ಮಂಡ್ಯ | ರೈತರು ಸಮಗ್ರ ಕೃಷಿ, ಕೃಷಿ ಉತ್ಪನ್ನಗಳ ಮೌಲ್ಯವರ್ಧನೆ ಮಾಡಬೇಕು: ಸಿಎಂ ಸಿದ್ದರಾಮಯ್ಯ

Date:

ರೈತರು ತಮ್ಮ ವ್ಯವಸಾಯ ಪದ್ದತಿಯಲ್ಲಿ ಸಮಗ್ರ ಕೃಷಿ ಪದ್ಧತಿಯನ್ನು ಅನುಸರಿಸಬೇಕು ಹಾಗೂ ಉತ್ಪಾದಿಸಿದ ಉತ್ಪನ್ನಗಳನ್ನು ಮೌಲ್ಯವರ್ಧನೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕೃಷಿ ಮತ್ತು ತೋಟಗಾರಿಕೆ ಇಲಾಖೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ ಇಲಾಖೆ, ರೇಷ್ಮೆ, ಅರಣ್ಯ, ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ನಬಾರ್ಡ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಂಡ್ಯ ನಗರದ ವಿ ಸಿ ಫಾರಂ ಆವರಣದಲ್ಲಿ ಆಯೋಜಿಸಿದ್ದ “ಕೃಷಿ ಮೇಳ 2025” ಸಮಗ್ರ ಕೃಷಿಯಿಂದ ಸುಸ್ಥಿರತೆ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಸ್ಥಾಪಿಸಲು ನನ್ನ ಮುಂದೆ ಮೊದಲು ಬೇಡಿಕೆ ಇಟ್ಟವರು ಕೃಷಿ ಸಚಿವರು. ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು ಭಾಗದ ರೈತರಿಗಾಗಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಅಗತ್ಯವಿರುವುದು ನನಗೂ ತಿಳಿಯಿತು. ನಂತರ ಸದರಿ ವಿಚಾರವನ್ನು ಕ್ಯಾಬಿನೆಟ್‌ನಲ್ಲಿ ಚರ್ಚೆ ಮಾಡಿ ಎಲ್ಲ ಸಚಿವರ ಒಪ್ಪಿಗೆ ಪಡೆದು ಮಂಡ್ಯದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಂಡ್ಯ ಭಾಗದ 5 ಜಿಲ್ಲೆಗಳ ಪ್ರಮುಖ ಬೆಳೆಗಳ ಪ್ರಾತ್ಯಕ್ಷಿಕೆಗಳನ್ನು ಕೃಷಿ ಮೇಳದಲ್ಲಿ ಆಯೋಜಿಸಲಾಗಿದೆ. ಕೃಷಿ ವಿಜ್ಞಾನ ವಿಶ್ವವಿದ್ಯಾನಿಲಯಗಳು ಅಭಿವೃದ್ಧಿಪಡಿಸಿದ ತಳಿಗಳು ಮತ್ತು ತಂತ್ರಜ್ಞಾನವನ್ನು ತಮ್ಮಲ್ಲಿಗೆ ಇಟ್ಟುಕೊಂಡರೆ ಪ್ರಯೋಜನವಿಲ್ಲ. ಅದನ್ನು ರೈತರಿಗೆ ತಲುಪಿಸಬೇಕು. ಆಗ ಮಾತ್ರ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ. ಭಾರತ ಕೃಷಿ ಪ್ರಧಾನ ಜಿಲ್ಲೆ ಇತ್ತೀಚಿನ ದಿನಗಳಲ್ಲಿ ಕೃಷಿಕರ ಸಂಖ್ಯೆ ಇಳಿಮುಖವಾಗಿದೆ” ಎಂದು ಅಭಿಪ್ರಾಯಪಟ್ಟರು.

“ಮಂಡ್ಯ ಕೃಷಿ ಪ್ರಧಾನವಾದ ಜಿಲ್ಲೆ. ನಾನು ರಾಜಕೀಯಕ್ಕೆ ಬರುವ ಮೊದಲು ಕೃಷಿಕನಾಗಿದ್ದೆ. ಮೈಸೂರಿನ ರೈತ ಸಂಘದ ಮೊದಲ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ಕೃಷಿಯನ್ನು ವೈಜ್ಞಾನಿಕ ವಿಧಾನದಲ್ಲಿ ಮಾಡಿದಾಗ ಕೃಷಿಯಿಂದ ಹೆಚ್ಚಿನ ಲಾಭಗಳಿಸಬಹುದು. ರೈತರು ತಾವು ಬೆಳೆದ ಬೆಳೆಗಳನ್ನು ಮೌಲ್ಯವರ್ಧನೆ ಮಾಡಬೇಕು” ಎಂದು ಹೇಳಿದರು.

