೆ ಹಾಗೂ ಹುಟ್ಟಿದ ನಂತರವೂ ಹಲವಾರು ಚಿಕಿತ್ಸೆಗಳಿಗೆ ಒಳಪಡಿಸಲಾಗುತ್ತದೆ. ಸಾರ್ವಜನಿಕರು ಕೂಡ ತಮ್ಮ ಆರೋಗ್ಯವನ್ನು ಕಾಲ ಕಾಲಕ್ಕೆ ತಪಾಸಣೆ ಮಾಡಿಸಿಕೊಳ್ಳಬೇಕು ಹಾಗೂ ಆರೋಗ್ಯ ಕಾಪಾಡಿಕೊಳ್ಳಬೇಕು. ಎಲ್ಲಾ ಮಟ್ಟದ ಆರೋಗ್ಯ ಇಲಾಖೆಯ ಸಿಬ್ಬಂದಿಗಳು ತಮ್ಮ ಕಾರ್ಯವನ್ನು ಗಂಭೀರವಾಗಿ ಪರಿಗಣಿಸಿ ಕೆಲಸ ನಿರ್ವಹಿಸಬೇಕು” ಎಂದರು.

WhatsApp Image 2025 11 03 at 7.22.58 PM

“ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಸಹ ಅತಿ ಮುಖ್ಯ. ದಂತಕ್ಕೆ ಸಂಬಂಧಪಟ್ಟ ಸಮಸ್ಯೆಗಳ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಪ್ರಾರಂಭಿಕವಾಗಿ ಮಳವಳ್ಳಿ ಹಾಗೂ ನಾಗಮಂಗಲದಲ್ಲಿ ವಸಡುಗಳಿಗೆ ಸಂಬಂಧಿಸಿದಂತೆ ಚಿಕಿತ್ಸೆ ನೀಡಲಾಗುತ್ತದೆ ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲೂ ದಂತ ಚಿಕಿತ್ಸೆಯ ಆಶಾಕಿರಣ ಯೋಜನೆಯಡಿ ವಸಡುಗಳ ಚಿಕಿತ್ಸೆ ಪ್ರಾರಂಭವಾಗುತ್ತದೆ. ಜಿಲ್ಲೆಯಲ್ಲಿ ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲೂ ದಂತ ಚಿಕಿತ್ಸೆಯ ಆಶಾಕಿರಣ ಯೋಜನೆಯಡಿ ನುರಿತ ದಂತ ವೈದ್ಯರು ಆಗಮಿಸಿ ತಪಾಸಣೆ ನಡೆಸಲಿದ್ದಾರೆ. 30-40 ಸಾವಿರ ತಗುಲುವ ಚಿಕಿತ್ಸೆಗಳನ್ನು ಗ್ರಾಮೀಣ ಭಾಗದ ರೈತರ ಅನುಕೂಲಕ್ಕಾಗಿ 2-3 ಸಾವಿರ ತೆಗೆದುಕೊಂಡು ಚಿಕಿತ್ಸೆ ಮಾಡಲಾಗುವುದು ಸಾರ್ವಜನಿಕರು ಇಂತಹ ಸದಾವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಮಂಡ್ಯ | ರೈತನ ಮೇಲೆ ಹುಲಿ ದಾಳಿ

“ನಮ್ಮ ಜಿಲ್ಲೆಯಲ್ಲಿಯೇ ಆದಿ ಚುಂಚನಗಿರಿ ಆಸ್ಪತ್ರೆ ಇದೆ. ಅಲ್ಲೂ ಸಹ ನುರಿತ ವೈದ್ಯರು ಕಾರ್ಯ ನಿರ್ವಹಿಸುತ್ತಿದ್ದಾರೆ. ಆರೋಗ್ಯ ಇಲಾಖೆ ಅಧಿಕಾರಿಗಳು ಸಾರ್ವಜನಿಕರಿಗೆ ಆರೋಗ್ಯವನ್ನು ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಸರಿಯಾಗಿ ಮಾರ್ಗದರ್ಶನ ನೀಡಬೇಕು” ಎಂದು ಹೇಳಿದರು.

ಸಭೆಯಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಜಿಲ್ಲಾಧಿಕಾರಿ ಡಾ ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ಅಧೀಕ್ಷಕ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ ಕೆ ಮೋಹನ್ ಮಿಮ್ಸ್ ನಿರ್ದೇಶಕ ಡಾ.ನರಸಿಂಹಸ್ವಾಮಿ, ಜಿಲ್ಲಾ ವೈದ್ಯಕೀಯ ಅಧೀಕ್ಷಕ ಶಿವಕುಮಾರ್, ಆರ್ ಸಿ ಎಚ್ ಅಧಿಕಾರಿ ಡಾ ಅಶ್ವತ್ಥ್, ಡಾ. ಆಶಾಲತಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...