ಮಂಡ್ಯ | ಪ್ರಾಥಮಿಕ ಕೃಷಿ, ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ನೆರವಿಗೆ ನಿಲ್ಲಬೇಕು: ಶಾಸಕ ಎಚ್ ಟಿ ಮಂಜು

Date:

ಪ್ರಾಥಮಿಕ ಕೃಷಿ ಸಹಕಾರ ಸಂಘ ಹಾಗೂ ಹಾಲು ಉತ್ಪಾದಕರ ಸಹಕಾರ ಸಂಘಗಳು ರೈತರ ನೆರವಿಗೆ ನಿಲ್ಲಬೇಕು ಎಂದು ಕೆ ಆರ್‌ ಪೇಟೆ ತಾಲೂಕಿನ ಶಾಸಕ ಎಚ್ ಟಿ ಮಂಜು ಹೇಳಿದರು.

ಮಂಡ್ಯ ಜಿಲ್ಲೆ ಕೆ ಆರ್ ಪೇಟೆ ತಾಲೂಕಿನ ಶೀಳನೆರೆ ಹೋಬಳಿಯ ಹರಳಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಉದ್ಘಾಟಿಸಿ ಮಾತನಾಡಿದರು.

“ರೈತರಿಗೆ ಕಷ್ಟ ಬಂದಾಗ, ಹಣದ ಸಮಸ್ಯೆಗಳು ಎದುರಾದಾಗ ಸಹಕಾರ ಸಂಘಗಳು ಸಾಲ ಸೌಲಭ್ಯಗಳನ್ನು ನೀಡುವ ಮೂಲಕ ರೈತರ ಜೀವನಾಡಿಗಳಾಗಬೇಕು. ಪ್ರಗತಿಗೆ ಪ್ರತಿಯೊಬ್ಬರೂ ಕೈಜೋಡಿಸುವ ಮೂಲಕ ಸಹಕಾರಿಗಳಾಗಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಸಹಕಾರ ಸಂಘದ ಸದಸ್ಯರ ಸಭೆ

“ಸಹಕಾರಿ ಸಂಘಗಳು ಕೆಲವು ಅಭಿವೃದ್ಧಿ ಹೊಂದಿವೆ, ಇನ್ನೂ ಕೆಲವು ಅಭಿವೃದ್ಧಿ ಹೊಂದುತ್ತಿಲ್ಲ. ಸಹಕಾರಿ ಸಂಘಗಳಲ್ಲಿನ ಲೋಪದೋಷಗಳೇ ಇದಕ್ಕೆ ಕಾರಣ. ವಿಶೇಷ ಸವಲತ್ತುಗಳನ್ನು ರೈತರಿಗೆ ತಲುಪಿಸುವ ಮೂಲಕ ಅಭಿವೃದ್ಧಿ ಹೊಂದಬೇಕು. ತಾಲೂಕಿನಲ್ಲೇ ನನ್ನ ಹುಟ್ಟೂರಿನ ಹರಳಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಉತ್ತಮವಾಗಿ ವ್ಯವಹಾರದ ಮೂಲಕ ಆದಾಯದಲ್ಲಿ ನಾಲ್ಕನೇ ಸ್ಥಾನದಲ್ಲಿ ಇರುವುದು ನಿಜಕ್ಕೂ ಸಂತೋಷದ ವಿಚಾರ” ಎಂದು ಹೇಳಿದರು.

“ಸಹಕಾರಿ ಸಂಘಗಳು ಬರಿ ಸಾಲ ಕೊಡುವುದಕ್ಕೇ ಸೀಮಿತವಾಗಿರಬಾರದು. ರೈತರಿಗೆ ರಸಗೊಬ್ಬರ, ಕ್ರಿಮಿನಾಶಕ ಔಷಧಗಳು, ಪಹಣಿ ಸೇರಿದಂತೆ ರೈತರಿಗೆ ಸುಗಮವಾಗಿ ಸಿಗುವಂತಹ ಸೌಲಭ್ಯಗಳನ್ನು ನೀಡುವ ಮೂಲಕ ರೈತರಿಗೆ ಸಹಕಾರಿಯಾಗಬೇಕು” ಎಂದು ಸಲಹೆ ನೀಡಿದರು.

ಸಹಕಾರ ಸಂಘದ ಸದಸ್ಯರ ಸಭೆ 1

“ಸಿಬ್ಬಂದಿಗಳು ಶ್ರಮವಹಿಸಿ ಕೆಲಸ ಮಾಡಬೇಕು. ರೈತರ ಆದಾಯಕ್ಕೆ ತಕ್ಕಂತೆ ರೈತರಿಗೆ ಸಾಲ ನೀಡಿ. ಸಾಲ ಮನ್ನಾದಂತಹ ಕಾರ್ಯಗಳು ನಿಗದಿತ ಸಮಯದಲ್ಲಿ ನೋಡಿಕೊಳ್ಳಬೇಕು. ರೈತರೊಂದಿಗೆ ಉತ್ತಮ ಸಂಪರ್ಕ ಹೊಂದಿ ಯಾವುದೂ ಹೊರೆಯಾಗದಂತೆ ನೋಡಿಕೊಳ್ಳಬೇಕು. ಇಂದು ಸಹಕಾರಿ ಸಂಘಗಳ ಜತೆಗೆ ರಾಷ್ಟ್ರೀಯ, ಅಂತಾರಾಷ್ಟ್ರೀಯ ಬ್ಯಾಂಕ್‌ಗಳು ದೊಡ್ಡ ಪೈಪೋಟಿ ನಡೆಸುತ್ತಿವೆ. ಆದರೂ ಸಹಕಾರಿ ಸಂಘಗಳನ್ನು ಹಿಂದಕ್ಕೆ ಹಾಕಲು ಸಾಧ್ಯವಾಗುತ್ತಿಲ್ಲ. ಸಹಕಾರಿ ಸಂಘಗಳು ಸಮಾಜದ ಕಟ್ಟಕಡೆಯ ವ್ಯಕ್ತಿಗೂ ತಲುಪುತ್ತಿರುವುದರಿಂದ ಸಹಕಾರಿ ಕ್ಷೇತ್ರ ಗಣನೀಯವಾಗಿ ಬೆಳೆಯುತ್ತಿದೆ” ಎಂದು ಅಭಿಪ್ರಾಯಪಟ್ಟರು.

