ಮಂಡ್ಯ | ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಪ್ರಕರಣ; ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ

Date:

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ ಪುಟ್ಟ ಬಾಲಕಿಗೆ ಮನೆ ಪಾಠ ಹೇಳಿಕೊಡುವ ಶಿಕ್ಷಕನೇ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯ ಜಿಲ್ಲೆಯ ಒಂದನೇ ತ್ವರಿತಗತಿಯ ನ್ಯಾಯಾಲಯದ ನ್ಯಾಯಾಧೀಶೆ ಮಂಜುಳ ಇಟ್ಟಿಯವರು ಸಂತ್ರಸ್ತ ಕುಟುಂಬಕ್ಕೆ ₹5 ಲಕ್ಷ ಪರಿಹಾರ‌ ಮತ್ತು ಅಪರಾಧಿ, ಅತ್ಯಾಚಾರಿಗೆ ಜೀವಾವಧಿ ಶಿಕ್ಷೆ ಘೋಷಣೆ ಮಾಡಿದ್ದಾರೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನಲ್ಲಿ 2022ರ ಅಕ್ಟೋಬರ್‌ 10 ರಂದು 11 ವರ್ಷದ ಪುಟ್ಟ ಬಾಲಕಿಗೆ ಮನೆ ಪಾಠ ಹೇಳಿಕೊಡುತ್ತಿದ್ದ ಈತ ಆ ಬಾಲಕಿ ಮೇಲೆ ಅತ್ಯಾಚಾರವೆಸಗಿ ಭೀಕರವಾಗಿ ಹತ್ಯೆ ಮಾಡಿದ್ದ. ಬಾಲಕಿ ಮೇಲೆ ನಡೆದ
ದೌರ್ಜನ್ಯಕ್ಕೆ ನಾಡಿನಾದ್ಯಂತ ವ್ಯಾಪಕ ಖಂಡನೆಯಾಗಿದ್ದು, ಆರೋಪಿಗೆ ಶಿಕ್ಷೆಯಾಗುವಂತೆ ಆಗ್ರಹ ವ್ಯಕ್ತವಾಗಿತ್ತು. ಮಂಡ್ಯ ಜಿಲ್ಲಾದ್ಯಂತ ಪ್ರಗತಿಪರ ಸಂಘಟನೆಗಳು ಪ್ರತಿಭಟನೆಗಳ ಮೂಲಕ ನ್ಯಾಯಕ್ಕಾಗಿ ನಿರಂತರ ಹೋರಾಟ ಮಾಡಿದ್ದವು.

ಘನ ನ್ಯಾಯಾಲಯದಲ್ಲಿ ನಿರಂತರ ಎರಡು ವರ್ಷಗಳ ವಾದ ನಡೆದು 2024ರ ಅಕ್ಟೋಬರ್‌ 19ರಂದು ನ್ಯಾಯಾಲಯ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ. ಪ್ರಕರಣದಲ್ಲಿ ಸರ್ಕಾರಿ ವಿಶೇಷ ಅಭಿಯೋಜಕರಾಗಿ ವೆಂಕಟರಮಣ ಸೀತಾರಾಮ ಭಟ್ ಅವರು ನೇಮಕಗೊಂಡು ಯಶಸ್ವಿಯಾಗಿ ವಾದ ಮಂಡಿಸಿ ಅಪರಾಧಿಗೆ ಜೀವಾವಧಿ ಶಿಕ್ಷೆ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅತ್ಯಾಚಾರ ವಿರೋಧಿ ಆಂದೋಲನದ ತಂಡ ನೊಂದ ಕುಟುಂಬದ ಜತೆಗೆ ನಿಂತು, ಘನ ನ್ಯಾಯಾಲಯದಲ್ಲಿ ನ್ಯಾಯ ಪಡೆಯಲು ನಿರಂತರವಾಗಿ ಹೋರಾಟ, ಮತ್ತು ಪ್ರಕರಣದ ಅನುಸರಣೆ(ಫಾಲೋಅಪ್) ಮಾಡಿ, ತಾರ್ಕಿಕ ಅಂತ್ಯ ಕಾಣುವಲ್ಲಿ ಯಶಸ್ವಿಯಾಗಿದೆ.

ಇದೇ ಸಂದರ್ಭದಲ್ಲಿ ಅತ್ಯಾಚಾರ ವಿರೋಧಿ ಆಂದೋಲನದ ತಂಡದಿಂದ ವಿ ಎಸ್ ಭಟ್ ಅವರಿಗೆ ಹಾರ ಹಾಕಿ ಸನ್ಮಾನಿಸಿ ಅಭಿನಂದನೆ ತಿಳಿಸಿದರು.

