ಮಂಡ್ಯ | ಸ್ಲಂಬೋರ್ಡ್ ವಸತಿ ಗೃಹಗಳಿಗೆ ಅತಿಕ್ರಮ ಪ್ರವೇಶ; ಖಾಲಿ ಮಾಡಿಸಿದ ಅಧಿಕಾರಿಗಳು

Date:

ತಮಿಳು ಕಾಲೊನಿ ನಿವಾಸಿಗಳಿಗಾಗಿ ಮಂಡ್ಯ ನಗರದ ಹೊರವಲಯದ ಚಿಕ್ಕಮಂಡ್ಯ ಕೆರೆಯಂಗಳದಲ್ಲಿ ನಿರ್ಮಿಸಿದ ಸ್ಲಂಬೋರ್ಡ್ ವಸತಿ ಗೃಹಗಳಿಗೆ ಮುಸ್ಲಿಂ ಸಮುದಾಯದ ಕೆಲವು ಜನರು ಅತಿಕ್ರಮವಾಗಿ ಪ್ರವೇಶಿಸಿದ್ದರಿಂದ ಕೆಲಕಾಲ ಗೊಂದಲದ ವಾತಾವರಣದ ಸೃಷ್ಟಿಯಾಗಿತ್ತು.  

ಖಾಲಿ ಮನೆಗಳನ್ನು ಹಿಡಿದುಕೊಂಡರೆ ಆ ಮನೆಗಳು ಅವರಿಗೇ ಸೇರುತ್ತವೆಂಬ ಸುಳ್ಳು ವದಂತಿ ಹಿನ್ನೆಲೆಯಲ್ಲಿ ನಗರದ ನಾನಾ ಬಡಾವಣೆಗಳಲ್ಲಿ ವಾಸಿಸುತ್ತಿದ್ದ ಮುಸ್ಲಿಮರು ಬುಧವಾರ ಲಾರಿಗಳ ಮೂಲಕ ತಂಡೋಪ ತಂಡವಾಗಿ ಬಂದು ತಮಗಿಷ್ಟವಾದ ಮನೆಗಳಿಗೆ ಪ್ರವೇಶ ಮಾಡಿದರು. ಸಾಕಷ್ಟು ಮನೆ ಪಾತ್ರೆ ಸಾಮಾನುಗಳು ಹಾಗೂ ಬಟ್ಟೆ‌ಗಳೊಂದಿಗೆ ಬಂದಿದ್ದರು ಎನ್ನಲಾಗಿದೆ. 

ವಿಷಯ ತಿಳಿದ ಉಪವಿಭಾಗಾಧಿಕಾರಿ ಶಿವಮೂರ್ತಿ, ಡಿವೈಎಸ್‌ಪಿ ಲಕ್ಷ್ಮೀನಾರಾಯಣ ಪ್ರಸಾದ್, ಕಂದಾಯ ಇಲಾಖೆ ಮತ್ತು ಕೊಳಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ಮನೆಗಳಿಗೆ ಪ್ರವೇಶ ಮಾಡಿದ ಜನರು ಮತ್ತು ಮುಸ್ಲಿಂ ಸಮುದಾಯದ ಮುಖಂಡರೊಂದಿಗೆ ಸಮಾಲೋಚನೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವೇಳೆ “ತಮಗ್ಯಾರಿಗೂ ಸ್ವಂತ ಮನೆ ಅಥವಾ ನಿವೇಶನಗಳಿಲ್ಲ. ಈ ಮನೆಗಳು ಖಾಲಿ ಇರುವುದರಿಂದ ನಮಗೆ ಕೊಡಿ. ನಾವು ಇಲ್ಲೇ ವಾಸಿಸುತ್ತೇವೆ. ಕಾನೂನು ಬದ್ಧವಾಗಿ ಹಂಚಿಕೆ ಪ್ರಕ್ರಿಯೆ ನಡೆಯುವವರೆಗೆ ಬೇಕಿದ್ದರೆ ಬಾಡಿಗೆ ಪಾವತಿಸಲು ನಾವು ಸಿದ್ಧ” ಎಂದು ಮುಸ್ಲಿಂ ಸಮುದಾಯದ ಜನರು ಒತ್ತಾಯಿಸಿದರು.

“ತಮಿಳು ಕಾಲೊನಿ ನಿವಾಸಿಗಳ ಸ್ಥಳಾಂತರಕ್ಕೆ ನ್ಯಾಯಾಲಯದ ತಡೆಯಾಜ್ಞೆಯಿದೆ. ಹೀಗಾಗಿ ಸ್ಥಳಾಂತರ ಮಾಡಿಲ್ಲ. ಕೆರೆಯಂಗಳದಲ್ಲಿ ನಿರ್ಮಿಸಿರುವ ಈ ಮನೆಗಳು ತಮಿಳು ಕಾಲೊನಿ ನಿವಾಸಿಗಳಿಗಾಗಿ ಮೀಸಲಾಗಿವೆ. ನಿಮಗೆ ಮನೆಗಳಿಲ್ಲವೆಂದರೆ ನೀವು ಅರ್ಜಿಗಳನ್ನು ಕೊಡಿ. ಮುಂದಿನ ಹಂತದಲ್ಲಿ ನಿಮ್ಮ ಅರ್ಜಿಗಳನ್ನು ಪರಿಗಣಿಸುತ್ತೇವೆ” ಎಂದು ಅಧಿಕಾರಿಗಳು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕನ್ನಡ ನಾಡಿನ ಏಕೀಕರಣಕ್ಕೆ ಮುನ್ನುಡಿ ಬರೆದ ಜಿಲ್ಲೆ ಬಳ್ಳಾರಿ: ಯಶವಂತ್‌ರಾಜ್ ನಾಗಿರೆಡ್ಡಿ

ಉಪವಿಭಾಗಾಧಿಕಾರಿ ಶಿವಮೂರ್ತಿ ಮಾತನಾಡಿ, “ಅತಿಕ್ರಮ ಪ್ರವೇಶ ಮಾಡುವುದು ಕಾನೂನುಬಾಹಿರ. ಹೀಗಾಗಿ ನೀವು ತಕ್ಷಣವೇ ಮನೆಗಳನ್ನು ಖಾಲಿ ಮಾಡಬೇಕು. ಸುಳ್ಳು ವದಂತಿಯಿಂದ ನೀವೆಲ್ಲಾ ಬಂದಿದ್ದೀರಿ” ಎಂದು ಮನವರಿಕೆ ಮಾಡಿದ ಹಿನ್ನೆಲೆಯಲ್ಲಿ ಎಲ್ಲರೂ ಮನೆಗಳನ್ನು ಬಿಟ್ಟು ಹಿಂತಿರುಗಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...