“ಇತ್ತೀಚಿನ ದಿನಗಳಲ್ಲಿ ಕೃಷಿ ಕಾರ್ಯಕ್ಕೆ ಮಾನವ ಸಂಪನ್ಮೂಲ ಕಡಿಮೆ ಇದೆ. ರೈತರು ಆಧುನಿಕ ಯಂತ್ರೋಪಕರಣಗಳನ್ನು ಬೆಳೆಸಿ ಕೃಷಿ ಮಾಡಬೇಕು. ಇದರಿಂದ ಸಮಯ ಮತ್ತು ಹಣ ಎರಡನ್ನೂ ಉಳಿತಾಯ ಮಾಡಬಹುದು. ಸರ್ಕಾರ ಕೃಷಿ ಯಂತ್ರೋಪಕರಣಗಳು ಸೇರಿದಂತೆ ಅನೇಕ ಸವಲತ್ತುಗಳನ್ನು ನೀಡುತ್ತ ಬಂದಿದೆ” ಎಂದು ಹೇಳಿದರು.

ಅಂತಾರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿ ಸ್ಥಾಪನೆಗೆ ಬೇಡಿಕೆ

“ಮಂಡ್ಯ ವಿಜ್ಞಾನಿಗಳ ವಿಶ್ವವಿದ್ಯಾನಿಲಯದಲ್ಲಿ ಅಂತಾರಾಷ್ಟ್ರೀಯ ಸ್ಯಾಂಡ್ವಿಚ್ ಸ್ನಾತಕೋತರ ಪದವಿಯನ್ನು ತೆರೆಯಲು ಕೃಷಿ ವಿಜ್ಞಾನಿಗಳು ಬೇಡಿಕೆ ಇಟ್ಟಿದ್ದಾರೆ. ಸದರಿಯ ಸ್ನಾತಕೋತರ ಪದವಿಯನ್ನು ತೆರೆಯಲು ಪ್ರಯತ್ನ ಪಡುತ್ತೇನೆ. ಕೃಷಿಯ ಕುರಿತಾಗಿ ನನಗೆ ಅಪಾರವಾದ ಕಾಳಜಿ ಇದೆ. ನಮ್ಮ ದೇಶದ ಜಿಡಿಪಿಗೆ ಕೃಷಿ ವಲಯ ಹೆಚ್ಚು ಶ್ರಮಿಸುತ್ತಿದೆ” ಎಂದರು.

“ಎಲ್ಲ ಜಾತಿ ಧರ್ಮಗಳಲ್ಲೂ ಬಡವರು ಹಾಗೂ ಕೃಷಿಕರು ಇದ್ದಾರೆ. ಎಲ್ಲರಲ್ಲೂ ಸಮಾನತೆ ಬರಬೇಕು. ಡಾ. ಬಿ ಆರ್ ಅಂಬೇಡ್ಕರ್ ಅವರು ಹೇಳಿದಂತೆ ಎಲ್ಲ ಸಮಾಜದಲ್ಲೂ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಸಮಾನತೆ ಬಂದಾಗ ಮಾತ್ರ ಅಸಮಾನತೆಯನ್ನು ಓಡಿಸಬಹುದು. ಸಮಾಜದಲ್ಲಿ ಅನ್ಯಾಯಕ್ಕೊಳಗಾದ ಶೋಷಿತ ಸಮುದಾಯಗಳ ಮಹಿಳೆಯರ, ದೀನ ದುರ್ಬಲರನ್ನು ಸರಿದೂಗಿಸಲು ನಮ್ಮ ಸರ್ಕಾರದಲ್ಲಿ ಅನೇಕ ಕಾರ್ಯಕ್ರಮಗಳನ್ನು ನೀಡುತ್ತ ಬಂದಿದ್ದೇವೆ” ಎಂದು ಹೇಳಿದರು.