WhatsApp Image 2024 10 19 at 6.48.42 PM

ಈ ಸಂದರ್ಭದಲ್ಲಿ ಮಹಿಳಾ ಮುನ್ನಡೆ ಮತ್ತು ಕರ್ನಾಟಕ ಜನಶಕ್ತಿಯ ರಾಜ್ಯ ಕಾರ್ಯದರ್ಶಿ ಪೂರ್ಣಿಮಾ ಮಾತನಾಡಿ, “ಹೆಣ್ಣು ಮಕ್ಕಳ ಮೇಲಿನ ಅತ್ಯಾಚಾರ, ಕೊಲೆಗಳು ಹೆಚ್ಚುತ್ತಿರುವ ಸಂದರ್ಭದಲ್ಲಿ ಅತ್ಯಾಚಾರಿಗಳು ಬಿಡುಗಡೆಯಾದಾಗ ಹಾರ, ತುರಾಯಿಯೊಂದಿಗೆ ಸ್ವಾಗತಿಸುತ್ತಿರುವ ವಿಕೃತಿ ಮೆರೆವ ಸಂದರ್ಭದಲ್ಲಿ ಮಂಡ್ಯ ನ್ಯಾಯಾಲಯದ ಈ ತೀರ್ಪನ್ನು ನಾವು ಸ್ವಾಗತಿಸುತ್ತೇವೆ ಮತ್ತು ಅಭಿನಂದಿಸುತ್ತೇವೆ” ಎಂದು ಹರ್ಷ ವ್ಯಕ್ತಪಡಿಸಿದರು.

“ಸಂತ್ರಸ್ತ ಕುಟುಂಬಕ್ಕೆ ಒಂದು ರೀತಿ ಸಮಾಧಾನ ದೊರಕಿದೆ. ಆದರೆ ಅತ್ಯಾಚಾರಗಳು ನಡೆಯದಂತೆ ತಡೆಗಟ್ಟಲು ಕಠಿಣ ಕಾನೂನು ರೂಪಿಸಬೇಕು. ಅತ್ಯಾಚಾರಿಗಳಿಗೆ ಭಯ ಬರುವಂತಹ ಕಾನೂನುಗಳು ಜಾರಿಯಾಗಬೇಕು. ಆಗ ಮಾತ್ರ ನಿಜವಾದ ನ್ಯಾಯದಾನ ಪಡೆಯಲು ಸಾಧ್ಯ” ಎಂದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಶಿಕ್ಷಣದ ಉದ್ದೇಶ ಸಮಾಜದ ಔನ್ನತ್ಯಕ್ಕೆ ದಾರಿದೀಪವಾಗಬೇಕು: ಪ್ರೊ. ರಾಮ್ ರಾಮಸ್ವಾಮಿ

“ಪ್ರಸ್ತುತ ಸನ್ನಿವೇಶದಲ್ಲಿ ಮುನಿರತ್ನ ಪ್ರಕರಣ, ಪ್ರಜ್ವಲ್ ರೇವಣ್ಣ ಪ್ರಕರಣ, ಸೌಜನ್ಯ ಪ್ರಕರಣಗಳು ನಮಗೆ ಘಾಸಿಯುಂಟು ಮಾಡುತ್ತಿರುವ ಸಂದರ್ಭದಲ್ಲಿ ಈ ತೀರ್ಪು ಬಂದಿರುವುದು ಸ್ವಾಗತಾರ್ಹ. ನ್ಯಾಯಧೀಶರಿಗೆ ಮತ್ತು ವಾದ ಮಂಡಿಸಿ ಅಪರಾಧಿಗೆ ಶಿಕ್ಷೆ ಕೊಡಿಸಲು ಯಶಸ್ವಿಯಾದ ವಿ ಎಸ್ ಭಟ್ ಅವರಿಗೆ ಅಭಿಂದನೆಗಳನ್ನು ಸಲ್ಲಿಸುತ್ತೇವೆ” ಎಂದರು.

ಕರ್ನಾಟಕ ಜನಶಕ್ತಿಯ ಜಿಲ್ಲಾ ಕಾರ್ಯದರ್ಶಿ ಸಿದ್ದರಾಜು, ಅಖಿಲ ಭಾರತ ವಕೀಲರ ಸಂಘದ ಬಿ ಟಿ ವಿಶ್ವನಾಥ್, ಮಹಿಳಾ ಮುನ್ನಡೆಯ ಶಿಲ್ಪ, ಜ್ಯೋತಿ, ಸೌಮ್ಯ, ಅಂಜಲಿ, ಪತ್ರಕರ್ತ ಮೋಹನ್ ಮೈಸೂರು, ಅಸಾದುಲ್ಲಾ ಜಮಾತ್ ಸ್ಥಾನಿಕ ಉಪಾಧ್ಯಕ್ಷ ಹಾಗೂ ಅಬ್ದುಲ್ ವಾಹಿದ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...