‌ಮಂಡ್ಯ | ರಸಗೊಬ್ಬರ, ಕಬ್ಬು ಸಾಗಣೆ ವೆಚ್ಚ ಗಣನೀಯ ಹೆಚ್ಚಳ: ₹5,500 ಬೆಲೆ ನಿಗದಿಗೆ ರೈತರ ಆಗ್ರಹ

Date:

ಕಬ್ಬು ಬೆಳೆಯಲು ಕೃಷಿ ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಿದ್ದು, ಸರ್ಕಾರ ಪ್ರತಿ ಟನ್‌ ಕಬ್ಬಿಗೆ ₹5,500 ಬೆಲೆ ನಿಗದಿ ಮಾಡಬೇಕು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಎನ್‌ ಎಲ್‌ ಭರತ್‌ರಾಜ್‌ ಆಗ್ರಹಿಸಿದರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ ಗ್ರಾಮದಲ್ಲಿ ಸೋಮವಾರ ನಡೆದ ಕಬ್ಬು ಬೆಳೆಗಾರರ ಸಭೆಯಲ್ಲಿ ಮಾತನಾಡಿದ ಅವರು, “ರಸಗೊಬ್ಬರದ ಬೆಲೆ ದುಪ್ಪಟ್ಟಾಗಿದೆ. ಕೂಲಿ ಮತ್ತು ಕಬ್ಬು ಸಾಗಣೆ ವೆಚ್ಚ ಕೂಡ ಗಣನೀಯವಾಗಿ ಹೆಚ್ಚಾಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕಟಾವು ಮತ್ತು ಸಾಗಣೆ ವೆಚ್ಚ ಕಳೆದು ಪ್ರತಿ ಟನ್‌ ಕಬ್ಬಿಗೆ ₹3,200ರಿಂದ ₹3,300 ಬೆಲೆ ನಿಗದಿ ಮಾಡಿದೆ” ಎಂದು ಹೇಳಿದರು.

“ಉತ್ತರ ಕರ್ನಾಟಕಕ್ಕೆ ಒಂದು ಬೆಲೆ ಮತ್ತು ದಕ್ಷಿಣ ಕರ್ನಾಟಕಕ್ಕೆ ಮತ್ತೊಂದು ಬೆಲೆ ನಿಗದಿ ಮಾಡಿ ರೈತರನ್ನು ಒಡೆದು ಆಳುವ ನೀತಿ ಅನುಸರಿಸಿದೆ. ಕೇಂದ್ರ ಸರ್ಕಾರ ಸಕ್ಕರೆ ಇಳುವರಿ ಆಧಾರದ ಮೇಲೆ ಎಫ್‌ಆರ್‌ಪಿ ನಿಗದಿ ಮಾಡುತ್ತಿದ್ದು, ರೈತರ ದ್ರೋಹ ಬಗೆಯುತ್ತಿದೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಸರ್ಕಾರ ಪ್ರತಿ ಟನ್‌ ಕಬ್ಬಿಗೆ ಎಸ್‌ಎಪಿ(ರಾಜ್ಯ ಸಲಹಾ ಬೆಲೆ) ನಿಗದಿಪಡಿಸಬೇಕು. 2022 ಮತ್ತು 2023ರಲ್ಲಿ ಪ್ರತಿ ಟನ್‌ ಕಬ್ಬಿಗೆ ₹150 ಪ್ರೋತ್ಸಾಹ ಧನ ಘೋಷಿಸಿದ್ದು, ಅದನ್ನು ಕೂಡಲೇ ಬಿಡುಗಡೆ ಮಾಡಬೇಕು. ಕಬ್ಬಿನ ಉಪ ಉತ್ಪನ್ನಗಳಾದ ಮೊಲಾಸಿಸ್, ಬಗಾಸ್ಸೆ, ಡಿಸ್ಟಿಲರಿ, ಕೋ ಜೆನ್‌ ಇತರ ಮೂಲಗಳಿಂದ ಬರುವ ಆದಾಯದಲ್ಲಿ ಶೇ 50ರಷ್ಟನ್ನು ಕಬ್ಬು ಬೆಳೆಗಾರರಿಗೆ ಕೊಡಬೇಕು. ಹೊಸದಾಗಿ ಕಬ್ಬು ಬೆಳೆಯುವವರಿಗೆ ₹10 ಸಾವಿರ ಪ್ರೋತ್ಸಾಹ ಧನ ನೀಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ವರ್ಷಗಳಾದರೂ ಇಎಸ್ಐ ಆಸ್ಪತ್ರೆ ಕಾಮಗಾರಿ ಆರಂಭಿಸಿಲ್ಲ : ಸುರೇಶ್ ಕಲ್ಲಾಗರ

ಕರ್ನಾಟಕ ಕಬ್ಬು ಬೆಳೆಗಾರರ ಸಂಘದ ಮಹದೇವಪುರ ವಲಯದ ಅಧ್ಯಕ್ಷರಾಗಿ ಬಿ ರಾಮಚಂದ್ರ ಅವರನ್ನು ಆಯ್ಕೆ ಮಾಡಲಾಯಿತು. ಗೌರವಾಧ್ಯಕ್ಷರಾಗಿ ನಂಜೇಗೌಡ, ಚುಂಚೇಗೌಡ, ಉಪಾಧ್ಯಕ್ಷರಾಗಿ ಚನ್ನಹಳ್ಳಿ ನಿಂಗೇಗೌಡ, ನಾಗೇಂದ್ರ, ಕಾರ್ಯದರ್ಶಿಯಾಗಿ ಎಂ ಸಿ ರವಿಕುಮಾರ್‌, ಸಹ ಕಾರ್ಯದರ್ಶಿಯಾಗಿ ರಾಜು, ಶಿವಕುಮಾರ್‌ ಆಯ್ಕೆಯಾದರು. ಸದಸ್ಯರಾಗಿ ಸತೀಶ್, ಚಂದ್ರಶೇಖರ್‌, ಜಿ ಮಾದೇಗೌಡ, ಕೇಬಲ್ ಜವನೇಗೌಡ, ಪ್ರಸನ್ನ, ಅಬ್ದುಲ್‌ ಸುಕೂರ್‌, ರಾಮಕೃಷ್ಣಪ್ಪ, ಎಂ ಬಿ ಪುಟ್ಟಸ್ವಾಮಿ, ಪಟೇಲ್‌ ಶಿವರಾಮೇಗೌಡ, ಎಸ್‌ ನಾಗರಾಜ್, ಎಂ ಜೆ ಮಹೇಶ್ ಅವರನ್ನು ಆಯ್ಕೆ ಮಾಡಲಾಯಿತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...