“ನಮ್ಮ ಸರ್ಕಾರ ರೈತರ ಪರವಾಗಿ ಇರುತ್ತದೆ. ರೈತರನ್ನು ಸಬಲೀಕರಣ ಮಾಡುವುದು ನಮ್ಮ ಉದ್ದೇಶ. ರಾಜ್ಯದ ಸರ್ಕಾರಿ ಸ್ವಾಮ್ಯದಲ್ಲಿರುವ ಏಕೈಕ ಸಕ್ಕರೆ ಕಾರ್ಖಾನೆ, ಮೈ ಶುಗರ್ ಉಳಿಸಿಕೊಳ್ಳಲು ರಾಜ್ಯ ಸರ್ಕಾರ 50 ಕೋಟಿ ಹಣವನ್ನು ನೀಡಿದೆ. ಮೈ ಶುಗರ್ ಸಕ್ಕರೆ ಕಾರ್ಖಾನೆಯ ವಿದ್ಯುತ್ ಬಿಲ್ಲನ್ನು ಮನ್ನಾ ಮಾಡಿದೆ. ಮೈ ಶುಗರ್ ಕಾರ್ ಕಾರ್ಖಾನೆ ಹೊಸ ಬಾಯ್ಲಿಂಗ್ ಹೌಸ್ ನೀಡಲಾಗುವುದು” ಎಂದರು.

“ನಮ್ಮ ಸರ್ಕಾರ ರಾಜ್ಯದ ಜನರ ಅಭಿವೃದ್ಧಿಗಾಗಿ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಮಂಡ್ಯ ಜಿಲ್ಲೆಯ 18 ಕೋಟಿ ಮಂದಿ ಮಹಿಳೆಯರು ಶಕ್ತಿ ಯೋಜನೆ ಅಡಿ ಪ್ರಯಾಣ ಬೆಳೆಸಿದ್ದಾರೆ. ಜಿಲ್ಲೆಯ 4 ಲಕ್ಷಕ್ಕೂ ಹೆಚ್ಚು ಮನೆಗಳಿಗೆ ಉಚಿತವಾಗಿ ವಿದ್ಯುತ್ ನೀಡಲಾಗುತ್ತಿದೆ. ನಮ್ಮ ರಾಜ್ಯದ ಕಬ್ಬು ಹಾಗೂ ಹೊರ ರಾಜ್ಯದ ಕಬ್ಬಿನ ಗುಣಮಟ್ಟದಲ್ಲಿ ವ್ಯತ್ಯಾಸವಿದೆ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯ ಇದರ ಕುರಿತಾಗಿ ಸಂಶೋಧನೆಯನ್ನು ನಡೆಸಿ ಕಬ್ಬಿನ ಗುಣಮಟ್ಟ ಹೆಚ್ಚಿಸಿ” ಎಂದು ಹೇಳಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಹಾಗೂ ಕೃಷಿ ಸಚಿವ‌ ಎನ್ ಚೆಲುವರಾಯಸ್ವಾಮಿ ಮಾತನಾಡಿ, “ಪ್ರತಿ ವರ್ಷ ವಿ ಸಿ ಫಾರಂನಲ್ಲಿ ಕೃಷಿ ಮೇಳ ಆಯೋಜನೆ ಮಾಡಿಕೊಂಡು ಬರಲಾಗುತ್ತಿದೆ. ಸದರಿ ವರ್ಷ ಮಂಡ್ಯ ವಿಶ್ವವಿದ್ಯಾಲಯ ಸ್ಥಾಪನೆಯಾದ ನಂತರ ಮೊದಲ ಬೃಹತ್ ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ಮೇಳ 2025ರಲ್ಲಿ ಹೆಚ್ಚಿನ ಕೃಷಿ ತಳಿಗಳು, ತಂತ್ರಜ್ಞಾನಗಳನ್ನು ಆಧುನಿಕ ಯಂತ್ರೋಪಕರಣಗಳನ್ನು ಮೇಳದಲ್ಲಿ ಇರಿಸಲಾಗಿದೆ” ಎಂದು ಹೇಳಿದರು.

“ಬೆಂಗಳೂರು ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಆಯೋಜಿಸಲಾಗಿದ್ದ ಕೃಷಿ ಮೇಳದಲ್ಲಿ ಸುಮಾರು 50 ಲಕ್ಷಕ್ಕೂ ಹೆಚ್ಚು ಜನ ಭಾಗಿಯಾಗಿ ಯಶಸ್ವಿಗೊಳಿಸಿದರು. ಮುಂದಿನ ದಿನಗಳಲ್ಲಿ ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯ ಕೃಷಿ ಮೇಳದಲ್ಲಿ ದೊಡ್ಡ ಮಟ್ಟದಲ್ಲಿ ಜನರು ಭಾಗಿಯಾಗುತ್ತಾರೆ” ಎಂದರು.

