ಮಂಡ್ಯ | ಜಮ್ಮು ಕಾಶ್ಮೀರ ವಿಲೀನ ದಿನಾಚರಣೆ

Date:

ಜಮ್ಮು ಕಾಶ್ಮೀರ ಭಾರತ ಇಲ್ಲವೇ ಪಾಕಿಸ್ತಾನಕ್ಕೆ ಸೇರದೆ ಸ್ವತಂತ್ರವಾಗಿ ಉಳಿಯಲು ಬಯಸುತ್ತದೆ. ಆ ಸಂದರ್ಭದಲ್ಲಿ ಅದರ ಮೇಲೆ ಪಾಕಿಸ್ತಾನ ಅಕ್ರಮಣ ಮಾಡಲು ಬರುತ್ತದೆ. ಆಗ ರಾಜ ಹರಿಸಿಂಗ್ ತಮ್ಮ ದೇಶವನ್ನು ಭಾರತದೊಂದಿಗೆ ಒಪ್ಪಂದ ಮಾಡಿಕೊಂಡು ವಿಲೀನ ಮಾಡಿಕೊಳ್ಳುತ್ತಾರೆ. ಆ ದಿನವನ್ನು ನಾವು ಅಕ್ಟೋಬರ್‌ 26ರಂದು ವಿಲೀನ ದಿನವನ್ನಾಗಿ ಆಚರಿಸುತ್ತಿದ್ದೇವೆ ಎಂದು ಸಮರ್ಪಣಾ ಟ್ರಸ್ಟಿನ ಅಧ್ಯಕ್ಷ ಜಯಶಂಕರ್ ನೆನಪಿಸಿಕೊಂಡರು.

ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕಡತನಾಳ ಗ್ರಾಮದ ಅಂಬೇಡ್ಕರ್ ಭವನದಲ್ಲಿ ಅಕ್ಟೋಬರ್‌ 26ರಂದು ನಡೆದ ಜಮ್ಮು ಕಾಶ್ಮೀರ ವಿಲೀನ ದಿನ ಉದ್ದೇಶಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಆಶಾಲತಾ ಪುಟ್ಟೆಗೌಡ ಹಾಗೂ ಮಾಲಾರ ಪುಟ್ಟಯ್ಯರಿಗೆ ವಿಶ್ವಜ್ಞಾನಿ ಅಂಬೇಡ್ಕರ್ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1947ರ ಅಕ್ಟೋಬರ್ 26ರಂದು ಮಹಾರಾಜ ಹರಿಸಿಂಗ್ ಭಾರತ ಒಕ್ಕೂಟ ಸೇರ್ಪಡೆಯ ಒಪ್ಪಂದಕ್ಕೆ ಸಹಿ ಹಾಕಿದಾಗ, ಜಮ್ಮು ಮತ್ತು ಕಾಶ್ಮೀರವು ಭಾರತದ ಡೊಮಿನಿಯನ್ ಸೇರಿದ ದಿನವನ್ನು ವಿಲೀನ ದಿನವನ್ನಾಗಿ ಆಚರಿಸಲಾಗುತ್ತಿದೆ. ಇದು 2020ರಲ್ಲಿ ಮೊದಲ ಬಾರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿ ಅಧಿಕೃತ ಸಾರ್ವಜನಿಕ ರಜಾ ದಿನವಾಗಿ ಘೋಷಿಸಲಾಯಿತು.

