ಮಂಡ್ಯ | ಕನ್ನಡ ಸಾಹಿತ್ಯ ಸಮ್ಮೇಳನ; ಮುಂದಿನ ಪೀಳಿಗೆಗೆ ಆಹಾರ ಉಳಿಸುವ ಜಾಗೃತಿ ಗೋಷ್ಠಿ ನಡೆಸುವಂತೆ ಮನವಿ

Date:

ಮಂಡ್ಯದಲ್ಲಿ ಜರುಗುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಆಹಾರದ ವ್ಯವಸ್ಥೆ ಹಾಗೂ ಮುಂದಿನ ಪೀಳಿಗೆಗೆ ಆಹಾರ ಉಳಿಸುವ ಬಗ್ಗೆ ಯಾವ ರೀತಿ ಜಾಗೃತಿ ಮೂಡಿಸಬೇಕು? ಎಂಬ ನಿಟ್ಟಿನಲ್ಲಿ ಒಂದು ಗೋಷ್ಠಿಯನ್ನು ನಡೆಸಬೇಕು. ಜತೆಗೆ ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಆಹಾರ ವ್ಯರ್ಥವಾಗದಂತೆ ತಡೆಯಲು ಅಗತ್ಯಕ್ರಮ ಕೈಗೊಳ್ಳಬೇಕು ಎಂದು ಬೆಂಗಳೂರಿನ ಆಹಾರ ಸಂರಕ್ಷಣಾ ಜಾಗೃತಿ ಅಭಿಯಾನದಿಂದ ಮನವಿ ಮಾಡಿದರು.

ಕೃಷಿ ಹಾಗೂ ಮಂಡ್ಯ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿಯವರಿಗೆ ಮನವಿ ನೀಡಿದ್ದು, “ಕನ್ನಡ ನಾಡುನುಡಿಯ ಹಬ್ಬ ಎಂದೇ ಖ್ಯಾತಿ ಪಡೆದಿರುವ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಈ ಬಾರಿ ಸಕ್ಕರೆ ನಾಡು ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವುದು ನಮಗೆಲ್ಲ ತುಂಬಾ ಸಂತೋಷ ತಂದಿದೆ. ಈ ಸಮ್ಮೇಳನದಲ್ಲಿ, ಮದುವೆ ಬೀಗರ ಊಟ ಸೇರಿ ಎಲ್ಲ ರೀತಿಯ ಬೇರೆಬೇರೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಅಗತ್ಯಕ್ಕಿಂತ ಹೆಚ್ಚು ಆಹಾರ ತಯಾರಿಸಿ ಆಹಾರ ವ್ಯರ್ಥವಾಗುತ್ತಿರುವುದನ್ನು ತಡೆಗಟ್ಟುವುದು ಹೇಗೆ?” ಎಂಬುದರ ಕುರಿತು ಜಾಗೃತಿ ಗೋಷ್ಠಿ ನಡೆಸಬೇಕು” ಎಂದು ಒತ್ತಾಯಿಸಿದರು.

ಆಹಾರ ಉಳಿಸುವ ಜಾಗೃತಿಗೋಷ್ಠಿ

“ಸಸ್ಯಾಹಾರ ಮತ್ತು ಮಾಂಸಾಹಾರದ ಕುರಿತು ಇರುವ ಕೀಳರಿಮೆಯನ್ನು ಹೋಗಲಾಡಿಸುವ ನಿಟ್ಟಿನಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಸಂವಿಧಾನದ ಅರ್ಟಿಕಲ್‌ 51ಎ(ಹೆಚ್) ಆಧಾರದಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸಲು, ಮಾಂಸಾಹಾರ ಮತ್ತು ಸಸ್ಯಾಹಾರದ ನಡುವಿನ ಮೇಲು ಕೀಳು ಹಾಗೂ ಶ್ರೇಷ್ಠತೆಯ ವ್ಯಸನವನ್ನು ಹೋಗಲಾಡಿಸಲು ಸಸ್ಯಾಹಾರ, ಮಾಂಸಾಹಾರ ಎರಡನ್ನೂ ಸಮ್ಮೇಳನದ ಊಟದ ಪಟ್ಟಿಯಲ್ಲಿ ಸೇರಿಸಿ ಮಾಂಸಾಹಾರದ ಬಗ್ಗೆ ಮತ್ತು ಅದನ್ನು ಸೇವಿಸುವವರ ಬಗ್ಗೆ ಇರುವ ತಾರತಮ್ಯ ಮನೋಭಾವವನ್ನು ತೊಡೆದುಹಾಕಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
This image has an empty alt attribute; its file name is --714x1024.jpg

“ಆಹಾರ ಹಕ್ಕು ಹಾಗೂ ಸ್ವಾತಂತ್ರ್ಯದ ಬಗ್ಗೆ ವಿಚಾರ ಸಂಕಿರಣ ಏರ್ಪಡಿಸಬೇಕು. ನಮ್ಮ ಈ ಬೇಡಿಕೆಗಳನ್ನು ಜಾರಿಗೊಳಿಸಲು ಅಗತ್ಯಕ್ರಮ ಕೈಗೊಳ್ಳಬೇಕೆಂದು ಈ ಮೂಲಕ ಪ್ರೀತಿಯ ಕಳಕಳಿಯಿಂದ ಮನವಿ ಮಾಡಿಕೊಳ್ಳುತ್ತೇವೆ” ಎಂದು ಮನವಿಯಲ್ಲಿ ಉಲ್ಲೇಖಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಪ್ರತಿ ವಿದ್ಯಾರ್ಥಿಗೆ ಮಾಸಿಕ ನಿರ್ವಹಣಾ ಹಣ ಹೆಚ್ಚಿಸುವಂತೆ ಸಚಿವರಿಗೆ ಮನವಿ

“ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ್ ಜೋಷಿಯವರು ಸಚಿವರ ಮನೆಗೆ ಆಗಮಿಸಿದ್ದರು. ಇದೇ ವೇಳೆ ಅವರಿಗೂ ಆಹಾರ ವ್ಯಸ್ಥೆಯ ಪತ್ರಕೊಟ್ಟು ಸಮ್ಮೇಳನದಲ್ಲಿ ಮೊಟ್ಟೆ, ಕೋಳಿ ಮಾಂಸ ಕೊಡಬೇಕು” ಎಂದು ಒತ್ತಾಯ ಮಾಡಿದರು.

ವಚನ ಉಮೇಶ್, ಮೈಸೂರಿನ ರೇವಣ್ಣ, ವೆಂಕಟಗಿರಿ, ಸಂಜಯ್ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...