“ವೃತ್ತಿಪರತೆ ಅಳವಡಿಸಿಕೊಳ್ಳದಿದ್ದರೆ ಗ್ರಾಮೀಣ ಪ್ರದೇಶದಲ್ಲಿ ಸಹಕಾರ ಪತ್ತಿನ ಸಂಘಗಳು ಬೆಳೆಯುವುದು ಕಷ್ಟ. ಸಹಕಾರ ಸಂಘಗಳ ಪ್ರತಿನಿಧಿಗಳು ವೃತ್ತಿಪರತೆ, ಶಿಸ್ತು ಹಾಗೂ ಬದ್ದತೆ ಮೈಗೂಡಿಸಿಕೊಳ್ಳಬೇಕು” ಎಂದು ತಿಳಿ ಹೇಳಿದರು.

ಎಂಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಹೊಸಹೊಳಲು ಅಶೋಕ್ ಮಾತನಾಡಿ, “ರಾಷ್ಟ್ರೀಕೃತ ಬ್ಯಾಂಕ್‌ಗಳಿಗೆ ಹೋಲಿಸಿದರೆ ಸಹಕಾರ ಸಂಘಗಳ ಮೂಲಕ ತ್ವರಿತಗತಿಯಲ್ಲಿ ಸಾಲ ಸೌಲಭ್ಯ ಪಡೆದುಕೊಳ್ಳಬಹುದು. ಸಹಕಾರ ಸಂಘಗಳ ಮೂಲಕ ಸದಸ್ಯರು ತಾವು ಪಡೆದ ಸಾಲವನ್ನು ಸಮರ್ಪಕವಾಗಿ ಸಕಾಲದಲ್ಲಿ ಮರುಪಾವತಿ ಮಾಡಿದಲ್ಲಿ ಸಂಘ ಅಭಿವೃದ್ಧಿ ಹೊಂದಲು ಸಾಧ್ಯ. ಎಲ್ಲ ಸಮಾಜದ ಬಡ, ಮಧ್ಯಮ ವರ್ಗದವರಿಗೆ ಅತಿ ಸರಳ ಹಾಗೂ ಕಡಿಮೆ ಬಡ್ಡಿ ದರದಲ್ಲಿ ಸಾಲ ಸೌಲಭ್ಯ ನೀಡುವ ಮೂಲಕ ಸಹಕಾರ ಸಂಘಗಳು ಮಾಡುತ್ತಿರುವ ನಿಸ್ವಾರ್ಥ ಸೇವೆ ನಿಜಕ್ಕೂ ಶ್ಲಾಘನೀಯ” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ರೈತರ ಸಮಸ್ಯೆಯ ಬಗ್ಗೆ ಡಿ ಕೆ ಶಿವಕುಮಾರ್ ಉಡಾಫೆ ವರ್ತನೆ : ಚಾಮರಸ ಮಾಲಿ ಪಾಟೀಲ್ ಆರೋಪ

ಎಚ್ ಟಿ ಲೋಕೇಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷೆ ಅನಿತಾ, ನಿರ್ದೇಶಕರಾದ ಭೈರಾಪುರ ಜೆ ಹರೀಶ್, ರಾಯಸಮುದ್ರ ಪ್ರೇಮಕುಮಾರ್, ಮೈಲನಹಳ್ಳಿ ಮಂಜೇಗೌಡ, ಚಟ್ಟೆನಹಳ್ಳಿ ಮಹದೇವ, ಸಿಂಗಾಪುರ ಬೋರೇಗೌಡ, ಚಟ್ಟೆನಹಳ್ಳಿ ಗೋಪಾಲಶೇಟ್ಟಿ, ನೀತಿಮಂಗಲ ಲೋಕಮಾತೇ, ಲೋಕೇಶಚಾರಿ, ಸರೋಜಮ್ಮ, ಸಂಘದ ಕಾರ್ಯದರ್ಶಿ ಡಿ ಆದರ್ಶ, ಡಿ ಗ್ರೂಪ್‌ ನೌಕರರಾದ ಆಶಾ, ಅರುಣ್ ಕುಮಾರ್, ಅನುರತಿ, ಗ್ರಾ ಪಂ ಅಧ್ಯಕ್ಷ ಯೋಗೇಶ್, ಸದಸ್ಯೆ ಉಮಾ ಶ್ರೀಧರ್, ಸಂಘದ ಮಾಜಿ ಅಧ್ಯಕ್ಷ ಶಿವಲಿಂಗೇಗೌಡ, ಮಾಜಿ ಅಧ್ಯಕ್ಷ ಮಹೇಶ್, ಪಿಡಿಒ ಬಸವಶೆಟ್ಟಿ, ಸರಸ್ವತಿ, ಪ್ರತಾಪ್ ಸೇರಿದರಂತೆ ಇತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...