ಮಂಡ್ಯ | ಭ್ರಷ್ಟಾಚಾರ ತಡೆಗೆ ಕೆಆರ್‌ಎಸ್ ಪಕ್ಷ ಆಗ್ರಹ

Date:

ಮಂಡ್ಯ ಜಿಲ್ಲೆಯಲ್ಲಿ ಭ್ರಷ್ಟಾಚಾರ ತಡೆಯಲು ಹಾಗೂ ಜಿಲ್ಲೆಯಲ್ಲಿ ಪಾರದರ್ಶಕ ಆಡಳಿತ ನೀಡಲು ಒತ್ತಾಯಿಸಿ ಕೆಆರ್‌ಎಸ್ ಪಕ್ಷದಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಭ್ರಷ್ಟಾಚಾರ ವಿರೋಧಿ ದಿನದ ಅಂಗವಾಗಿ ಡಿಸೆಂಬರ್‌ 9ರಂದು ಮನವಿ ಸಲ್ಲಿಸಿ ಅಧ್ಯಕ್ಷ ಡಿ ಜಿ ನಾಗರಾಜ್ ಅವರು ಮಾತನಾಡಿ, “ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುತ್ತಿದ್ದು, ನಮ್ಮ ಜಿಲ್ಲೆಗೆ ಆಗಮಿಸುವ ಕರ್ನಾಟಕದ್ಯಂತ ಹಾಗೂ ಹೊರ ರಾಜ್ಯಗಳಿಂದ ಬರುವಂತಹ ಕನ್ನಡ ಪ್ರೇಮಿಗಳಿಗೆ ಯಾವುದೇ ಕುಂದು ಕೊರತೆಯಾಗದಂತೆ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ವ್ಯವಸ್ಥೆ ನಿರ್ಮಿಸಬೇಕು” ಎಂದು ಮನವಿ ಮಾಡಿದರು.

ಭ್ರಷ್ಟಾಚಾರ 1

“ಜಿಲ್ಲೆಯ ಎಲ್ಲ ಇಲಾಖೆಗಳಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದ್ದು, ರೈತರಿಂದ ಹಣ ಸುಲಿಗೆಯ ಬಗ್ಗೆ ಹಾಗೂ ಯಾವುದೇ ಕೆಲಸ ಕಾರ್ಯಗಳಿಗೆ ತೆರಳಿದರೆ ಮೊದಲು ಟೇಬಲ್‌ ಕೆಳಗೆ ಹಣ, ನಂತರ ಟೇಬಲ್ ಮೇಲೆ ಕಡತ ಬರುತ್ತದೆ. ಸರ್ಕಾರಿ ಕಚೇರಿಗಳಲ್ಲಿ ಈ ರೀತಿಯ ವ್ಯವಸ್ಥೆಯಿದೆ. ಈ ಎಲ್ಲ ಅವ್ಯವಸ್ಥೆಗಳನ್ನು ಸರಿಪಡಿಸಬೇಕು” ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಲೋಕಾಯುಕ್ತ ಕೋರ್ಟ್ ಆದೇಶ; ಅಧಿಕಾರಿಗಳಿಂದ ಸ್ಥಳ ಮಹಜರು

ಇದೇ ಸಂದರ್ಭದಲ್ಲಿ ಸರ್ಕಾರಿ ಇಲಾಖೆಯ ವಿವಿಧ ಕಚೇರಿಗಳಿಗೆ ಭೇಟಿ ನೀಡಲಾಯಿತು. ಅಲ್ಲಿಯ ಸಿಬ್ಬಂದಿ ಗುರುತಿನ ಚೀಟಿ ಹಾಕದಿರುವುದು ಹಾಗೂ ಇನ್ನಿತರ ಲೋಪದೋಷಗಳನ್ನು ಸರಿಪಡಿಸಲು ಮೌಖಿಕವಾಗಿ ಸಂಬಂಧಪಟ್ಟ ಇಲಾಖಾ ಮುಖ್ಯಸ್ಥರ ಗಮನಕ್ಕೆ ತಂದಿದ್ದಾರೆ.

ಜಿಲ್ಲಾ ಉಪಾಧ್ಯಕ್ಷ ಮಲ್ಲೇಶ ಹೇಬಕವಾಡಿ, ಪ್ರಧಾನ ಕಾರ್ಯದರ್ಶಿ ಚಂದ್ರುಕಿಲಾರ, ಜಿಲ್ಲಾ ಕಾರ್ಯದರ್ಶಿಗಳಾದ ಯೋಗಿಶ್ ಎಚ್ ಈ, ಶಶಿಧರ್ ನಂದೀಶ್, ಜಿಲ್ಲೆಯ ಎಲ್ಲ ತಾಲೂಕು ಅಧ್ಯಕ್ಷರು, ತಾಲೂಕು ಪ್ರಧಾನ ಕಾರ್ಯದರ್ಶಿಗಳು ಹಾಗೂ ಇತರ ಪದಾಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...