ಮಂಡ್ಯ | ಅಕ್ರಮವಾಗಿ ವ್ಯಾಪಿಸಿರುವ ಜೂಜು ಅಡ್ಡೆ ತಡೆಗೆ ಪ್ರಗತಿಪರ ಸಂಘಟನೆಗಳ ಆಗ್ರಹ

Date:

ಮಂಡ್ಯ ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಅಕ್ರಮ ಜೂಜು ಅಡ್ಡೆಗಳು, ಕ್ರಿಕೆಟ್ ಬೆಟ್ಟಿಂಗ್, ಹುಕ್ಕಾ ಸರಬರಾಜು ಹಾಗೂ ಜೂಜು ದಂಧೆಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಮಂಡ್ಯದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದವು.

ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕಚೇರಿ ಎದುರು ವಿವಿಧ ಸಂಘಟನೆಯ ಕಾರ್ಯಕರ್ತರು ಪ್ರತಿಭನೆ ನಡೆಸಿ, ನಂತರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

“ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ತ್ಯಾಗ ಎಂಬ ಯುವಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆಯೆಂದು ಸುಲಭವಾಗಿ ತಳ್ಳಿ ಹಾಕಿಬಿಡಬಹುದಾದ ಪ್ರಕರಣ ಎನಿಸಿಬಹುದಾದರೂ, ಆತ್ಮಹತ್ಯೆಗೆ ಕಾರಣವಾಗಿರುವ ಅಂಶಗಳು ನಾಗರಿಕ ಸಮಾಜದ ಸ್ವಾಸ್ಥ್ಯವನ್ನು ಒಳಗಿನಿಂದಲೇ ಹಾಳು ಮಾಡುವಂತಹವು” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಆನ್‌ಲೈನ್‌ ಬೆಟ್ಟಿಂಗ್

“ಮಂಡ್ಯ ತಾಲೂಕು ಸೇರಿದಂತೆ ಜಿಲ್ಲೆಯಲ್ಲಿ ವ್ಯಾಪಕವಾಗಿರುವ ಕ್ರಿಕೆಟ್ ಬೆಟ್ಟಿಂಗ್ ಗದ್ದೆ ಬಯಲುಗಳಲ್ಲಿ ಅಕ್ರಮವಾಗಿ ನಡೆಯುತ್ತಿರುವ ಇಸ್ಪೀಟು ಜೂಜುಗಳು ನಗರ ಹಾಗೂ ಗ್ರಾಮೀಣಾ ಭಾಗದ ಸಾವಿರಾರು ಯುವಕರನ್ನು ಲಕ್ಷಾಂತರ ರೂಪಾಯಿ ಸಾಲದ ಬಲೆಗೆ ಕೆಡವಿವೆ. ಮೃತ ತ್ಯಾಗ ಎಂಬಾತನೂ ಕೂಡಾ ಈ ರೀತಿಯ ಕರಾಳ ದಂಧೆಗೆ ಸಿಲುಕಿ ಸರಿಸುಮಾರು ಒಂದೂವರೆ ಕೋಟಿ ರೂಪಾಯಿ ಸಾಲದ ಬಲೆಗೆ ಸಿಲುಕಿದ್ದ. ಕೊನೆಗೆ ಬೆಟ್ಟಿಂಗ್ ದಂಧೆಕೋರರು, ಇಸ್ಪೀಟು ಜೂಜು ಮಾಫಿಯದವರ ಒತ್ತಡ ತಾಳಲಾರದೆ ಆತ್ಮಹತ್ಯೆಗೆ ಶರಣಾಗಿದ್ದಾನೆ” ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

