ಮಂಡ್ಯ | ಮಾನವ ಕಳ್ಳಸಾಗಾಣೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ: ನ್ಯಾ. ಎಂ ಭೃಂಗೇಶ್‌

Date:

ಮಾನವ ಕಳ್ಳಸಾಗಾಣೆ ಕಂಡುಬಂದರೆ ಪೊಲೀಸರಿಗೆ ಮಾಹಿತಿ ನೀಡಿ ಎಂದು ಮಂಡ್ಯ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾ. ಎಂ ಭೃಂಗೇಶ್‌ ಕರೆ ನೀಡಿದರು.

ಮಂಡ್ಯ ನಗರದ ಜಿಲ್ಲಾ ಕಾರಾಗೃಹದಲ್ಲಿ ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಪಿಇಎಸ್‌ ಕಾನೂನು ಕಾಲೇಜು ಮತ್ತು ಕಾನೂನು ಸೇವಾ ಘಟಕ, ವಕೀಲರ ಸಂಘದಿಂದ ಹಮ್ಮಿಕೊಂಡಿದ್ದ ಮಾನವ ಕಳ್ಳಸಾಗಾಣಿಕೆ ವಿರೋಧಿಸಿ ದಿನದ ಅಂಗವಾಗಿ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

“ಮಕ್ಕಳನ್ನು ಭಿಕ್ಷಾಟನೆಗೆ ಬಿಡುವುದು ಹಾಗೂ ಮಾನವ ಕಳ್ಳಸಾಗಣೆ ಮಾಡಿ ಅಂಗಾಂಗ ಕದಿಯುವುದು ಅಪರಾಧವಾಗಿದೆ. ಇಂತಹ ಘಟನೆಗಳು ಕಂಡುಬಂದರೆ ಕೂಡಲೇ ಹತ್ತಿರದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಿ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹೆಣ್ಣು ಮಕ್ಕಳನ್ನು ವೇಶ್ಯವಾಟಿಕೆಗೆ ದೂಡುವುದನ್ನು ತಡೆಗಟ್ಟಬೇಕು. ಮನುಷ್ಯನಿಗೆ ಸಿಂಪತಿ ಇರಬೇಕು. ಆದರೆ ಅದು ನಮ್ಮನ್ನು ನಾಶ ಮಾಡುವ ರೀತಿಯಲ್ಲಿ ಇರಬಾರದು. ಸಮಾಜದಲ್ಲಿ ಒಳ್ಳೆಯದನ್ನು ನೋಡಬೇಕು. ನಮಗೆ ಅರಿವಿಲ್ಲದೇ ಸಣ್ಣ ತಪ್ಪುಗಳನ್ನು ಮಾಡುತ್ತೇವೆ, ಅದನ್ನು ತಿಳಿದ ಮೇಲೆ ತಿದ್ದಿಕೊಳ್ಳಬೇಕು. ಅದನ್ನು ಹಾಗೆಯೇ ಬಿಟ್ಟರೆ ದೊಡ್ಡ ತಪ್ಪು ಎಸಗಲು ಕಾರಣವಾಗುತ್ತದೆ. ಇದಕ್ಕೆ ಕಾನೂನು ಅರಿವು ಮುಖ್ಯವಾಗಿದೆ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಧಾರವಾಡ | ಒಳಚರಂಡಿ ಕಾರ್ಮಿಕರ ನೇಮಕಾತಿ, ಕಾರ್ಮಿಕ ಕಾಯ್ದೆ ಜಾರಿಗೆ ಪೌರಕಾರ್ಮಿಕರ ಆಗ್ರಹ

ಹಿರಿಯ ಸಿವಿಲ್‌ ನ್ಯಾಯಾಧೀಶ ಎಂ ಆನಂದ್ ಮಾತನಾಡಿ, “ಅನ್ಯಾಯ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಬೇಕು. ಇದನ್ನು ಯಾರು ಹೇಳಿದರೆಂಬುದನ್ನು ಹೇಳುವುದಿಲ್ಲ, ಅವರ ಹೆಸರನ್ನು ಗೌಪ್ಯವಾಗಿಡಲಾಗುತ್ತದೆ. ಇಂತಹ ಸಂದರ್ಭಗಳನ್ನು ಬಳಿಸಿಕೊಂಡು ಸಮಾಜದಲ್ಲಿ ನಡೆಯುವ ಅಪರಾಧ ಚಟುವಟಿಕೆ ತಡೆಗಟ್ಟಲು ಸೇವೆ ಮಾಡುವ ಮನೋಭಾವ ಬೆಳೆಸಿಕೊಳ್ಳಿ” ಎಂದು ತಿಳಿಸಿದರು.

ಜಿಲ್ಲಾ ಕಾರಾಗೃಹ ಅಧೀಕ್ಷಕ ಟಿ ಕೆ ಲೊಕೇಶ್‌, ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಎಂ ಟಿ ರಾಜೇಂದ್ರ, ಕಾನೂನು ಸಹಾಯಕ ಪ್ರಾಧ್ಯಾಪಕ ಎಸ್‌ ಬಿ ಬೋರೇಗೌಡ, ಸಹಾಯಕ ಆರಕ್ಷಕ ಉಪ ನಿರೀಕ್ಷಕ ರಮೇಶ್‌, ಕಾನೂನು ಸಹಾಯಕ ಪ್ರಾಧ್ಯಾಪಕ ಕೆ ಎಸ್‌ ಜಯಕುಮಾರ್ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...