ಮಂಡ್ಯ | ಪ್ರವಾದಿ ಮಹಮ್ಮದ್ ಲೇಖನ ಸಂಕಲನ ಪುಸ್ತಕ ಬಿಡುಗಡೆ ಮಾಡಿದ ನಿರ್ಮಲಾನಂದ ಸ್ವಾಮೀಜಿ

Date:

ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕು ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸೀರತ್ ಅಭಿಯಾನದ ಪ್ರಯುಕ್ತ ಪ್ರವಾದಿ ಮುಹಮ್ಮದ್(ಸ) ಲೇಖನ ಸಂಕಲನ ಪುಸ್ತಕವನ್ನು ನಿರ್ಮಲಾನಂದ ಸ್ವಾಮೀಜಿಯವರು ಬಿಡುಗಡೆಗೊಳಿಸಿ, ವಿಚಾರ-ವಿನಿಮಯ ನಡೆಸಿದರು.

ದೇಶದಾದ್ಯಂತ ನೂರಾರು ಕಡೆಗಳಲ್ಲಿ ವ್ಯಾಪಿಸಿರುವ ಆದಿಚುಂಚನಗಿರಿ ಶಾಖಾ ಮಠಗಳ ಮೂಲ ಮಠದಲ್ಲಿ ಸೀರತ್ ಅಭಿಯಾನದ ಕೊನೆಯ ದಿನದ ಭಾಗವಾಗಿ ಜಮಾಅತೆ ಇಸ್ಲಾಮೀ ಹಿಂದ್ ಮೈಸೂರು ವಲಯ ಸ್ಥಾನೀಯ ಘಟಕದಿಂದ ಮಠದ ಸ್ವಾಮೀಜಿ ನಿರ್ಮಲಾನಂದ ಸ್ವಾಮೀಜಿಯವರನ್ನು ಸಂದರ್ಶಿಸಲಾಯಿತು.

ಸೀರತ್ ಅಭಿಯಾನ ಪ್ರಯುಕ್ತ ಶಾಂತಿ ಪ್ರಕಾಶನ ಹೊರತಂದಿರುವ “ಪ್ರವಾದಿ ಮುಹಮ್ಮದ್(ಸ) ಲೇಖನ ಸಂಕಲನ” ಪುಸ್ತಕವನ್ನು ನೀಡಿ ಮಾಹಿತಿ ನೀಡಲಾಯಿತು. ಬಳಿಕ ಸ್ವಾಮೀಜಿಯವರು ಪುಸ್ತಕ ಬಿಡುಗಡೆ ಮಾಡಿ ಶುಭ ಹಾರೈಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿವಿಧ ಪ್ರವಾದಿಗಳ ಬಗ್ಗೆ ಹಾಗೂ ವಿಶೇಷವಾಗಿ ಪ್ರವಾದಿ ಮುಹಮ್ಮದ್(ಸ)ರ ಕುರಿತು ಸುಮಾರು ಅರ್ಧ ಗಂಟೆಗಳ ಕಾಲ ತಮ್ಮ ಪೀಠದಲ್ಲಿ ಕುಳಿತುಕೊಂಡು ಸಂದರ್ಶಕರ ಸಮ್ಮುಖದಲ್ಲಿ ವಿಚಾರ ವಿನಿಮಯ ನಡೆಸಿದರು.

ಇದನ್ನು ಓದಿದ್ದೀರಾ? ಮಂಡ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ಹಾವಳಿ: ಬಡ ಮಹಿಳೆಯರ ಬದುಕಿಗೆ ಬೆಂಕಿ

ಜಮಾಅತ್ ತಂಡದಲ್ಲಿ ಮೈಸೂರು ವಲಯ ಸಂಚಾಲಕ ಅಬ್ದುಸ್ಸಲಾಂ ಉಪ್ಪಿನಂಗಡಿ, ಮೈಸೂರು ಸ್ಥಾನೀಯ ಉಪಾಧ್ಯಕ್ಷ ಅಸಾದುಲ್ಲಾ, ಸದಸ್ಯರಾದ ಅಬ್ದುಲ್ ವಾಹಿದ್ ಅಲಿ, ಫಯಾಝ್ ಮಲಿಕ್ ಹಾಗೂ ಪತ್ರಕರ್ತ ಮೋಹನ್ ಮೈಸೂರು ಉಪಸ್ಥಿತರಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...