“ಮಂಡ್ಯ ಜಿಲ್ಲೆಯಲ್ಲಿ ಅತ್ಯಂತ ವ್ಯವಸ್ಥಿತ ಹಾಗೂ ಸಂಘಟಿತವಾಗಿ ನಡೆಯುತ್ತಿರುವ ಕ್ರಿಕೆಟ್ ಬೆಟ್ಟಿಂಗ್ ಮತ್ತು ಗದ್ದೆ ಬಯಲುಗಳ ಜೂಜು ಅಡ್ಡೆಗಳಿಗೆ ರಾಜಕೀಯ ನಾಯಕರು, ಪೊಲೀಸ್ ಇಲಾಖೆಯೇ ಮಹಾ ಪೋಷಕರೆಂಬ ಮಾತು ಸಾರ್ವಜನಿಕ ವಲಯದಲ್ಲಿ ಚರ್ಚೆಯಲ್ಲಿರುವುದು ಸುಳ್ಳೇನಲ್ಲ. ಈ ದಂಧೆಕೋರರಿಂದ ನಿಯಮಿತವಾದ ಕಪ್ಪ ಕಾಣಿಕೆ ಪೋಲಿಸ್ ಠಾಣೆಗಳಿಗೆ ಸಂದಾಯವಾಗುತ್ತಿರುವುದರಿಂದಲೇ ಈ ಧಂಧೆಗಳನ್ನು ಸುಗಮವಾಗಿ ನಡೆಸಲು ಸಾಧ್ಯವಾಗಿದೆ. ಇದಲ್ಲದೆ ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ ವ್ಯಾಪಕವಾಗಿರುವ ಅಕ್ರಮ ಮದ್ಯ ಮಾರಾಟ, ಹುಕ್ಕಾ ಸರಬರಾಜು ನಾಗರಿಕ ಸಮಾಜವನ್ನು ದಿಗ್ಬ್ರಮೆ ಹುಟ್ಟಿಸುವಂತೆ ಮಾಡಿದೆ” ಎಂದು ಕಿಡಿಕಾರಿದರು.

“ಮಂಡ್ಯದ ರೈತರು ಕೃಷಿ ನಷ್ಟದ ಜತೆಗೆ ವ್ಯವಸ್ಥೆ ಸೃಷ್ಟಿಸಿರುವ ಈ ಹೊಡೆತದಿಂದಲೂ ಬಲಿಪಶುವಾಗುತ್ತಿದ್ದಾರೆ. ಈ ದಂಧೆಕೋರರ ಹಾವಳಿಯಿಂದ ರೈತಾಪಿಗಳು ತಮ್ಮ ವಂಶಪಾರಂಪರ್ಯ ಕೃಷಿ ಭೂಮಿಯನ್ನು ಕಳೆದುಕೊಳ್ಳುವಂತಹ ಸ್ಥಿತಿ ಸೃಷ್ಟಿಯಾಗಿದೆ. ಸಾವಿರಾರು ಯುವಕರು ಊರು ತೊರೆಯುವಂತೆ ಇಲ್ಲವೆ ಆತ್ಮಹತ್ಯೆಯ ದಾರಿ ಹಿಡಿಯುವಂತಹ ವಾತಾವರಣ ನಿರ್ಮಾಣವಾಗಿದೆ. ನಾಗರಿಕರಿಗೆ ಆತ್ಮವಿಶ್ವಾಸ ತುಂಬಬೇಕಿರುವ ಇಲಾಖೆಯೇ ಅಪಾದಿತರ ಜತೆ ನಿಂತಿರುವುದು ನಾಚಿಕೆಗೇಡಿನ ಪರಮಾವಧಿಯಾಗಿದೆ” ಎಂದರು.

“ಬೂದನೂರು ಯುವಕನ ಆತ್ಮಹತ್ಯೆ ಘಟನೆಯಲ್ಲಿ ಪೊಲೀಸರ ವೈಫಲ್ಯದ ಕಾರಣಕ್ಕೆ ಗ್ರಾಮಾಂತರ ಠಾಣೆ ಅರಕ್ಷಕ ನಿರೀಕ್ಷಕರನ್ನು ಅಮಾನತು ಮಾಡಬೇಕು. ಈ ಮೂಲಕ ಬೆಟ್ಟಿಂಗ್ ಹಾಗೂ ಜೂಜು ಮಾಫಿಯಾಕ್ಕೆ ಬಲವಾದ ಸಂದೇಶ ರವಾನಿಸಬೇಕು” ಎಂದು ಆಗ್ರಹಿಸಿದರು.

“ಬೆಟ್ಟಿಂಗ್ ದಂಧೆಕೋರರು ಹಾಗೂ ಗದ್ದೆ ಬಯಲು ಜೂಜೂಕೋರರರನ್ನು ಮುಂದಿನ ಹದಿನೈದು ದಿನಗಳೊಳಗೆ ತಹಬದಿಗೆ ತರಬೇಕು. ತಪ್ಪಿದಲ್ಲಿ ಮಂಡ್ಯ ಜಿಲ್ಲೆಯಲ್ಲಿ ವಿವಿಧ ಸಂಘಟನೆಗಳೊಗೂಡಿ ಅನಿರ್ದಿಷ್ಟಾವಧಿ ಧರಣಿ ಆರಂಭಿಸಲಾಗುವುದು” ಎಂದು ಪ್ರತಿಭಟನಾನಿರತರು ಎಚ್ಚರಿಕೆ ನೀಡಿದರು.

