ಮಂಡ್ಯ | ಇತ್ತೀಚೆಗೆ ಪತ್ತೆಯಾದ ಶ್ರೀರಂಗಪಟ್ಟಣದ ಐತಿಹಾಸಿಕ ಜೋಡಿ ನೆಲಮಾಳಿಗೆ ಅಗೆದ ಕಿಡಿಗೇಡಿಗಳು

Date:

ಶ್ರೀರಂಗಪಟ್ಟಣದಲ್ಲಿ ಮೈಸೂರು-ಬೆಂಗಳೂರು ಹೆದ್ದಾರಿ ಪಕ್ಕದಲ್ಲಿರುವ, ಇತ್ತೀಚೆಗೆ ಪತ್ತೆಯಾಗಿರುವ ಐತಿಹಾಸಿಕ ಜೋಡಿ ನೆಲಮಾಳಿಗೆಗಳ ಒಳಭಾಗವನ್ನು ಕಿಡಿಗೇಡಿಗಳು ಕೆಲವು ದಿನದ ಹಿಂದೆ ಅಗೆದು ಹಾಕಿರುವ ಹಿನ್ನೆಲೆಯಲ್ಲಿ ಶ್ರೀರಂಗಪಟ್ಟಣ ಪ್ರಜ್ಞಾವಂತ ನಾಗರಿಕರು ಅಕ್ಟೋಬರ್‌ 26ರ ಶನಿವಾರ ಭೇಟಿ ನೀಡಿ ವೀಕ್ಷಿಸಿದರು.

ಸುಮಾರು 8 ಅಡಿ ಅಗಲ ಮತ್ತು 15 ಅಡಿ ಉದ್ದ ಇರುವ ನೆಲಮಾಳಿಗೆಗಳ ಚುರಕಿ ಗಾರೆಯ ನೆಲಹಾಸನ್ನು ಹಾರೆ ಇಲ್ಲವೇ ಪಿಕಾಸಿ ಬಳಸಿ ಎರಡು ಅಡಿ ಆಳದಷ್ಟು ಅಗೆಯಲಾಗಿದೆ. ನೆಲಮಾಳಿಗೆಗಳ ಮುಂದಿನ ನಕ್ಷತ್ರಾಕಾರದ ಕಟ್ಟಡದ ಎರಡು ಕಲ್ಲಿನ ದಿಮ್ಮಿಗಳನ್ನೂ ಕೂಡ ಕೀಳಲಾಗಿದೆ. ಇದು ನಿಧಿಗಳ್ಳರ ಕೃತ್ಯವಿರಬಹುದೆಂದು ಶಂಕಿಸಲಾಗಿದೆ.