2015ರ ಮೈಸೂರು ದಸರಾ ಉದ್ಘಾಟನೆ ಮಾಡಿದ ರೈತ ಮಾಲಾರ ಪುಟ್ಟಯ್ಯ ಮಾತನಾಡಿ, “ಎಲ್ಲಿಯ ಎಚ್ ಡಿ ಕೋಟೆ ಮಾಲಾರ, ಎಲ್ಲಿಯ ಶ್ರೀರಂಗಪಟ್ಟಣ ಕಡತನಾಳು. ನಾವು ಇಲ್ಲಿ ಬಂದು ವಿಶ್ವಜ್ಞಾನಿ ಅಂಬೇಡ್ಕರ್ ಪ್ರಶಸ್ತಿ ಪಡೆಯುತ್ತಿರುವುದು ನಮ್ಮ ಅದೃಷ್ಟ. ಇವತ್ತು ಎಲ್ಲ ಹೆಣ್ಣು ಮಕ್ಕಳು ಓದುತ್ತಿದ್ದಾರೆ. ಯಾವುದಾದರೂ ಸಣ್ಣ ಖಾಸಗಿ ಕೆಲಸಕ್ಕಾದರೂ ಹೋಗುತ್ತಿದ್ದಾರೆ. ರೈತರ ಮನೆಗೆ ಸೊಸೆಯಾಗಿ ಬರಲು ಒಪ್ಪುತಿಲ್ಲ. ಈ ಬೆಳವಣಿಗೆ ತಪ್ಪಬೇಕಿದೆ” ಎಂದು ರೈತರ ಕಷ್ಟವನ್ನು ತೋಡಿಕೊಂಡರು.

ರಂಗನಾಯಕಿ ಸಮಾಜದ ಆಶಾಲತಾ ಪುಟ್ಟೆಗೌಡ ಮಾತನಾಡಿ, “ವಿಶ್ವಜ್ಞಾನಿ ಅಂಬೇಡ್ಕರ್ ಪ್ರಶಸ್ತಿಗೆ ರೈತ ಕುಟುಂಬದ ನನ್ನನ್ನು ಪರಿಗಣಿಸಿರುವುದು ಖುಷಿಯ ವಿಚಾರ. ಮಾರುಕಟ್ಟೆಯಲ್ಲಿ ಕಾಳು, ಸೊಪ್ಪು ಮತ್ತು ತರಕಾರಿಗಳು ಉತ್ತಮ ಗುಣಮಟ್ಟದಲ್ಲಿ ಸಿಗುತಿಲ್ಲ. ಕಾಸು ಕೊಟ್ಟು ತಂದು ತಿನ್ನೋಣ ಅನ್ನುವ ಮನೋಭಾವ ಬಿಡಿ, ಮನೆಗೆ ಬೇಕಾದದನ್ನು ತಮ್ಮ ಹಿತ್ತಲಲ್ಲಿಯೇ ಒಂದಷ್ಟು ಬೆಳೆಯುವ ಖುಷಿಯೇ ಬೇರೆ. ನಿಮ್ಮ ಕೈಲಾದಷ್ಟು ಬೆಳೆದುಕೊಳ್ಳಿ” ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಅಭಿವೃದ್ಧಿ ದೃಷ್ಟಿಯಿಂದ ಕಾಂತರಾಜು ವರದಿ ಜಾರಿಯಾಗಬೇಕು: ಶೋಷಿತ ವರ್ಗಗಳ ಮುಖಂಡರಿಂದ ಸಭೆ

ಈ ಕಾರ್ಯಕ್ರಮದಲ್ಲಿ ವೆಂಕಟೇಗೌಡ ಸೇವಾ ಸಮಿತಿ ಅಧ್ಯಕ್ಷ ಡಾ. ಕೆ ವೈ ಶ್ರೀನಿವಾಸ್, ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕೆ ಜಯಶಂಕರ್, ವಿಶ್ವಜ್ಞಾನಿ ಅಂಬೇಡ್ಕರ್ ಸಂಘದ ಅಧ್ಯಕ್ಷ ಕೆ ಸಿ ಮಾದೇಶ್, ಎಚ್ ಡಿ ಕೋಟೆ ಎಂಜಿನಿಯರ್ ವಸಂತಕುಮಾರ್, ಕಾಳಪ್ಪ, ಚಂದ್ರು, ರಾಜಶೇಖರ್, ಮನೋಜ್, ಸಂತೋಷ್, ಸೂರ್ಯ ಕುಮಾರ್, ವಿಠ್ಠಲ್ ಸೇರಿದಂತೆ ಇತರರು ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...