“ಮಂಡ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಬೆಟ್ಟಿಂಗ್, ಜೂಜಾಟ, ಮಾದಕ ವಸ್ತು ಜಾಲದ ವಿರುದ್ದ ಪ್ರಗತಿಪರ ಸಂಘಟನೆಗಳ ಇಂದು ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಡಾ ಕುಮಾರ ಅವರು ಸಂಜೆ 4 ಗಂಟೆಗೆ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ತುರ್ತು ಸಭೆ ಕರೆದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಗಂಡನನ್ನೇ ಕೊಂದ ಪ್ರಕರಣ; ಹಣದ ಪ್ರಭಾವದಿಂದ ಕೇಸ್‌ ಮುಚ್ಚಿಹಾಕುವ ಹುನ್ನಾರ

“ಬೆಟ್ಟಿಂಗ್ ದಂಧೆಯಿಂದ ನೊಂದಿರುವವರು, ಇದರ ಬಗ್ಗೆ ಮಾಹಿತಿ ಇರುವವರು, ಇತರೆ ಸಮಸ್ಯೆಗಳನ್ನು ಎದುರಿಸುತ್ತಿರುವವರು ಸಭೆಯಲ್ಲಿ ನೇರವಾಗಿ ಜಿಲ್ಲಾಧಿಕಾರಿ ಅಥವಾ ಎಸ್‌ಪಿಯವರಿಗೆ ದೂರು ನೀಡಬಹುದು” ಎಂದು ತಿಳಿಸಲಾಗಿದೆ.

ಸಭೆಯಲ್ಲಿ ಜಿ ಪಂ ಸಿಇಒ ಸೇರಿದಂತೆ ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರು, ಪ್ರಜ್ಞಾವಂತ ನಾಗರಿಕರು ಭಾಗವಹಿಸಿದ್ದಾರೆ.

ಕರುನಾಡು ಸೇವಕರು ಸಂಘಟನೆಯ ವಿಭಾಗೀಯ ಅಧ್ಯಕ್ಷ ಎಂ ಬಿ ನಾಗಣ್ಣ, ನಗರ ಸಂಚಾಲಕ ಚಂದ್ರು, ಮೃತನ ತಂದೆ ಮಾದಪ್ಪ, ಚಿತ್ರಕೂಟದ ಅರವಿಂದ ಪ್ರಭು, ಕೆಂಪೇಗೌಡ ಒಕ್ಕಲಿಗರ ಸಂಘದ ಸತ್ಯಮೂರ್ತಿ, ಸಿಐಟಿಯು ಸಿ ಕುಮಾರಿ, ಕೃಷ್ಣೇಗೌಡ, ಬೂದನೂರು ಸತೀಶ್, ವಕೀಲ ರಾಮಯ್ಯ, ಬಾಬು, ಅಲ್ ಇಂಡಿಯಾ ಲಾಯರ್ಸ್ ಯೂನಿಯನ್ ಮಂಡ್ಯ ಜಿಲ್ಲಾಧ್ಯಕ್ಷ ಬಿ ಟಿ ವಿಶ್ವನಾಥ್, ರೈತ ಸಂಘದ ತಾಲೂಕು ಅಧ್ಯಕ್ಷ ಚಂದ್ರು‌ಶಿವಳ್ಳಿ, ಕರ್ನಾಟಕ ರಕ್ಷಣಾ ವೇದಿಕೆ (ಶಿವರಾಮೇಗೌಡ ಬಣ) ಜಿಲ್ಲಾಧ್ಯಕ್ಷ ಹೆಚ್ ಡಿ ಜಯರಾಂ, ರೈತರ ಶಾಲೆ ಸಂಸ್ಥಾಪಕ ಪ್ರೊ ಸತ್ಯಮೂರ್ತಿ ಗಂಜಾಂ ಸೇರಿದಂತೆ ರೈತ ಸಂಘದ ಕಾರ್ಯಕರ್ತರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...