ಮಂಡ್ಯ | ನಾಲೆಗೆ ಉರುಳಿದ ಕಾರು; ನಾಲ್ವರು ಮಹಿಳೆಯರ ದುರ್ಮರಣ

Date:

ಚಾಲಕನ ನಿಯಂತ್ರಣ ತಪ್ಪಿದ ಕಾರು ನಾಲೆಗೆ ಉರುಳಿದ್ದು, ನಾಲ್ವರು ಮಹಿಳೆಯರು ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಗಾಮನಹಳ್ಳಿ ಬಳಿ ಶನಿವಾರ ರಾತ್ರಿ ಘಟನೆ ಸಂಭವಿಸಿದೆ. ದುರ್ಘಟನೆಯಲ್ಲಿ ಗಾಮನಹಳ್ಳಿಯ ಮಹದೇವಮ್ಮ (50), ಅವರ ಸಂಬಂಧಿ ತಿ.ನರಸೀಪುರದ ಗೊರವನಹಳ್ಳಿಯ ಸಂಜನಾ, ಮಾದೇವಿ ಮತ್ತು ರೇಖಾ ಮೃತಪಟ್ಟಿದ್ದಾರೆ. ಕಾರು ಚಾಲಕ ಮನೋಜ್‌ ಈಜಿಕೊಂಡು ದಡ ಸೇರಿದ್ದು, ಬದುಕುಳಿದಿದ್ದಾರೆ.

ಗಾಮನಹಳ್ಳಿಯಿಂದ ದೊಡ್ಡಮುಲಗೂಡು ಗ್ರಾಮಕ್ಕೆ ತೆರಳುತ್ತಿದ್ದಾಗ ನಾಲೆ ಏರಿಯ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ಕಳೆದುಕೊಂಡಿದೆ. ಏರಿಯಲ್ಲಿದ್ದ ಕಬ್ಬಿಣದ ತಡೆಗೋಡೆಗೆ ಗುದ್ದಿ ನಾಲೆಗೆ ಉರುಳಿದೆ ಎಂದು ತಿಳಿದುಬಂದಿದೆ. ಅರಕೆರೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...