ಮಂಡ್ಯ | ಸ್ಯಾಂಜೋ ಆಸ್ಪತ್ರೆ ಬಳಿ ಭೀಕರ ಅಪಘಾತ; ಬಸ್‌ನಲ್ಲಿದ್ದ 20ಕ್ಕೂ ಅಧಿಕ ಮಂದಿ ವಿದ್ಯಾರ್ಥಿಗಳಿಗೆ ಗಾಯ

Date:

ಬೆಂಗಳೂರು-ಮೈಸೂರು ಹೆದ್ದಾರಿಯ ಉಮ್ಮಡಹಳ್ಳಿ ಗೇಟ್ ಬಳಿಯ ಸ್ಯಾಂಜೋ ಆಸ್ಪತ್ರೆ ಸಮೀಪ ಭೀಕರ ಅಪಘಾತ ಸಂಭವಿಸಿದ್ದು, 20ಕ್ಕೂ ಅಧಿಕ ಮಂದಿ ಕಾಲೇಜು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ನಡೆದಿದೆ.

ಕರ್ನಾಟಕ ರಸ್ತೆ ಸಾರಿಗೆ ಬಸ್‌ ಸರಾಸರಿ ವೇಗದಲ್ಲಿ ಸಾಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ, ಏಕಾಏಕಿ ಸರ್ವೀಸ್‌ ರಸ್ತೆಯಲ್ಲಿದ್ದ ಕ್ಯಾಂಟರ್‌ಗೆ ಢಿಕ್ಕಿಯಾಗಿ ಪಲ್ಟಿ ಹೊಡೆದಿದೆ. ಈ ಅಪಘಾತದಲ್ಲಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಇವರಲ್ಲಿ ಐದರಿಂದ ಆರು ಮಂದಿಗೆ ಗಂಭೀರ ಗಾಯಗಳಾಗಿವೆ.

ಮಂಡ್ಯ ಅಪಘಾತ

ಸ್ಥಳೀಯರು ಮತ್ತು ವಾಹನ ಸವಾರರು ಕೂಡಲೇ ಬಸ್‌ನಲ್ಲಿದ್ದ ಗಾಯಾಳುಗಳನ್ನು ಹೊರತೆಗೆದು ಹತ್ತಿರದ ಸ್ಯಾಂಜೋ ಆಸ್ಪತ್ರೆಗೆ ದಾಖಲಿಸಿದರು. ಪ್ರಾಥಮಿಕ ಚಿಕಿತ್ಸೆ ಬಳಿಕ ಗಂಭೀರ ಗಾಯಗೊಂಡವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಪಘಾತಕ್ಕೆ ಒಳಗಾದ ಬಸ್ ಕುಣಿಗಲ್-ಹೆಬ್ಬರು-ತುಮಕೂರು ಮಾರ್ಗದಲ್ಲಿ ಸಂಚರಿಸುತ್ತಿದ್ದ ಸರ್ಕಾರಿ ಬಸ್‌ ಮಂಡ್ಯ ನಗರಕ್ಕೆ ತಲುಪಲು ಸರ್ವಿಸ್ ರಸ್ತೆಗೆ ಮುಟ್ಟಿದಾಗ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಅಪಘಾತ ಸಂಭವಿಸಿದೆ. ಬಸ್‌ ಗಂಭೀರವಾಗಿ ಹಾನಿಯಾಗಿದೆ ಹಾಗೂ ಕ್ಯಾಂಟರ್‌ ಕೂಡಾ ಅಪಾಯಕ್ಕೊಳಗಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಅಶೋಕಪುರಂ ಬಡಾವಣೆ ಅಭಿವೃದ್ಧಿ ಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿದ್ದು, ಉರುಳಿ ಬಿದ್ದಿದ್ದ ಬಸ್ಸನ್ನು ಕ್ರೇನ್‌ ಸಹಾಯದಿಂದ ತೆರವು ಮಾಡಿ ಪುನಃ ರಸ್ತೆ ಸಂಚಾರವನ್ನು ಆರಂಭಿಸಿದರು. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನೆ ಕುರಿತಾಗಿ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ. ಈ ಅಪಘಾತದ ಹಿನ್ನೆಲೆಯಲ್ಲಿ ರಸ್ತೆಯ ಸುತ್ತಮುತ್ತಲಿನ ಪ್ರದೇಶದಲ್ಲಿ ಕೆಲಕಾಲ ಸಂಚಾರಕ್ಕೆ ತೊಂದರೆ ಉಂಟಾಗಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...