ಅಪ್ಸರ್ ಖಾನ್ ಮಾತನಾಡಿ, “ವಸ್ತುಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆಯ ಕ್ಯೂರೇಟರ್ ಎನ್ ಎನ್ ಗೌಡ ಹಾಗೂ ಮತ್ತಿತರ ಅಧಿಕಾರಿಗಳು ಅಕ್ಟೋಬರ್‌ 22ರಂದು ಭೇಟಿ ನೀಡಿದ್ದರು. ಮೇಲಧಿಕಾರಿಗಳಿಗೆ ವರದಿ ಮಾಡುತ್ತೇವೆ. ಇಲಾಖೆಯ ಲಭ್ಯ ಅನುದಾನ ನೋಡಿಕೊಂಡು ಈ ಸ್ಮಾರಕಗಳನ್ನು ಅಭಿವೃದ್ಧಿ ಮಾಡಲು ಕ್ರಮವಹಿಸಲಾಗುವುದೆಂದು ಭರವಸೆ ನೀಡಿದರು. ಈ ಮಾತಷ್ಟೇ ಸಾಕಾಗುವುದಿಲ್ಲ. ಶೀಘ್ರ ಶ್ರೀರಂಗಪಟ್ಟಣದ ಸ್ಮಾರಕಗಳ ಸಂರಕ್ಷಣೆಗೆ ಪುರಾತತ್ವ ಇಲಾಖೆ, ಪುರಸಭೆ, ಪೊಲೀಸ್ ಇಲಾಖೆ ಸೇರಿದಂತೆ ಎಲ್ಲರೂ ಕ್ರಮವಹಿಸಬೇಕು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪ್ರಾಚ್ಯವಸ್ತು ಇಲಾಖೆ ಸ್ಮಾರಕಗಳನ್ನು ಸಂರಕ್ಷಿಸಲು ಕ್ರಮವಹಿಸದ ಕಾರಣ ಅಪಾಯ ಎದುರಾಗಿದೆ. ಗಿಡಗಂಟಿಗಳ ಮಧ್ಯೆ ಮುಚ್ಚಿ ಹೋಗಿದ್ದ ಸ್ಮಾರಕಗಳ ಪರಿಸರವನ್ನು ವಿವಿಧ ಸಂಘ, ಸಂಸ್ಥೆಗಳ ಕಾರ್ಯಕರ್ತರು, ವಿಧ್ಯಾರ್ಥಿಗಳು ಸ್ವಚ್ಛಗೊಳಿಸಿ ಸಾರ್ವಜನಿಕರಿಗೆ ಕಾಣುವಂತೆ ಮಾಡಿದ್ದಾರೆ. ಆದರೆ ಇಲಾಖೆ ತನಗೂ ಇದಕ್ಕೂ ಸಂಬಂಧವಿಲ್ಲದಂತೆ ನಿರ್ಲಕ್ಷ್ಯ ವಹಿಸಿದೆ” ಎಂದು ಸಮರ್ಪಣಾ ಟ್ರಸ್ಟ್ ಅಧ್ಯಕ್ಷ ಕಡತನಾಳು ಕೆ ಎಸ್ ಜಯಶಂಕರ್ ಆರೋಪಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಯಚೂರು | ಜನರ ಸಮಸ್ಯೆಗಳ ಜೊತೆಗೆ ನಿಲ್ಲುವುದೇ ರಾಜಕೀಯ : ಸಂಸದ ಸಸಿಕಾಂತ್‌ ಸೆಂಥಿಲ್‌

“ಟಿಪ್ಪು ಸುಲ್ತಾನ್ ಕಾಲದ ನೆಲಮಾಳಿಗೆಗಳು ವಿಶಿಷ್ಟ ರಚನಾ ಶೈಲಿಯನ್ನು ಹೊಂದಿದ್ದು, ಮುಂದಿನ ಪೀಳಿಗೆಗೂ ಉಳಿಸಬೇಕು. ಪ್ರವಾಸಿ ತಾಣವಾಗಿ ಅಭಿವೃದ್ಧಿಪಡಿಸಲು ಕ್ರಮ ವಹಿಸಬೇಕು” ಎಂದು ಸ್ಥಳಕ್ಕೆ ಭೇಟಿ ನಿಡಿದ್ದ ಕನ್ನಡಪರ ಹೋರಾಟಗಾರರಾದ ಪ್ರಿಯ ರಮೇಶ್ ಮತ್ತು ಡಿಎಸ್‌ಎಸ್‌ನ ಟಿಪ್ಪು ಚಂದ್ರು ಆಗ್ರಹಿಸಿದರು.

ವೆಂಕಟೇಗೌಡ ಸೇವಾ ಸಮಿತಿಯ ಡಾ. ಕೆ ವೈ ಶ್ರೀನಿವಾಸ್, ಹೆಗ್ಗಡದೇವನಕೋಟೆಯ ಮಾಲಾರ ಪುಟ್ಟಯ್ಯ, ಬಾಬುರಾಯನಕೊಪ್ಪಲು ಚಂದ್ರಣ್ಣ, ರಂಗನಾಯಕಿ ಸಮಾಜದ ಸಂಸ್ಥಾಪಕರಾದ ಆಶಾಲತಾ ಪುಟ್ಟೆಗೌಡ, ಪ್ರಿಯ ರಮೇಶ್, ಅಪ್ಸರ್ ಖಾನ್, ಟಿಪ್ಪು ಚಂದ್ರು, ಅಯೂಬ್, ಪಾಲಹಳ್ಳಿ ಗಾಯತ್ರಿದೇವಿ, ಅಬ್ದುಲ್ ಸುಕೂರ್ ತರೀಪುರ ಸೇರಿದಂತೆ ಇತರರು ಭೇಟಿ ನೀಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...