ಮಂಡ್ಯ | ದೇವನಹಳ್ಳಿ ರೈತ-ಹೋರಾಟಗಾರರ ಮೇಲೆ ಸರ್ಕಾರದ ದರ್ಪ ಖಂಡಿಸಿ ಪ್ರತಿಭಟನೆ

Date:

ದೇವನಹಳ್ಳಿಯಲ್ಲಿ ರೈತರು ಮತ್ತು ರಾಜ್ಯದ ಚಳವಳಿ ಮುಂದಾಳುಗಳ ಮೇಲೆ ನಡೆದ, ಪೊಲೀಸ್ ದಬ್ಬಾಳಿಕೆ, ಬಂಧನ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಯನ್ನು ಖಂಡಿಸಿ ಮಂಡ್ಯದಲ್ಲಿ ಪ್ರಗತಿಪರ ಸಂಘಟನೆಗಳು ಹಾಗೂ ನಾಗರಿಕರು ಪ್ರತಿಭಟನೆ ನಡೆಸಿದ್ದಾರೆ.

ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಹೋರಾಟಗಾರರು ಮತ್ತು ನಾಗರಿಕರು, “ಶಾಂತಿಯುತವಾಗಿ ನಡೆದಿದ್ದ ದೇವನಹಳ್ಳಿ ರೈತರ ಪ್ರತಿಭಟನೆಯನ್ನು ಸರ್ಕಾರವು ವಿಪರೀತ ಪೊಲೀಸ್ ಬಲ ಬಳಸಿ ಹತ್ತಿಕ್ಕುವ ಪ್ರಯತ್ನ ಮಾಡಿದೆ. ಮಹಿಳೆಯರು-ಮಕ್ಕಳನ್ನೂ ಒಳಗೊಂಡು ಎಲ್ಲ ಮುಂದಾಳುಗಳನ್ನೂ ಅನಾಗರಿಕವಾಗಿ ಎಳೆದಾಡಿ ವಶಕ್ಕೆ ಪಡೆದಿದೆ” ಎಂದು ಅಕ್ಷಮ್ಯ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಶಾಂತಿಯುತ ಪ್ರತಿಭಟನಾ ಸಮಾವೇಶದ ಮೇಲೆ ನಡೆಸಲಾಗಿರುವ ಪೊಲೀಸ್ ದೌರ್ಜನ್ಯ ಮತ್ತು ಕೃಷಿಭೂಮಿಯನ್ನು ರೈತರಿಂದ ಒತ್ತಾಯಪೂರ್ವಕವಾಗಿ ಕಸಿಯುವ ಸರ್ಕಾರದ ಕಾರ್ಪೊರೇಟ್ ಪರ ನೀತಿಗಳ ವಿರುದ್ಧ ಹೋರಾಟ ಮುಂದುವರೆಯಲಿದೆ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಲೇಖನ ಓದಿದ್ದೀರಾ?: ಅಧಿಕಾರಸ್ಥರು ಅನ್ನ ತಿನ್ನುವವರೇ ಆದರೆ, ಭೂ ಸ್ವಾಧೀನ ಕೈಬಿಡಲಿ

“ಅಭಿವೃದ್ಧಿ ಹೆಸರಲ್ಲಿ ರಿಯಲ್ ಎಸ್ಟೇಟ್ ಧಂಧೆಕೋರ ಬಂಡವಾಳಿಗರಿಗೆ ಲಾಭ ಮಾಡಿಕೊಡಲು, ಕೃಷಿ-ರೈತರ ಬದುಕನ್ನು ನಾಶ ಮಾಡಿ ಅಸಂಖ್ಯಾತ ರೈತ ಸಮುದಾಯವನ್ನು ಬೀದಿಪಾಲು ಮಾಡಲು ಹೊರಟಿರುವುದು ಸರ್ಕಾರದ ಹೀನ ನಡೆ. ರೈತರು, ದಲಿತರು, ಅಲ್ಪಸಂಖ್ಯಾತರ ಪರವಾಗಿ ಕೆಲಸ ಮಾಡುತ್ತೇವೆಂದು ಅಧಿಕಾರಕ್ಕೆ ಬಂದ ರಾಜ್ಯ ಕಾಂಗ್ರೆಸ್ ಸರ್ಕಾರ, ಚನ್ನರಾಯಪಟ್ಟಣ ಹೋಬಳಿಯ 13 ಗ್ರಾಮದ ಭೂಮಿಯನ್ನು ಬಂಡವಾಳಿಗರ ಒಪ್ಪಿಸಲು ನಾಚಿಕೆಡಿನ ಸಂಗತಿ. ರೈತ, ಕಾರ್ಮಿಕ, ದಲಿತ, ಮಹಿಳಾ ಹಾಗೂ ಜನ ವಿರೋಧಿ ಸರ್ಕಾರಗಳ ತುಂಬಾ ದಿನ ಅಧಿಕಾರ ನಡೆಸಲು ಸಾಧ್ಯವಿಲ್ಲ. ಈ ನೆಲ ಇಂತಹ ದರ್ಪ ದೌರ್ಜನ್ಯವನ್ನು ಮೆಟ್ಟಿ ನಿಂತ ಇತಿಹಾಸವನ್ನು ನೋಡಿದೆ. ಸಿದ್ದರಾಮಯ್ಯ ಸರ್ಕಾರ ಮುಂದಿನ ಪರಿಣಾಮ ಎದುರಿಸಲು ಸಿದ್ದವಾಗಬೇಕಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

ಹಕ್ಕೊತ್ತಾಯಗಳು;

  1. ಹೋರಾಟಗಾರರೊಂದಿಗೆ ಹೀನಾಯವಾಗಿ ವರ್ತಿಸಿ ಅನಗತ್ಯ ಬಲಪ್ರಯೋಗ ಮಾಡಿದ ಡಿಸಿಪಿ ಸಜಿತ್ ಅವರನ್ನು ಸಸ್ಪೆಂಡ್ ಮಾಡಬೇಕು. ಡಿಸಿಪಿ ಮತ್ತು ಪೊಲೀಸ್ ಅತಿರೇಕದ ವರ್ತನೆಯ ಕುರಿತು ನ್ಯಾಯಾಂಗ ತನಿಖೆ ನಡೆಸಬೇಕು.
  2. ಕೂಡಲೇ ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಣ ಹೋಬಳಿಯಲ್ಲಿ ಭೂಸ್ವಾಧೀನ ಪ್ರಕ್ರಿಯೆಯನ್ನು ಕೈಬಿಡಬೇಕು. ಇಲ್ಲವೇ ಹೋರಾಟಗಾರರೆಲ್ಲರನ್ನೂ ಜೈಲಿಗೆ ಹಾಕಬೇಕು. (ಯಾರು ಜಾಮೀನು ಪಡೆಯುವುದಿಲ್ಲ)

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...