ಮಂಡ್ಯ | ಡಿ.5ರಿಂದ ಮೂರು ದಿನ ನಡೆಯಲಿರುವ ಕೃಷಿಮೇಳವನ್ನು ಸದ್ಬಳಕೆ ಮಾಡಿಕೊಳ್ಳಿ: ಕೆ ಎಂ ಹರಿಣಿಕುಮಾರ್‌

Date:

ಸಮಗ್ರ ಕೃಷಿಯಿಂದ ಸುಸ್ಥಿರತೆ ಎಂಬ ಧ್ಯೇಯ ವಾಕ್ಯದಡಿ ಮಂಡ್ಯದ ವಿ ಸಿ ಫಾರಂ ಕೃಷಿ ವಿಜ್ಞಾನಿಗಳ ವಿಶ್ವವಿದ್ಯಾಲಯದಲ್ಲಿ ಮೂರು ದಿನ ಕೃಷಿಮೇಳ ನಡೆಯಲಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕೃಷಿ ಮೇಳದ ಅಗತ್ಯ ಹಾಗೂ ಅರಿವಿನ ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಕೃಷಿ ವಿವಿ ವಿಶೇಷ ಅಧಿಕಾರಿ ಕೆ ಎಂ ಹರಿಣಿಕುಮಾರ್‌ ತಿಳಿಸಿದರು.

ನಗರದಲ್ಲಿ ಪತ್ರಿಕಾಗೋಷ್ಟಿ ಉದ್ದೇಶಿಸಿ ಮಾತನಾಡಿ, “ಮಂಡ್ಯದ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯ, ಕರ್ನಾಟಕ ಸರ್ಕಾರದ ಕೃಷಿ, ತೋಟಗಾರಿಕೆ, ಪಶು ಸಂಗೋಪನೆ ಮತ್ತು ಪಶುವೈದ್ಯಕೀಯ ಸೇವೆಗಳು ಜಲಾನಯನ ಅಭಿವೃದ್ಧಿ, ರೇಷ್ಮೆ, ಅರಣ್ಯ, ಮೀನುಗಾರಿಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ನಬಾರ್ಡ್ ಸಹಯೋಗದಲ್ಲಿ ಡಿಸೆಂಬರ್‌ 5, 6 ಮತ್ತು 7ರಂದು ಆಯೋಜಿಸಲಾಗಿದೆ” ಎಂದು ಹೇಳಿದರು.

“ಡಿ.5ರ ಬೆಳಿಗ್ಗೆ 10.30ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಘನ ಉಪಸ್ಥಿತಿ ಇರುವರು. ಶಾಸಕ ದರ್ಶನ್ ಪುಟ್ಟಣ್ಣಯ್ಯ ಅಧ್ಯಕ್ಷತೆ ವಹಿಸುವರು. ಸಚಿವರಾದ ಎನ್ ಚಲುವರಾಯಸ್ವಾಮಿ, ಪ್ರಿಯಾಂಕ್ ಖರ್ಗೆ, ಕೆ ವೆಂಕಟೇಶ್ ಆಗಮಿಸುವರು. ಶಾಸಕರಾದ ಎಂ ಬಿ ರಮೇಶ್ ಬಂಡಿಸಿದ್ದೇಗೌಡ, ಪಿ ರವಿಕುಮಾರ್, ಎಚ್ ಟಿ ಮಂಜು, ಕೆ ಎಂ ಉದಯ್‌, ಪಿ ಎಂ ನರೇಂದ್ರಸ್ವಾಮಿ, ವಿಧಾನ ಪರಿಷತ್ ಶಾಸಕರಾದ ದಿನೇಶ್ ಗೂಳಿಗೌಡ, ಕೆ ವಿವೇಕಾನಂದ, ಮಧು ಜಿ ಮಾದೇಗೌಡ ಭಾಗವಹಿಸುವರು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬಿಸಿಯೂಟ ನೌಕರರ ವೇತನ ಹೆಚ್ಚಳಕ್ಕೆ ರಾಜ್ಯಾದ್ಯಂತ ಅನಿರ್ದಿಷ್ಟಾವಧಿ ಧರಣಿ: CITU ಮಂಗಳೂರು ಜಿಲ್ಲಾ ಘಟಕ ಬೆಂಬಲ

“ಡಿ.6ರ ಬೆಳಿಗ್ಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ. ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ರಾಜ್ಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಆಗಮಿಸುವರು. ಡಿ.7ರ ಮಧ್ಯಾಹ್ನ 2 ಗಂಟೆಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ರಾಜ್ಯಪಾಲ ಥಾವರಚಂದ್ ಗೆಹಲೋತ್‌ ಭಾಗವಹಿಸುವರು” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...