ಮಂಡ್ಯ | ಸಾಲಬಾಧೆ; ನಾಲೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ

Date:

ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದ ಮೈಸೂರಿನ ಘಟನೆ ಮಾಸುವ ಮುನ್ನವೇ ಇದೀಗ ಇಂತಹದ್ದೇ ಘಟನೆ ಮಂಡ್ಯದಲ್ಲಿ ನಡೆದಿದೆ.

ಸಾಲಭಾದೆಯಿಂದ ಬೇಸತ್ತು ಒಂದೇ ಕುಟುಂಬದ ಮೂವರು ವಿಷ ಸೇವಿಸಿ, ನಂತರ ವಿಸಿ ನಾಲೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀರಂಗಪಟ್ಟಣದ ಗಂಜಾಂ ನಿವಾಸಿಗಳಾದ ಮಾಸ್ತಪ್ಪ, ರತ್ನಮ್ಮ ದಂಪತಿ ಹಾಗೂ ಮಗಳು ಲಕ್ಷ್ಮೀ ಮೃತ ದುರ್ದೈವಿಗಳು.

ದಂಪತಿಯ ಮೃತದೇಹಗಳು ಪತ್ತೆ ಆಗಿದ್ದು, ಲಕ್ಷ್ಮೀ ಮೃತದೇಹಕ್ಕಾಗಿ ಶೋಧಕಾರ್ಯ ನಡೆದಿದೆ. ಮಾಸ್ತಪ್ಪ ಆಟೋ ಓಡಿಸಿಕೊಂಡು ಜೀವನ ಮಾಡುತ್ತಿದ್ದರು ಎನ್ನಲಾಗಿದೆ. ಸುಮಾರು 3 ಲಕ್ಷ ರೂಪಾಯಿ ಕೈಸಾಲ ಮಾಡಿಕೊಂಡಿದ್ದ ಮಾಸ್ತಪ್ಪ, ಸಾಲಕೊಟ್ಟವರು ಇಂದು ಮನೆ ಬಳಿ ಗಲಾಟೆ ಮಾಡಿದ್ದಕ್ಕೆ ತೀವ್ರ ನೊಂದಿದ್ದರು. ಮರ್ಯಾದೆಗೆ ಅಂಜಿ ಮೂವರೂ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಾಸ್ತಪ್ಪ ಸುಮಾರು 12 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದರು. ಸಾಲಗಾರರ ಕಾಟದಿಂದ ಮನೆ ಮಾರಾಟ ಮಾಡಲೂ ಮುಂದಾಗಿದ್ದರು. ಜಮೀನು ಇನ್ನು ಅವರ ಹೆಸರಿಗೆ ನೊಂದಣಿಯಾಗದ ಕಾರನ ಜಮೀನು ಮಾರಾಟವೂ ಸಾಧ್ಯವಾಗಿರಲಿಲ್ಲ ಎಂದು ಮಾಸ್ತಪ್ಪರ ಸಹೋದರ ಶಂಕರ್‌ ಮಾಹಿತಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಗೃಹಲಕ್ಷ್ಮಿ ಹಣದಿಂದ ಸರ್ಕಾರಿ ಶಾಲೆಗೆ ವಾಟರ್ ಫಿಲ್ಟರ್‌ ಕೊಡುಗೆ; ಗೃಹಿಣಿ ವಿಜಯಲಕ್ಷ್ಮಿ ಕಾರ್ಯಕ್ಕೆ ಮೆಚ್ಚುಗೆ

ಗಂಜಾಂನಿಂದ ಬಂದು ಚಂದಗಾಲು ಬಳಿ ಏರಿ ಮೇಲೆ ಆಟೋ ನಿಲ್ಲಿಸಿ, ಮೂವರು ವಿಷ ಸೇವಿಸಿದ್ದಾರೆ. ಬಳಿಕ ನಾಲೆಗೆ ಹಾರಿ ಮೂವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಘಟನಾ ಸ್ಥಳಕ್ಕೆ ಎಸ್​​ಪಿ ಮಲ್ಲಿಕಾರ್ಜುನ ಬಾಲದಂಡಿ ನೇತೃತ್ವದಲ್ಲಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ 11
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...