ಮಂಡ್ಯ | ಸಾಮಾನ್ಯ ಜನರ ಜತೆ ಕುಳಿತು ಮೆಸ್‌ನಲ್ಲಿ ಊಟ ಮಾಡಿದ ಶಾಸಕ ದರ್ಶನ್ ಪುಟ್ಟಣ್ಣಯ್ಯ; ಸಾರ್ವಜನಿಕರಿಂದ ಮೆಚ್ಚುಗೆ

Date:

ಶಾಸಕರಾದವರು ಐಷರಾಮಿ ಹೋಟೆಲ್‌ಗಳಲ್ಲಿ ಊಟ ಮಾಡುವುದು ಸರ್ವೆ ಸಾಮಾನ್ಯ. ಆದರೆ ಮಂಡ್ಯ ಜಿಲ್ಲೆಯ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಸಾಮಾನ್ಯ ಮೆಸ್ ಒಂದರಲ್ಲಿ ಸಾಮಾನ್ಯ ಜನರ ಜತೆ ಕುಳಿತು ಊಟ ಮಾಡುವ ಮೂಲಕ ಎಲ್ಲರ ಗಮನಸೆಳೆದರು.

ಮಂಡ್ಯ ಜಿಲ್ಲೆಯ ಪಾಂಡವಪುರ ಪಟ್ಟಣದ ತಾಲೂಕು ಕಚೇರಿಯಲ್ಲಿರುವ ಶಾಸಕರ ಕಚೇರಿಗೆ ಭೇಟಿ ನೀಡಿ ರೈತಸಂಘದ ಕಾರ್ಯಕರ್ತರ ಸಮಸ್ಯೆಗಳನ್ನು ಆಲಿಸಿದ ಬಳಿಕ ಪ್ರಕಾಶ್ ಮೆಸ್‌ನಲ್ಲಿ ಸಾಮಾನ್ಯ ಜನರಂತೆಯೇ ಮಧ್ಯಾಹ್ನದ ಊಟ ಮಾಡಿದರು.

ತಾವೊಬ್ಬ ಶಾಸಕನೆಂಬ ಹಮ್ಮುಬಿಮ್ಮು ಬಿಟ್ಟು ಸಾಮಾನ್ಯ ಜನರ ಜತೆಯಲ್ಲಿಯೇ ಕುಳಿತು ಊಟ ಮಾಡುವ ಮೂಲಕ ಗಮನಸೆಳೆದರು. ಈ ವೇಳೆ ಶಾಸಕರನ್ನು ಕಂಡ ಜನರು ಶಾಸಕ ದರ್ಶನ್ ಪುಟ್ಟಣ್ಣಯ್ಯ ಊಟ ಮಾಡುತ್ತಿದ್ದ ಸ್ಥಳಕ್ಕೆ ಬಂದು ಮಾತನಾಡಿಸುತ್ತಿದ್ದ ದೃಶ್ಯ ಕಂಡುಬಂದಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದೆ ಅವರ ತಂದೆ ದಿ‌. ಕೆ ಎಸ್ ಪುಟ್ಟಣ್ಣಯ್ಯ ಕೂಡ ಮೆಸ್ ಹಾಗೂ ಶೆಡ್ ಹೋಟೆಲ್‌ಗಳಲ್ಲಿ ಊಟ ಮಾಡುತ್ತಿದ್ದುದ್ದನ್ನು ಇಲ್ಲಿ ಸ್ಮರಿಸಬಹುದು.

ಈ ಸುದ್ದಿ ಓದಿದ್ದೀರಾ? ಹಾವೇರಿ | ಕಸಾಪ ಯುವ ಜನಾಂಗವನ್ನು ಹೆಚ್ಚು ಗಮನ ಸೆಳೆಯಬೇಕು: ಹಿರಿಯ ಸಾಹಿತಿ ಸತೀಶ್ ಕುಲಕರ್ಣಿ

ಅಂತೆಯೇ ಮೇಲುಕೋಟೆ ಕ್ಷೇತ್ರದ ಜನಪ್ರಿಯ ಶಾಸಕ ದರ್ಶನ್ ಪುಟ್ಟಣ್ಣಯ್ಯ ಕೂಡ ತಮ್ಮ ತಂದೆ ಕೆ ಎಸ್ ಪುಟ್ಟಣ್ಣಯ್ಯ ರೀತಿಯಲ್ಲಿಯೇ ಮೆಸ್ ಹಾಗೂ ಶೆಡ್ ಹೋಟೆಲ್‌ಗಳಲ್ಲಿ ಊಟ ಮಾಡುವ ಮೂಲಕ ತಂದೆ‌ಯವರು ನಡೆದ ಮಾದರಿಯಲ್ಲಿ ನಡೆಯತೊಡಗಿದ್ದಾರೆ. ಇದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಶಾಸಕ ದರ್ಶನ್ ಪುಟ್ಟಣ್ಣಯ್ಯ ಜತೆ ರೈತಸಂಘದ ಮುಖಂಡ ಕನಗನಮರಡಿ ಬಲರಾಮು ಸೇರಿದಂತೆ ಇತರರು ಇದ್ದರು.

ವರದಿ : ರಂಗನಾಥ್, ಮಾಕವಳ್ಳಿ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...