“1939ರಲ್ಲಿ ಮೊದಲು ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು 630 ಎಕರೆ ಜಾಗದಲ್ಲಿ ಮಂಡ್ಯದ ಕೃಷಿ ವಿಜ್ಞಾನಿಗಳ ಸಂಶೋಧನಾ ಕೇಂದ್ರವನ್ನು ತೆರೆದರು. ನಂತರ ರಾಜ್ಯದ 4 ಭಾಗದಲ್ಲಿ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು. ರಾಜ್ಯದ ಎಲ್ಲ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಉತ್ತಮ ಕೊಡುಗೆ ಹಾಗೂ ಕಾರ್ಯ ಮಾಡುತ್ತ ಮುಂದೆ ಸಾಗುತ್ತಿವೆ” ಎಂದು ಅಭಿಪ್ರಾಯಪಟ್ಟರು.

ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ರಾಜ್ಯದ 5ನೇ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯವಾಗಿ ಹೊರಹೊಮ್ಮಿದೆ. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಸ್ಥಾಪನೆಯಾದ. ಮೊದಲ ವರ್ಷದಲ್ಲೇ ಯುಜಿಸಿ ಮಾನ್ಯತೆ ಪಡೆದಿದೆ. ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯಕ್ಕೆ 2008ರಲ್ಲಿ ಅನುಮತಿ ದೊರೆತಿತ್ತು. ಆದರೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾದ 2013ರ ಅವಧಿಯಲ್ಲಿ ಶಿವಮೊಗ್ಗ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯವನ್ನು ಸ್ಥಾಪಿಸಲಾಯಿತು. ಎಂದು ಹೇಳಿದರು.

“ಬೆಳಗಾವಿಯಲ್ಲಿ ಉಂಟಾದ ಬೆಳೆನಾಶಕ್ಕೆ ಎನ್‌ಡಿಆರ್‌ಎಫ್ ಪರಿಹಾರದ ಮೊತ್ತದ ಜತೆಗೆ ರಾಜ್ಯ ಸರ್ಕಾರ ಪರಿಹಾರವನ್ನು ನೀಡಿತು. ರಾಜ್ಯ ಕಬ್ಬು ಬೆಳೆಗಾರರ ಆರ್ಥಿಕ ಅಭಿವೃದ್ಧಿಗಾಗಿ ಟನ್ ಕಬ್ಬಿಗೆ 50ರೂಪಾಯಿಯನ್ನು ಸರ್ಕಾರ ನೀಡುತ್ತಿದೆ. ರಾಜ್ಯ ಸರ್ಕಾರ ಬಡವರು, ರೈತರು, ಶ್ರಮಿಕರು, ಮಹಿಳೆಯರು ಮತ್ತು ಶೋಷಿತ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ” ಎಂದರು.

“ರಾಜ್ಯ ಸರ್ಕಾರ ರಾಜ್ಯದ ಜನರನ್ನು ಆರ್ಥಿಕವಾಗಿ ಹಾಗೂ ಸಾಮಾಜಿಕವಾಗಿ ಸದೃಢರನ್ನಾಗಿ ಮಾಡಲು ಅನೇಕ ಯೋಜನೆಗಳನ್ನು ನೀಡಿಕೊಂಡು ಬರುತ್ತಿದೆ. ರೈತರನ್ನು ಆರ್ಥಿಕವಾಗಿ ಸಫಲರನ್ನಾಗಿಸಲು ಕೃಷಿ ಮೇಳವನ್ನು ಆಯೋಜಿಸಲಾಗಿದೆ. ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಮಹತ್ವ ಎಲ್ಲರಿಗೂ ಮುಂದಿನ ದಿನಗಳಲ್ಲಿ ತಿಳಿಯುತ್ತದೆ” ಎಂದು ತಿಳಿಸಿದರು.

“ಫಿಲಿಪೈನ್ಸ್ ಅಂತಾರಾಷ್ಟ್ರೀಯ ರೈಸ್ ರಿಸರ್ಚ್ ಸೆಂಟರ್‌ನೊಂದಿಗೆ ಒಡಂಬಡಿಕೆ ಮಾಡಿಕೊಂಡು ರೋಗನಿರೋಧಕ ಭತ್ತದ ತಳಿಗಳನ್ನು ನಮ್ಮಲ್ಲಿ ಬೆಳೆಯಲಾಗುವುದು. ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾನಿಲಯದ ಪೀಠೋಪಕರಣಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿಗಳು 100 ಕೋಟಿ ರೂ. ಮಂಜೂರು ಮಾಡಿದ್ದಾರೆ. ಜಿಲ್ಲೆಯ ಜನತೆ ಹೇಗೆ ಕೃಷಿಯನ್ನು ಲಾಭದಾಯಕವಾಗಿ ಮಾಡಬೇಕು ಎಂಬುದರ ಕುರಿತಾಗಿ ಕೃಷಿಮೇಳ ಆಯೋಜಿಸಲಾಗಿದೆ. ರೈತರು ಇದರಲ್ಲಿ ಭಾಗವಹಿಸಿ ಕೃಷಿಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ” ಎಂದರು.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಈ ಭಾಗಕ್ಕೆ ವಿಶ್ವವಿದ್ಯಾಲಯ ನೀಡಿರುವುದಕ್ಕೆ ಮುಖ್ಯಮಂತ್ರಿಗಳಿಗೆ ಕೃತಜ್ಞತೆ ತಿಳಿಸಿದರು.

