ಮಂಡ್ಯ | ನ.9,10; ಚಿತ್ರಕೂಟ ಸಂಘಟನೆಯಿಂದ ‘ಶಂಕರ ನಿರಂತರ’ ಕಾರ್ಯಕ್ರಮ

Date:

ಚಿತ್ರಕೂಟ ಸಂಘಟನೆ ವತಿಯಿಂದ ಮಂಡ್ಯ ತಾಲೂಕಿನ ಚಿಕ್ಕಮಂಡ್ಯ ಸರ್ಕಾರಿ ಶಾಲೆಯಲ್ಲಿ ನ.9 ಮತ್ತು 10ರಂದು ಮಿಂಚಿನ ಓಟಗಾರ ಶಂಕರ್‌ನಾಗ್ ಜನ್ಮದಿನ ಮತ್ತು ನಿತ್ಯ ಸಚಿವ ಕೆವಿ ಶಂಕರಗೌಡರ ನೆನಪಿನಲ್ಲಿ ಸಂಗೀತ, ಶ್ರಮದಾನ, ಸರ್ಕಾರಿ ಶಾಲೆಗೆ ಸುಣ್ಣ ಬಣ್ಣ ಬಳಿಯುವ ‘ಶಂಕರ ನಿರಂತರ’ ಕಾರ್ಯಕ್ರಮ ನಡೆಯಲಿದೆ.

ಸದರಿ ದಿನಗಳಂದು ಪಿಇಎಸ್‌ ಕಾಲೇಜಿನ ವಿದ್ಯಾರ್ಥಿಗಳಿಂದ ಶ್ರಮದಾನ ಕಾರ್ಯಕ್ರಮ ನಡೆಯಲಿದ್ದು, ಸಂಜೆ ವೇದಿಕೆ ಕಾರ್ಯಕ್ರಮಗಳು ನಡೆಯಲಿವೆ ಎಂದು ಸಂಘಟಕರು ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ.ಬಿ.ವಿ.ನಂದೀಶ್, ಕ್ರೀಡಾ ಮತ್ತು ಯುವಜನ ಇಲಾಖೆ ಸಹಾಯಕ ನಿರ್ದೇಶಕ ಓಂ ಪ್ರಕಾಶ್, ಶಾಲಾ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಶಿವರಾಮೇಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಮಹದೇವು, ಕೀಲು ಮತ್ತು ಮೂಳೆ ರೋಗ ತಜ್ಞ ಡಾ.ರವಿಕುಮಾ‌ರ್, ಕನ್ನಡ ಮನಸ್ಸುಗಳು ಪವನ್ ಧರೆಗುಂಡಿ, ಗಂಧದಗುಡಿ ಕನ್ನಡ ಬಳಗದ ನಿತಿನ್ ಭಾಗವಹಿಸಲಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭರವಸೆ, ಸಮರ್ಪಣಾ ಸಂಸ್ಥೆ, ಆರ್ಟ್ 4ಯು, ನಮ್ಮ ನಾಡು ನಮ್ಮ ಅಳ್ವಿಕೆ ಬಳಗ ಸ್ವಯಂ ಸೇವಾ ಸಂಸ್ಥೆಗಳೊಂದಿಗೆ ಕರ್ನಾಟಕ ಜನಶಕ್ತಿ ಹೋರಾಟಗಾರ್ತಿ ಪೂರ್ಣಿಮ, ಕರುನಾಡ ಸೇವಕರು ಸಂಘಟನೆಯ ಎಂ.ಬಿ. ನಾಗಣ್ಣಗೌಡ, ರೈತರ ಶಾಲೆ ಮುಖ್ಯಸ್ಥ ಪ್ರೊ.ಸತ್ಯಮೂರ್ತಿ ಭಾಗವಹಿಸುವರು.

ನ.10ರಂದು ಸಂಜೆ 4 ಗಂಟೆಗೆ ಜಿ.ಪಂ.ಸಿಇಓ ಶೇಖ್ ತನ್ನೀ‌ರ್ ಅಸೀಫ್‌ ಸಮಾರಂಭ ಉದ್ಘಾಟಿಸುವರು. ಮುಖ್ಯ ಅತಿಥಿಯಾಗಿ ಪಿಇಟಿ ಅಧ್ಯಕ್ಷ ಕೆ.ಎಸ್. ವಿಜಯಾನಂದ ಭಾಗವಹಿಸುವರು. ತಾ.ಪಂ.ಇಓ ವೀಣಾ ಆಶಯ ನುಡಿ ನುಡಿಯುವರು. ಕೆ.ವಿ. ಶಂಕರಗೌಡರು ಮತ್ತು ಆಧುನಿಕ ಮಂಡ್ಯ ಕುರಿತು ವಕೀಲ ಜೀರಹಳ್ಳಿ ರಮೇಶ್‌ ಗೌಡ, ಉತ್ತಮ ಸಮಾಜ ನಿರ್ಮಾಣಕ್ಕೆ ಯುವಜನರ ಪಾತ್ರ ಕುರಿತು ಕವಿ ಮತ್ತು ರಾಜೇಂದ್ರ ಪ್ರಸಾದ್‌, ಸಮಾಜಮುಖಿ ಶಂಕರ್ ನಾಗ್ ಒಂದು ಅವಲೋಕನ ಕುರಿತು ಸಾಮಾಜಿಕ ಚಿಂತಕ ವಿನಯ್ ಕುಮಾರ್ ವಿಶೇಷ ಉಪನ್ಯಾಸ ನೀಡುವರು.

ಇದನ್ನು ಓದಿದ್ದೀರಾ? ಕೋವಿಡ್​ ಹಗರಣ | ಯಡಿಯೂರಪ್ಪ, ಶ್ರೀರಾಮುಲು ವಿರುದ್ಧ ಕಾನೂನು ಕ್ರಮಕ್ಕೆ ನ್ಯಾ. ಡಿ’ಕುನ್ಹಾ ಆಯೋಗ ಶಿಫಾರಸು

ಚಿಕ್ಕಮಂಡ್ಯ ಗ್ರಾ.ಪಂ.ಅಧ್ಯಕ್ಷ ಆನಂದ್ ಪಿ, ಚಿಕ್ಕಮಂಡ್ಯ ಪ್ರೌಢಶಾಲೆ ಮುಖ್ಯೋಪಾಧ್ಯಾಯ ಎಚ್‌.ಎನ್‌ ದೇವರಾಜು, ಎಡಿಎಂಸಿ ಅಧ್ಯಕ್ಷ ಮಹೇಶ್‌ ಸಿ.ಎಂ, ನುಡಿ ಕರ್ನಾಟಕ ಸಂಪಾದಕ ಸಂತೋಷ್ ಜಿ ಹಾಗೂ ಪರಿಚಯ ಪ್ರಕಾಶನ ಶಿವಕುಮಾ‌ರ್ ಆರಾಧ್ಯ ಭಾಗವಹಿಸಲಿದ್ದಾರೆ ಎಂದು ಸಂಘಟಕರು ತಿಳಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...