ಮಂಡ್ಯ | ತಂದೆ-ಮಗ ಸೇರಿದಂತೆ ನಾಲ್ವರು ನೀರಿನಲ್ಲಿ ಮುಳುಗಿ ಸಾವು

Date:

ಮುತ್ತತ್ತಿ ಅರಣ್ಯ ಪ್ರದೇಶದ ಕಾವೇರಿ ನದಿಯಲ್ಲಿ ಈಜಾಡಲು ತೆರಳಿದ್ದ ತಂದೆ ಮಗ ಸೇರಿದಂತೆ ನಾಲ್ವರು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಮೈಸೂರಿನ ಗುಂಡೂರಾವ್ ನಗರ ನಿವಾಸಿಗಳಾದ ನಾಗೇಶ್(45), ಅವರ ಪುತ್ರ ಭರತ್(17), ಮಹಾದೇವ(14), ಗುರು(32) ಮೃತಪಟ್ಟವರು.

ಮೈಸೂರಿನ ಕನಕನಗರ ನಿವಾಸಿಗಳಾದ ಭಾಗ್ಯಮ್ಮ ಹಾಗೂ ರಾಜು ದಂಪತಿ ಮುತ್ತತ್ತಿಯ ಆಂಜನೇಯಸ್ವಾಮಿ ದೇವಾಲಯದಲ್ಲಿ ವಿಶೇಷ ಪೂಜೆ ಆಯೋಜಿಸಿದ್ದರು. ಈ ಸಲುವಾಗಿ ತೆರಳಿದ ವೇಳೆ ಘಟನೆ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿ ಅರಣ್ಯ ಪ್ರದೇಶಕ್ಕೆ ಮಂಗಳವಾರ ಬೆಳಿಗ್ಗೆ 50 ಮಂದಿಯ ತಂಡವೊಂದು ಬಂದಿತ್ತು. ಬೆಳಿಗ್ಗೆ ತಿಂಡಿ ತಿಂದ ಬಳಿಕ ಹಲವರು ಈಜಾಡಲು ಕಾವೇರಿ ನದಿಗೆ ಇಳಿದಿದ್ದರು. ಈಜಾಡುವ ಸಂದರ್ಭದಲ್ಲಿ ಮಹಾದೇವ ನೀರಿನಲ್ಲಿ ಮುಳುಗಿದರು. ಆತನನ್ನು ರಕ್ಷಿಸಲು ತಂದೆ ನಾಗೇಶ್‌ ಪ್ರಯತ್ನಿಸಿದರು. ಆದರೆ, ಅವರೂ ಕೂಡಾ ನೀರಿನಲ್ಲಿ ಸಿಲುಕಿದರು. ರಕ್ಷಣೆಗೆ ತೆರಳಿದ ಭರತ್‌, ಗುರು ಕೂಡ ಮುಳುಗಿದರು. ನೀರಿನಿಂದ ಹೊರಬರಲಾಗದೆ ನಾಲ್ವರೂ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಚರಂಡಿ ಗಬ್ಬುನಾರುತ್ತಿದ್ದರು ಅಧಿಕಾರಿಗಳ ನಿರ್ಲಕ್ಷ್ಯ; ಗ್ರಾಮಸ್ಥರ ಆಕ್ರೋಶ

ನಾಗೇಶ್ ಹಾಗೂ ಭರತ್ ಮೃತದೇಹವನ್ನು ನೀರಿನಿಂದ ಹೊರತೆಗೆದಿದ್ದು, ಮಹಾದೇವ, ಗುರು ಮೃತದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ಸಂಬಂಧ ಹಲಗೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...