“ಮಣ್ಣಿನ ಗುಣಮಟ್ಟವನ್ನು ಕಾಪಾಡುವ ಹಾಗೂ ಕಡಿಮೆ ನೀರು ಬಳಕೆ ಮಾಡಿ ಹೆಚ್ಚು ಇಳುವರಿ ಪಡೆಯಬಹುದು. ಕೃಷಿ ಮೇಳದಲ್ಲಿ ಅನೇಕ ಹೊಸ ತಳಿಯ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ. ಇದನ್ನು ರೈತರು ತಮ್ಮ ಬೇಸಾಯದಲ್ಲಿ ಅಳವಡಿಸಿಕೊಳ್ಳಬೇಕು” ಎಂದರು.

“ರೈತರ ಜೀವನವನ್ನು ಸುಧಾರಿಸುವುದು ಬಹಳ ಮುಖ್ಯ. ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಹೆಚ್ಚಿನ ಪ್ರಶಸ್ತ್ಯ ನೀಡಬೇಕು. ರೈತರು ಸಮಗ್ರ ಕೃಷಿ ಜತೆಗೆ ಉಪ ಉತ್ಪನ್ನ ಮಾಡುವುದು ತಾವು ಉತ್ಪಾದಿಸಿದ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಿ ಹೆಚ್ಚಿನ ಲಾಭ ಗಳಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಹಾಸನ | ಡಿ.6ರಂದು ನಡೆದ ಸರ್ಕಾರಿ ಸಮಾವೇಶಕ್ಕೆ 5 ಕೋಟಿ ರೂ. ವೆಚ್ಚ: ಸಿ ಪುಟ್ಟಯ್ಯ ಹಂದನಕೆರೆ ಖಂಡನೆ

ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ಅಭಿವೃದ್ಧಿ ಪಡಿಸಿದ ಐದು ಕೃಷಿ ತಳಿಗಳನ್ನು ಮತ್ತು 9 ತಾಂತ್ರಿಕತೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲೋಕಾರ್ಪಣೆ ಮಾಡಿದರು. ಮೇಲುಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಕೃಷಿ ಕ್ಯಾಲೆಂಡರ್ ಬಿಡುಗಡೆಗೊಳಿಸಿದರು.

ಕಾರ್ಯಕ್ರಮದಲ್ಲಿ ರಾಜ್ಯ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ, ಮಂಡ್ಯ ವಿಧಾನಸಭಾ ಕ್ಷೇತ್ರದ ಶಾಸಕ ರವಿಕುಮಾರ್, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಅಧ್ಯಕ್ಷ ಹಾಗೂ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಎ ಬಿ ರಮೇಶ್ ಬಂಡಿಸಿದ್ದೇಗೌಡ, ಮೇಲುಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ದರ್ಶನ್ ಪುಟ್ಟಣ್ಣಯ್ಯ, ವಿಧಾನ ಪರಿಷತ್ ಸದಸ್ಯ ಮಧು ಜಿ ಮಾದೇಗೌಡ, ಮೈ ಶುಗರ್ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಸಿ ಡಿ ಗಂಗಾಧರ, ಮಂಡ್ಯ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದ ವಿಶೇಷಾಧಿಕಾರಿ ಡಾ.ಕೆ ಎಂ ಹರಿಣಿ ಕುಮಾರ್, ರಾಜ್ಯ ಸಣ್ಣ ಕೈಗಾರಿಕೆಗಳ ಉಪಾಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಎಂಡಿಸಿಸಿ ಬ್ಯಾಂಕ್ ಅಧ್ಯಕ್ಷ ಸಚಿನ್ ಚಲುವರಾಯಸ್ವಾಮಿ, ಜಿಲ್ಲಾಧಿಕಾರಿ ಡಾ. ಕುಮಾರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೆ ಆರ್ ನಂದಿನಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕ್ಷಕ ಮಲ್ಲಿಕಾರ್ಜುನ ಬಾಲದಂಡಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...