ಮಂಡ್ಯ | ಲಾಟರಿ ಹಾವಳಿಯ ಬಗ್ಗೆ ಜನರಲ್ಲಿ ಅರಿವು ಮೂಡಿಸಬೇಕಿದೆ: ಜಿಲ್ಲಾಧಿಕಾರಿ ಕುಮಾರ್

Date:

ಮಂಡ್ಯ ಜಿಲ್ಲೆಯಲ್ಲಿ ಲಾಟರಿ ಹಾವಳಿಯಿಂದ ಆಗುತ್ತಿರುವ ಹಣಕಾಸು ಮತ್ತು ಸಾಮಾಜಿಕ ದುಷ್ಪರಿಣಾಮಗಳ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ. ಕುಮಾರ್ ತಿಳಿಸಿದರು.

ಅವರು ನ.7ರಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಅನಧಿಕೃತ ಲಾಟರಿ ಮಾರಾಟ ಮತ್ತು ಮಟ್ಕಾ ಹಾವಳಿಯನ್ನು ನಿಯಂತ್ರಿಸಲು ಸಭೆ ನಡೆಸಿ ಮಾತನಾಡಿ, ಲಾಟರಿಯ ಪರಿಣಾಮವಾಗಿ ಜಿಲ್ಲೆಯ ಜನರ ಮೇಲೆ ನಕಾರಾತ್ಮಕ ಪರಿಣಾಮಗಳು ಬೀರುತ್ತಿರುವುದಾಗಿ ಹೇಳಿದರು.

ಬೇರೆ ರಾಜ್ಯಗಳಿಂದ ಅನಧಿಕೃತವಾಗಿ ಲಾಟರಿ ಟಿಕೆಟ್‌ಗಳನ್ನು ಜಿಲ್ಲೆಗೆ ತಂದು ಮಾರಾಟ ಮಾಡಲಾಗುತ್ತಿದೆ. ಜನಸಾಮಾನ್ಯರಲ್ಲಿ ಆರ್ಥಿಕ ನಷ್ಟ ಮತ್ತು ಕೌಟುಂಬಿಕ ಕಲಹ ಉಂಟಾಗುತ್ತಿದೆ. ಅನಧಿಕೃತ ಲಾಟರಿ ಟಿಕೆಟ್ ಮಾರಾಟ ಸಂಬಂಧ ಈ ವರ್ಷದಲ್ಲೇ ನಾಲ್ಕು ಪ್ರಕರಣಗಳು ದಾಖಲಾಗಿವೆ ಮತ್ತು ವಿಶೇಷವಾಗಿ ಕಿರುಗಾವಲು ಪ್ರದೇಶದಲ್ಲಿ ಹೆಚ್ಚು ದೂರುಗಳು ಬಂದಿವೆ ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಲಾಟರಿ ಮಾರಾಟದಿಂದ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದೇ ಈ ಸಮಸ್ಯೆಯನ್ನು ತಡೆಯುವ ದಾರಿಯಾಗಿದೆ ಎಂದು ಅಭಿಪ್ರಾಯಪಟ್ಟ ಜಿಲ್ಲಾಧಿಕಾರಿ, ಇದಕ್ಕಾಗಿ ಗ್ರಾಮ ಪಂಚಾಯಿತಿ, ಸ್ತ್ರೀ ಶಕ್ತಿ ಸಂಘ, ಸ್ವಸಹಾಯ ಸಂಘಗಳು, ಮತ್ತು ಶಾಲಾ ಮಕ್ಕಳು ಜಾಥಾ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಜನರಲ್ಲಿ ಲಾಟರಿಯ ಹಾನಿಕರ ಪರಿಣಾಮಗಳ ಕುರಿತು ಜಾಗೃತಿ ಮೂಡಿಸಬೇಕೆಂದು ಸೂಚಿಸಿದರು.

ಅನಧಿಕೃತ ಲಾಟರಿ ಮಾರಾಟಗಾರರು ಹಾಗೂ ಲಾಟರಿ ಟಿಕೆಟ್ ಕೊಳ್ಳುವವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂಬ ಎಚ್ಚರಿಕೆಯನ್ನು ಅವರು ನೀಡಿದರು.

ಲಾಟರಿ ಟಿಕೆಟ್ ಮಾರಾಟದ ಅಕ್ರಮವನ್ನು ತಡೆಗಟ್ಟಲು ಫ್ಲೈಯಿಂಗ್ ಸ್ಕ್ವಾಡ್ ಮೂಲಕ ನಿಯಂತ್ರಣ ಕ್ರಮ ಕೈಗೊಳ್ಳಲಾಗುವುದು, ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಅನುಕೂಲಕರವಾದ ವಿವಿಧ ಕಾರ್ಯಕ್ರಮಗಳನ್ನು ಜಿಲ್ಲಾಡಳಿತ ಕೈಗೊಳ್ಳಲಿದೆ ಎಂದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ಹೆಚ್. ಎಲ್. ನಾಗರಾಜು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ತಿಮ್ಮಯ್ಯ, ಸಣ್ಣ ಉಳಿತಾಯ ಮತ್ತು ರಾಜ್ಯ ಲಾಟರಿ ಸಹಾಯಕ ನಿರ್ದೇಶಕ ಗಿರೀಶ್, ಅಭಿವೃದ್ಧಿ ಅಧಿಕಾರಿ ಶಿವಕುಮಾರ್, ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಬಿ.ಎಸ್. ಲೋಕೇಶ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

1002292685
1002292687
1002292688
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...