ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತನೊಬ್ಬ ಹೃದಯಾಘಾತದಿಂದ ಸ್ಥಳದಲ್ಲೇ ಮೃತಪಟ್ಟ ಘಟನೆ ಮಂಡ್ಯ ತಾಲೂಕಿನ ಎಸ್ಐ ಕೋಡಿಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮೃತರನ್ನು ಕೋಡಿಹಳ್ಳಿ ನಿವಾಸಿ ಶಿವಣ್ಣಗೌಡ (55) ಎಂದು ಗುರುತಿಸಲಾಗಿದೆ. ಅವರು ತಮ್ಮ ಜಮೀನಿನಲ್ಲಿ ಹಿಪ್ಪುನೇರಳೆ ಕಟ್ಟಿಗೆ ಉಳುಮೆ ಮಾಡುತ್ತಿದ್ದ ವೇಳೆ ಏಕಾಏಕಿ ಎದೆನೋವು ಕಾಣಿಸಿಕೊಂಡಿದ್ದು, ಕ್ಷಣಾರ್ಧದಲ್ಲೇ ಕುಸಿದು ಬಿದ್ದರು ಎಂದು ಸ್ಥಳೀಯರು ತಿಳಿಸಿದ್ದಾರೆ.
ಶಿವಣ್ಣಗೌಡ ಅವರು ರೇಷ್ಮೆ ಬೆಳೆ ಬೆಳೆದು ಜೀವನ ಸಾಗಿಸುತ್ತಿದ್ದು, ತಮ್ಮ ಕುಟುಂಬದ ಪ್ರಮುಖ ಆಧಾರಸ್ತಂಭವಾಗಿದ್ದರು. ಅವರ ನಿಧನದಿಂದ ಪತ್ನಿ ಮತ್ತು ಇಬ್ಬರು ಚಿಕ್ಕ ಮಕ್ಕಳು ಕಂಗಾಲಾಗಿದ್ದಾರೆ.
ಇದನ್ನೂ ಓದಿ: ಮಂಡ್ಯ | ರೈತನ ಮೇಲೆ ಹುಲಿ ದಾಳಿ
ಘಟನಾ ಸ್ಥಳಕ್ಕೆ ಕೆರಗೋಡು ಪೊಲೀಸ್ ಠಾಣೆಯ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.





