ಮಂಡ್ಯ | ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ

Date:

ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ ಯುವಕನೋರ್ವ ಜಿಲೆಟಿನ್ ಸ್ಪೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಡ್ಯದ ನಾಗಮಂಗಲದ ಕಾಳೇನಹಳ್ಳಿಯಲ್ಲಿ ನಡೆದಿದೆ.

ನಾಗಮಂಗಲದ ಬಸವೇಶ್ವರ ನಗರ ನಿವಾಸಿ ರಾಮಚಂದ್ರ(21) ಮೃತಪಟ್ಟ ಯುವಕ. ಈತ ಕಳೆದ ರಾತ್ರಿ, ಕಲ್ಲು ಗಣಿಗಾರಿಕೆಗೆ ಬಳಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಮಚಂದ್ರ ಕಾಳೇನಹಳ್ಳಿಯ ಅಪ್ರಾಪ್ತೆಯನ್ನು ಪ್ರೀತಿಸುತ್ತಿದ್ದ. ಕಳೆದ ವರ್ಷ ಇವರಿಬ್ಬರು ಮನೆ ತೊರೆದು ಓಡಿ ಹೋಗಿದ್ದರು. ಆ ವೇಳೆ ರಾಮಚಂದ್ರ ವಿರುದ್ದ ಪೋಕ್ಸೊ ಕಾಯ್ದೆ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಆರು ತಿಂಗಳು ಜೈಲು ಶಿಕ್ಷೆಯನ್ನೂ ಅನುಭವಿಸಿದ್ದ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕೊಪ್ಪಳ | ಗಾಯಕಿ ಗೌರಿ ಗೋನಾಳಗೆ ಅಕ್ಷರದವ್ವ ಸಾವಿತ್ರಿ ಬಾಯಿ ಫುಲೆ ಪ್ರಶಸ್ತಿ

ಬಳಿಕ 2 ಕುಟುಂಬಗಳ ರಾಜಿ ಸಂಧಾನ ಬಳಿಕ ಕೇಸ್ ಹಿಂಪಡೆದಿದ್ದರು. ಆ ಬಳಿಕ ಅಪ್ರಾಪ್ತೆ ಪ್ರಿಯತಮೆ ರಾಮಚಂದ್ರನ ಸಂಪರ್ಕಕ್ಕೆ ಸಿಕ್ಕಿರಲಿಲ್ಲ ಎನ್ನಲಾಗಿದೆ. ಇದರಿಂದ ಮನನೊಂದಿದ್ದ ರಾಮಚಂದ್ರ ಕಳೆದ ರಾತ್ರಿ ಯುವತಿಯ ಮನೆ ಬಳಿ ತೆರಳಿ ಬಂಡೆಗಳನ್ನು ಸಿಡಿಸುವ ಜಿಲೆಟಿನ್ ಸ್ಫೋಟಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದೆ. ಸ್ಫೋಟದ ತೀವ್ರತೆಗೆ ರಾಮಚಂದ್ರನ ದೇಹ ಛಿದ್ರ-ಛಿದ್ರವಾಗಿದೆ.

ಈ ಬಗ್ಗೆ ನಾಗಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...